PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ನಂಜನಗೂಡು ದೊಡ್ಡ ಜಾತ್ರೆ ಹಿನ್ನೆಲೆ ತಾಂಡವಪುರದಲ್ಲಿ ಭಕ್ತಾದಿಗಳಿಗೆ ಮಜ್ಜಿಗೆ-ಪಾನಕ ವಿತರಣೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮಂಡ್ಯ > ನಂಜನಗೂಡು ದೊಡ್ಡ ಜಾತ್ರೆ ಹಿನ್ನೆಲೆ ತಾಂಡವಪುರದಲ್ಲಿ ಭಕ್ತಾದಿಗಳಿಗೆ ಮಜ್ಜಿಗೆ-ಪಾನಕ ವಿತರಣೆ
ಮಂಡ್ಯಮುಖಪುಟ

ನಂಜನಗೂಡು ದೊಡ್ಡ ಜಾತ್ರೆ ಹಿನ್ನೆಲೆ ತಾಂಡವಪುರದಲ್ಲಿ ಭಕ್ತಾದಿಗಳಿಗೆ ಮಜ್ಜಿಗೆ-ಪಾನಕ ವಿತರಣೆ

Prathinidhi News
Last updated: March 31, 2026 1:32 pm
Prathinidhi News
Published March 31, 2026
Share
SHARE

ತಾಂಡವಪುರ, ಮಾರ್ಚ್‌ 31, 2026 : ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿಯಾದ ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿಯ ಪಂಚ ಮಹಾರಥೋತ್ಸವ ಹಾಗೂ ದೊಡ್ಡ ಜಾತ್ರೆಯ ಅಂಗವಾಗಿ, ತಾಂಡವಪುರ ಗ್ರಾಮದಲ್ಲಿ ಭಕ್ತಾದಿಗಳಿಗೆ ಮಜ್ಜಿಗೆ ಮತ್ತು ಪಾನಕ ವಿತರಿಸುವ ಮೂಲಕ ಲೋಕ ಕಲ್ಯಾಣಾರ್ಥವಾಗಿ ಸೇವೆ ಸಲ್ಲಿಸಲಾಯಿತು.

ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ತಾಂಡವಪುರ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಎಂ. ರಾಮು ಅವರ ಮಾರ್ಗದರ್ಶನದಲ್ಲಿ ಹಾಗೂ ಅವರ ಪುತ್ರ, ಕಾಂಗ್ರೆಸ್ ಯುವ ಮುಖಂಡ ಬಿ.ಆರ್. ರಾಕೇಶ್ ಅವರ ನೇತೃತ್ವದಲ್ಲಿ ಈ ಧಾರ್ಮಿಕ ಸೇವಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಮೈಸೂರು-ನಂಜನಗೂಡು-ಊಟಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಬಿ.ಎಂ. ರಾಮು ಅವರ ನಿವಾಸದ ಬಳಿ ಆಯೋಜನೆಗೊಂಡಿದ್ದ ಈ ಕಾರ್ಯಕ್ರಮದಲ್ಲಿ, ರಥೋತ್ಸವಕ್ಕೆ ತೆರಳುತ್ತಿದ್ದ ಹಾಗೂ ಜಾತ್ರೆ ಮುಗಿಸಿ ಹಿಂತಿರುಗುತ್ತಿದ್ದ ಸಾವಿರಾರು ಭಕ್ತಾದಿಗಳು ಭಾಗವಹಿಸಿದ್ದರು. ಮಾರ್ಚ್ 30ರ ಸುಡು ಬಿಸಿಲಿನ ತಾಪಕ್ಕೆ ಹೈರಾಣಾಗಿದ್ದ ಪ್ರಯಾಣಿಕರು ಮತ್ತು ಭಕ್ತರು ತಂಪಾದ ಮಜ್ಜಿಗೆ ಹಾಗೂ ಪಾನಕವನ್ನು ಸೇವಿಸಿ ದಣಿವು ಆರಿಸಿಕೊಂಡರು. ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದ ಭಕ್ತರಿಗೂ ಸಹ ಮುಖಂಡರು ವಾಹನಗಳ ಬಳಿಯೇ ತೆರಳಿ ಪಾನೀಯ ವಿತರಿಸಿ ದೇವರ ಕೃಪೆಗೆ ಪಾತ್ರರಾದರು.

- ಜಾಹೀರಾತು -

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ನಂಜುಂಡೇಶ್ವರನ ದೊಡ್ಡ ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸುವುದರಿಂದ ಅವರಿಗೆ ದಾಹ ನೀಗಿಸುವ ಸಣ್ಣ ಪ್ರಯತ್ನ ಇದಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಎಂ. ರಾಮು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ. ಮಹದೇವ್, ಪಿ.ಎ.ಸಿ.ಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಿ.ಎಂ. ನಾಗರಾಜು ದಣಿ, ಕಾಂಗ್ರೆಸ್ ಯುವ ಮುಖಂಡ ಬಿ.ಆರ್. ರಾಕೇಶ್, ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಟಿ. ಚಂದ್ರು, ಗ್ರಾಮ ಪಂಚಾಯಿತಿ ಸದಸ್ಯ ಪ್ರಭುಸ್ವಾಮಿ ಉಪಸ್ಥಿತರಿದ್ದರು.

ಅಲ್ಲದೆ, ಪಿ.ಎ.ಸಿ.ಸಿ ಬ್ಯಾಂಕ್ ಮಾಜಿ ನಿರ್ದೇಶಕ ಬಿ.ಬಿ. ಕುಮಾರ್, ಶಿವರಾಜು ಬಿ., ಪುಟ್ಟಸ್ವಾಮಿ, ಕಾರ್ಮಿಕ ಮುಖಂಡ ಶಂಕರ್, ಪುಟ್ಟರಾಜು, ರವಿ, ನಾರಾಯಣ, ವಿನಯ್ ಹಾಗೂ ವೀರಶೈವ ಮುಖಂಡ ಕುಮಾರ್ ಸೇರಿದಂತೆ ಗ್ರಾಮದ ಹಿರಿಯರು ಮತ್ತು ನೂರಾರು ಕಾರ್ಯಕರ್ತರು ಈ ಜನಸೇವೆಯಲ್ಲಿ ಕೈಜೋಡಿಸಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟಸಿನಿಮಾ

ನಟ ಯಶ್ ಗೆ ಮೇಲಿಂದ ಮೇಲೆ ಸಂಕಷ್ಟ ; ಯಶ್ ಮನೆ ಮುಂದೆ ಬ್ಯಾನರ್ ಕಟ್ಟಿದ ವಿಚಾರಕ್ಕೆ ಎಫ್ ಐ ಆರ್ ದಾಖಲು

January 14, 2026
ಮುಖಪುಟಮೈಸೂರು ನಗರರಾಜಕೀಯ

ಮೈಸೂರು: ಭಕ್ತ ಕನಕದಾಸರ ಜಯಂತಿ ಅದ್ದೂರಿ ಆಚರಣೆ

November 8, 2025
ಮುಖಪುಟಮೈಸೂರು ನಗರ

ಕೌನ್ಸಿಲ್‌ ಪ್ರಕ್ರಿಯೆ ತಡೆಗೆ ಆಗ್ರಹ : ನಾಳೆಯಿಂದ ಅತಿಥಿ ಉಪನ್ಯಾಸಕರ ಅನಿರ್ಧಿಷ್ಟಾವಧಿ ಪ್ರತಿಭಟನೆ !

December 2, 2025
ಮುಖಪುಟಮೈಸೂರು ನಗರ

ಮೈಸೂರು: ಶಾಸಕ ಹರೀಶ್ ಗೌಡರಿಂದ ಮಡಿವಾಳ ಮಾಚಿದೇವರ ಜಯಂತಿ ಆಚರಣೆ; ಪ್ರಸಾದ ವಿತರಣೆ

February 2, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?