ಕರ್ನಾಟಕದಲ್ಲಿ ವಿದ್ಯುತ್ ಕೊರತೆ ಉಂಟಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿರುವ ಇಂಧನ ಸಚಿವ ಕೆ.ಜೆ. ಜಾರ್ಜ್ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್ ಸಮಸ್ಯೆ ಇಲ್ಲ ಎಂದು ಗುರುವಾರ ಹೇಳಿದ್ದಾರೆ.
ನಿರ್ವಹಣೆಗಾಗಿ ರಾಜ್ಯದಲ್ಲಿನ ಕೆಲವು ವಿದ್ಯುತ್ ಘಟಕಗಳನ್ನು ಮುಂಗಾರು ಸಮಯದಲ್ಲಿ ಮುಚ್ಚಲಾಗಿತ್ತು. ಹೀಗಾಗಿ ಅಲ್ಪಕಾಲದ ಪವರ್ ಕಟ್ ಉಂಟಾಗಿತ್ತು. ಆದರೆ ಈ ಕೊರತೆಯನ್ನು ನಾವು ನೀಗಿಸಿದ್ದೇವೆ. ರೈತರು ಬೇಡಿಕೆ ಇಟ್ಟಾಗೆಲ್ಲಾ ನಾವು ಅವರಿಗೆ ವಿದ್ಯುತ್ ಪೂರೈಕೆ ಮಾಡಿದ್ದೇವೆ. ಈಗ ಯಾವುದೇ ದೂರುಗಳಿಲ್ಲ. 5ರಿಂದ 10 ದಿನಗಳ ಕಾಲ ಮಾತ್ರ ವಿದ್ಯುತ್ ಕೊರತೆ ಉಂಟಾಗಿತ್ತು. ಆದರೆ ಅನಾವಶ್ಯಕವಾಗಿ ಈ ಬಗ್ಗೆ ರಾಜಕೀಯ ಮಾಡಲಾಗುತ್ತಿದೆ ಎಂದು ಹೇಳಿದರು.
