PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮನವರಿಗೆ ಮೈಸೂರಿನಲ್ಲಿ ಭಾವಪೂರ್ಣ ಶ್ರದ್ಧಾಂಜಲಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮನವರಿಗೆ ಮೈಸೂರಿನಲ್ಲಿ ಭಾವಪೂರ್ಣ ಶ್ರದ್ಧಾಂಜಲಿ
ಮುಖಪುಟಮೈಸೂರು ನಗರ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮನವರಿಗೆ ಮೈಸೂರಿನಲ್ಲಿ ಭಾವಪೂರ್ಣ ಶ್ರದ್ಧಾಂಜಲಿ

Prathinidhi News
Last updated: July 21, 2026 3:53 pm
Prathinidhi News
Published July 21, 2026
Share
SHARE

ಮೈಸೂರು,ಜುಲೈ 21,2026 : ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಶ್ರೀಮತಿ ಚನ್ನಮ್ಮನವರ ನಿಧನದ ಹಿನ್ನೆಲೆಯಲ್ಲಿ, ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿ ದೇವರಾಜ ಮೊಹಲ್ಲಾದ ನಿವಾಸಿಗಳ ವತಿಯಿಂದ ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಚನ್ನಮ್ಮನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೃತರ ಆತ್ಮಕ್ಕೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಪ್ರಶಾಂತ್ ಗೌಡ ಚನ್ನಮ್ಮನವರು ಹೆಚ್.ಡಿ. ದೇವೇಗೌಡರ ಇಡೀ ಕುಟುಂಬಕ್ಕೆ ಬಹುದೊಡ್ಡ ಶಕ್ತಿಯಾಗಿದ್ದರು. ಇಡೀ ಕುಟುಂಬ ರಾಜಕೀಯವಾಗಿ ಅಪಾರ ಪ್ರಭಾವ ಹೊಂದಿದ್ದರೂ, ಅವರು ಎಲ್ಲೂ ಅದನ್ನು ದುರ್ಬಳಕೆ ಮಾಡಿಕೊಳ್ಳದೆ ಸರಳತೆ ಮೆರೆದರು. ಅವರ ಮೇಲೆ ಆಸಿಡ್ ದಾಳಿ ನಡೆದಂತಹ ಕಠಿಣ ಪರಿಸ್ಥಿತಿಯಲ್ಲೂ ಅವರು ಎದೆಗುಂದದೆ ನಿಂತರು. ಇಂದಿನ ಮಹಿಳೆಯರಿಗೆ ಅವರು ನಿಜಕ್ಕೂ ಆದರ್ಶ. ಮನೆಗೆ ಬಂದ ಯಾರೇ ಆದರೂ ಊಟ-ಉಪಚಾರ ವಿಚಾರಿಸದೆ ಕಳುಹಿಸುತ್ತಿರಲಿಲ್ಲ ಎಂದ ಪ್ರಶಾಂತ್ ಗೌಡ, ಅವರ ತ್ಯಾಗ ಮತ್ತು ಅಪಾರ ಪ್ರೀತಿಗೆ ಅವರ ಅಂತ್ಯಸಂಸ್ಕಾರದಲ್ಲಿ ಭಾಗಿಯಾದ ಸಾಗರೋಪಾದಿಯ ಜನಸ್ತೋಮವೇ ಸಾಕ್ಷಿ ಎಂದರು. ಇಂದು ರಾಜ್ಯದ ಎಲ್ಲಾ ಜನತೆಯೂ ಪಕ್ಷಾತೀತವಾಗಿ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಈ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ದೇವೇಗೌಡರು ಹಾಗೂ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಕುರುಬರ ಸಂಘದ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ , ಮುಡಾ ಮಾಜಿ ಸದಸ್ಯರು ರಮೇಶ್, ನಗರಪಾಲಿಕೆ ಮಾಜಿ ಸದಸ್ಯೆ ಪ್ರಮೀಳಾ ಭರತ್, ರವಿಕುಮಾರ್, ಹೇಮಂತ್ ಗೌಡ, ಗುರುರಾಜ್ ಶೆಟ್ಟಿ, ಜ್ಞಾನೇಶ್, ಮಂಜು, ಕಿರಣ್, ಸುವರ್ಣಮ್ಮ, ಮಂಗಳಮ್ಮ, ನಂಜುಂಡಿ, ಯೋಗೇಶ್ ಸೇರಿದಂತೆ ಅನೇಕರು ಹಾಜರಿದ್ದು ಅಂತಿಮ ನಮನ ಸಲ್ಲಿಸಿದರು.

 

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟರಾಜಕೀಯ

ರಾಜ್ಯ ರಾಜಕೀಯದಲ್ಲಿ ಸಿಎಂ ಕುರ್ಚಿ ಕದನ ತಾರಕಕ್ಕೆ ; ದಿಲ್ಲಿ ಅಂಗಳಕ್ಕೆ ಪವರ್ ಶೇರಿಂಗ್ ಪಾಲಿಟಿಕ್ಸ್ !

November 25, 2025
ಮುಖಪುಟಮೈಸೂರು ಗ್ರಾಮಾಂತರ

ಬೈಲಕುಪ್ಪೆಯಲ್ಲಿ ಖದೀಮರ ಅಟ್ಟಹಾಸ: ಹೊಸ ಮೊಬೈಲ್ ಅಂಗಡಿಗೆ ಕನ್ನ ಹಾಕಿ ಲಕ್ಷಾಂತರ ಮೌಲ್ಯದ ವಸ್ತುಗಳ ಲೂಟಿ

January 12, 2026
ನಂಜನಗೂಡುಮುಖಪುಟ

ರಸ್ತೆಯ ಹಳ್ಳ ತಪ್ಪಿಸಲು ಹೋಗಿ ಬೈಕ್ ಸವಾರ ಸಾವು: ನಂಜನಗೂಡು ಸಮೀಪ ದುರ್ಘಟನೆ

November 21, 2025
ಬೆಂಗಳೂರುಮುಖಪುಟ

ಪೋಕ್ಸೋ ಕೇಸ್ ನಲ್ಲಿ ಮುರುಘಾ ಶ್ರೀಗಳು ಖುಲಾಸೆ..! ಚಿತ್ರದುರ್ಗದ 2ನೇ ಹೆಚ್ಚುವರಿ ಕೋರ್ಟ್ ನಿಂದ ಮಹತ್ವದ ತೀರ್ಪು..!

November 26, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?