PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಬೇಸಿಗೆ ಪ್ರಾರಂಭವಾಗುತ್ತಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ: ಡಾ: ಹೆಚ್.ಸಿ.ಮಹದೇವಪ್ಪ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಬೇಸಿಗೆ ಪ್ರಾರಂಭವಾಗುತ್ತಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ: ಡಾ: ಹೆಚ್.ಸಿ.ಮಹದೇವಪ್ಪ
ಮುಖಪುಟಮೈಸೂರು ನಗರರಾಜಕೀಯ

ಬೇಸಿಗೆ ಪ್ರಾರಂಭವಾಗುತ್ತಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ: ಡಾ: ಹೆಚ್.ಸಿ.ಮಹದೇವಪ್ಪ

Prathinidhi News
Last updated: March 2, 2026 4:48 pm
Prathinidhi News
Published March 2, 2026
Share
SHARE

ಮೈಸೂರು, ಮಾರ್ಚ್‌ 2, 2026 : ಬೇಸಿಗೆ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕುಡಿಯುವ ನೀರಿನ ಪೂರೈಕೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿರುವ ಟಾಸ್ಕ್ ಫೋರ್ಸ್ ಸಮಿತಿಗಳು ಕ್ರಿಯಾಶೀಲವಾಗಿರಬೇಕು. ತಹಶೀಲ್ದಾರ್‌ಗಳು ತಮ್ಮ ವ್ಯಾಪ್ತಿಯಲ್ಲಿ ನೀರಿನ ತೊಂದರೆ ಉಂಟಾಗಬಹುದಾದ ಗ್ರಾಮಗಳನ್ನು ಈಗಾಗಲೇ ಪಟ್ಟಿ ಮಾಡಿಕೊಳ್ಳಬೇಕು. ಕಳೆದ ಬಾರಿ ಕೊರೆಯಲಾಗಿರುವ ಮತ್ತು ಲಭ್ಯವಿರುವ ಬೋರ್‌ವೆಲ್‌ಗಳ ಸ್ಥಿತಿಗತಿಯನ್ನು ಪರಿಶೀಲಿಸಿ, ಅವಶ್ಯಕತೆ ಬಿದ್ದಲ್ಲಿ ಖಾಸಗಿ ಬೋರ್‌ವೆಲ್‌ಗಳನ್ನು ಬಳಸಿಕೊಳ್ಳಲು ಪಟ್ಟಿ ಸಿದ್ಧವಿರಿಸಿಕೊಳ್ಳಬೇಕು. ಒಂದು ವೇಳೆ ನೀರಿನ ತೊಂದರೆ ಎದುರಾದಲ್ಲಿ ತಕ್ಷಣವೇ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಸಚಿವರು ನಿರ್ದೇಶನ ನೀಡಿದರು.

ಬೇಸಿಗೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ, ವೈದ್ಯಾಧಿಕಾರಿಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಯೋಜನೆ ರೂಪಿಸಬೇಕು ಎಂದು ತಿಳಿಸಿದರು.

- ಜಾಹೀರಾತು -

ಸಭೆಯಲ್ಲಿ ಪಾಲ್ಗೊಂಡಿದ್ದ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್, ಜೆ.ಜೆ.ಎಂ. ಹಾಗೂ ಎಂ.ವಿ.ಎಸ್ ಯೋಜನೆಗಳಡಿ ಕುಡಿಯುವ ನೀರಿನ ಪೂರೈಕೆಯ ಕಾರ್ಯನಿರ್ವಹಣೆಯನ್ನು ಅಧಿಕಾರಿಗಳು ಪರಿಶೀಲಿಸಬೇಕು. ಬರಗಾಲ ಪರಿಸ್ಥಿತಿ ಎದುರಾದರೆ ಕೈಗೊಳ್ಳಬೇಕಾದ ಕ್ರಮಗಳು ಮತ್ತು ಬೇಕಿರುವ ಅನುದಾನದ ಬಗ್ಗೆ ವರದಿ ಸಿದ್ಧಪಡಿಸಬೇಕು ಎಂದು ಸಲಹೆ ನೀಡಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ನಂಜನಗೂಡುಮುಖಪುಟ

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಭತ್ತ ಖರೀದಿ ಕೇಂದ್ರ: ನಂಜನಗೂಡಿನಲ್ಲಿ ಅನ್ನದಾತರ ಪ್ರತಿಭಟನೆ, ಹೆದ್ದಾರಿ ತಡೆ!

November 18, 2025
ಮುಖಪುಟಮೈಸೂರು ಗ್ರಾಮಾಂತರ

ಹೆಚ್.ಡಿ. ಕೋಟೆ: ಕಳಪೆ ಕಾಮಗಾರಿ ಖಂಡಿಸಿ KRIDL ಅಧಿಕಾರಿಗಳಿಗೆ ದಿಗ್ಬಂಧನ; ಗ್ರಾಮಸ್ಥರ ಆಕ್ರೋಶ

January 22, 2026
ಬೆಂಗಳೂರುಮುಖಪುಟ

ತಾಯಿ ಜೊತೆ ಜಗಳ ಮಾಡಿ, ಬೊಮ್ಮಾಯಿ ಆಪ್ತ ಕಾರ್ಯದರ್ಶಿ ಪುತ್ರ ಆತ್ಮಹತ್ಯೆ!

February 21, 2026
ಮುಖಪುಟಮುಡಾ ಹಗರಣಮೈಸೂರು ನಗರ

ಮೈಸೂರು ಮುಡಾ 50:50 ಹಗರಣಕ್ಕೆ ಮರುಜೀವ: ಸೈಟ್ ಪಡೆದವರಿಗೆ ಲೋಕಾಯುಕ್ತ ಶಾಕ್, 40 ಮಂದಿಗೆ ನೋಟಿಸ್ ಜಾರಿ

February 10, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?