PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಕುಡಿಯುವ ನೀರಿಗೆ ಯಾವುದೇ ಕೊರತೆ ಆಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ – ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಕುಡಿಯುವ ನೀರಿಗೆ ಯಾವುದೇ ಕೊರತೆ ಆಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ – ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ
ಮುಖಪುಟಮೈಸೂರು ನಗರ

ಕುಡಿಯುವ ನೀರಿಗೆ ಯಾವುದೇ ಕೊರತೆ ಆಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ – ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ

Prathinidhi News
Last updated: February 10, 2026 3:30 pm
Prathinidhi News
Published February 10, 2026
Share
SHARE

ಮೈಸೂರು, ಫೆಬ್ರವರಿ 10, 2026 ಬೇಸಿಗೆ ಕಾಲ ಆರಂಭವಾಗಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಕೊರತೆ ಆಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೆ ಆರ್ ಎಸ್, ಕಬಿನಿ ಅಣೆಕಟ್ಟುಗಳಲ್ಲಿ ಇರುವ ನೀರಿನ ಲಭ್ಯತೆಯ ಮಾಹಿತಿಯನ್ನು ಪಡೆದ ಅವರು ಜೂನ್ ಅಂತ್ಯದ ವರೆಗೆ ಅಣೆಕಟ್ಟುಗಳಲ್ಲಿ ಇರುವ ನೀರಿನ ಪ್ರಮಾಣ ಸಾಕಾಗುತ್ತದೆ. ಕಬಿನಿ ಅಣೆಕಟ್ಟಿನಿಂದ ಕುಡಿಯುವ ನೀರಿಗೆ ಅಗತ್ಯವಿದ್ದಾಗ ಕಬಿನಿಯಿಂದ ಚಾನೆಲ್ ಮೂಲಕ ನೀರನ್ನು ಕಾಲ ಕಾಲಕ್ಕೆ ಹರಿಸಿ ಕುಡಿಯುವ ನೀರನ್ನು ಪೂರೈಸುವಂತೆ ಕಬಿನಿ ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಹಶೀಲ್ದಾರರು ತಾಲ್ಲೂಕು ಮಟ್ಟದಲ್ಲಿ ಪ್ರತಿ ವಾರ ಕುಡಿಯುವ ನೀರಿನ ನಿರ್ವಹಣೆ ಕುರಿತು ಗ್ರಾಮೀಣ ಕುಡಿಯುವ ನೀರಿನ ಇಲಾಖೆ ಅಧಿಕಾರಿಗಳು ಹಾಗೂ ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳು ಸೇರಿ ಸಭೆ ನಡೆಸಬೇಕು ಎಂದು ಸೂಚನೆ ನೀಡಿದರು.

ಬೇಸಿಗೆ ಕಾಲ ಆರಂಭವಾಗಿದ್ದು, ಕಾಡ್ಗಿಚ್ಚು ಸಂಭವಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೈಗೊಳ್ಳಬೇಕು. ಕಳೆದ ವರ್ಷ ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ಬಾರಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದು ಸೂಚನೆ ನೀಡಿದರು.

- ಜಾಹೀರಾತು -

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಳಾದ ಎಸ್ ಯುಕೇಶ್ ಕುಮಾರ್ ಅವರು ಮಾತನಾಡಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಬರಬಹುದಾದ ಗ್ರಾಮಗಳನ್ನು ಗುರುತಿಸಿಕೊಳ್ಳಿ. ಕುಡಿಯುವ ನೀರಿನ ಸಮಸ್ಯೆ ಉಂಟಾದ ನಂತರ ಕ್ರಮ ವಹಿಸುವ ಬದಲು ಮೊದಲೇ ಕ್ರಮ ವಹಿಸಬೇಕು. ನೀರಿನ ನಲ್ಲಿ ಗಳಿಗೆ ಆಫ್ ಅಂಡ್ ಆನ್ ಕ್ಯಾಪ್ ಗಳನ್ನು ಅಳವಡಿಸಬೇಕು ಎಂದು ಸೂಚನೆ ನೀಡಿದ ಅವರು ಅಗತ್ಯ ವಿದ್ದರೆ ಕೊಳವೆ ಬಾವಿಗಳನ್ನು ಕೊರೈಸಲು ಕ್ರಮ ವಹಿಸಲಾಗುವುದು ಎಂದರು.

ಸಭೆಯಲ್ಲಿ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶೇಕ್ ತನ್ವೀರ್ ಆಸಿಫ್, ಅಪರ ಜಿಲ್ಲಾಧಿಕಾರಿ ಗಳಾದ ಡಾ. ಪಿ ಶಿವರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಹೊಸ ವರ್ಷದ ಸಂಭ್ರಮ ; . ಯೋಗ ನರಸಿಂಹಸ್ವಾಮಿ ದೇಗುಲದಲ್ಲಿ ಜನಜಂಗುಳಿ.. 2 ಲಕ್ಷ ಲಡ್ಡು ವಿತರಣೆ..

January 1, 2026
ಮುಖಪುಟಮೈಸೂರು ನಗರ

ಹೀಲಿಯಂ ಸಿಲಿಂಡರ್‌ ಸ್ಪೋಟ ಪ್ರಕರಣ : ಮೃತರ ಸಂಖ್ಯೆ 3ಕ್ಕೆ ಏರಿಕೆ

December 27, 2025
ನಂಜನಗೂಡುಮುಖಪುಟ

ನಂಜನಗೂಡು: “ಉತ್ತಮ ಗುಣಮಟ್ಟದ ರಸ್ತೆ ಮಾಡಿ, ಇಲ್ಲದಿದ್ರೆ ನಿಲ್ಲಿಸಿ” ; ಕಳಪೆ ಕಾಮಗಾರಿ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು

November 17, 2025
ಕ್ರೈಂ ಸುದ್ದಿಗಳುಬೆಂಗಳೂರುಮುಖಪುಟ

ಬೆಂಗಳೂರಿನಲ್ಲಿ 18 ಕೋಟಿ ದರೋಡೆ : ಕೆಲಸಕ್ಕೆ ಸೇರಿದ 20 ದಿನದಲ್ಲೇ ಕೈಚಳಕ ತೋರಿಸಿದ ದಂಪತಿ

January 28, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?