PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: ಚಾಮುಂಡಿ ಬೆಟ್ಟದ ಕಾಮಗಾರಿಗೆ ಹೈಕೋರ್ಟ್ ತಡೆ; ಅಧಿಕಾರಿಗಳ ವಿರುದ್ಧ ಪರಿಸರ ಹೋರಾಟಗಾರ ಪರಶುರಾಮೇಗೌಡ ವಾಗ್ದಾಳಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು: ಚಾಮುಂಡಿ ಬೆಟ್ಟದ ಕಾಮಗಾರಿಗೆ ಹೈಕೋರ್ಟ್ ತಡೆ; ಅಧಿಕಾರಿಗಳ ವಿರುದ್ಧ ಪರಿಸರ ಹೋರಾಟಗಾರ ಪರಶುರಾಮೇಗೌಡ ವಾಗ್ದಾಳಿ
ಮುಖಪುಟಮೈಸೂರು ನಗರ

ಮೈಸೂರು: ಚಾಮುಂಡಿ ಬೆಟ್ಟದ ಕಾಮಗಾರಿಗೆ ಹೈಕೋರ್ಟ್ ತಡೆ; ಅಧಿಕಾರಿಗಳ ವಿರುದ್ಧ ಪರಿಸರ ಹೋರಾಟಗಾರ ಪರಶುರಾಮೇಗೌಡ ವಾಗ್ದಾಳಿ

Prathinidhi News
Last updated: April 11, 2026 5:10 pm
Prathinidhi News
Published April 11, 2026
Share
SHARE

ಮೈಸೂರು, ಏಪ್ರಿಲ್‌ 11, 2026 : ಚಾಮುಂಡಿ ಬೆಟ್ಟದಲ್ಲಿ ಕೈಗೆತ್ತಿಕೊಂಡಿದ್ದ ‘ಪ್ರಸಾದ್’ ಯೋಜನೆಯ ಕಾಮಗಾರಿಗೆ ರಾಜ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದನ್ನು ಹಿರಿಯ ಪರಿಸರ ಹೋರಾಟಗಾರ ಪರಶುರಾಮೇಗೌಡ ಸ್ವಾಗತಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಯೋಜನೆಯಿಂದ ಬೆಟ್ಟದ ಪರಿಸರಕ್ಕೆ ಧಕ್ಕೆ ಬರುತ್ತದೆ ಎಂದು ನಾವು ಮೊದಲೇ ಹೋರಾಟ ಮಾಡಿದ್ದೆವು. ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಕೂಡ ಈ ಬಗ್ಗೆ ಪತ್ರ ಬರೆದಿದ್ದರು, ಆದರೂ ಕಾಮಗಾರಿ ಆರಂಭಿಸಿದ್ದೇಕೆ? ಎಂದು ಪ್ರಶ್ನಿಸಿದ್ದಾರೆ.

ಅಧಿಕಾರಿಗಳು ಕಮಿಷನ್ ಆಸೆಗೆ ಅಥವಾ ರಾಜಕಾರಣಿಗಳ ಒತ್ತಡಕ್ಕೆ ಮಣಿದು ಈ ನಿರ್ಧಾರ ಕೈಗೊಂಡಿದ್ದಾರೆಯೇ ಎಂಬ ಬಗ್ಗೆ ಜಿಲ್ಲಾಧಿಕಾರಿಗಳು ಸಾರ್ವಜನಿಕವಾಗಿ ಉತ್ತರ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಚಾಮುಂಡಿಬೆಟ್ಟ ಪ್ರಾಧಿಕಾರದ ಕಾರ್ಯದರ್ಶಿಯವರು ಜನಪ್ರತಿನಿಧಿಗಳಿಗೂ ಗೌರವ ನೀಡುತ್ತಿಲ್ಲ ಮತ್ತು ಪಾರದರ್ಶಕವಾಗಿ ನಡೆದುಕೊಳ್ಳುತ್ತಿಲ್ಲ. ಹುಂಡಿ ಹಣದ ಸಂಗ್ರಹದ ಬಗ್ಗೆಯೂ ಸಮರ್ಪಕ ಮಾಹಿತಿ ನೀಡುತ್ತಿಲ್ಲ ಎಂದು ಆರೋಪಿಸಿದ ಅವರು, ಸಂಸದ ಯದುವೀರ್ ಒಡೆಯರ್ ಅವರೇ ಅಧಿಕಾರಿಗಳ ವರ್ತನೆ ಬಗ್ಗೆ ಬೇಸರ ವ್ಯಕ್ತಪಡಿಸಿರುವುದನ್ನು ನೆನಪಿಸಿದರು. ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ವಲಯ ಮಾಡುವ ಘೋಷಣೆ ಕೇವಲ ಕಾಗದದ ಮೇಲೆ ಉಳಿದಿದೆ ಎಂದು ಕಿಡಿಕಾರಿದರು.

ಇದೇ ವೇಳೆ ವನ್ಯಜೀವಿಗಳ ಸಂತಾನಹರಣ ಮಾಡುವ ಸರ್ಕಾರದ ಆಲೋಚನೆಯನ್ನು ತೀವ್ರವಾಗಿ ಖಂಡಿಸಿದ ಪರಶುರಾಮೇಗೌಡರು, ಇಂತಹ ಆಲೋಚನೆ ಮಾಡಿರುವುದೇ ದುರದೃಷ್ಟಕರ. ಮೊದಲು ಭ್ರಷ್ಟ ಮತ್ತು ದುಷ್ಟ ರಾಜಕಾರಣಿಗಳಿಗೆ ಸಂತಾನಹರಣ ಮಾಡಲಿ, ಆ ಮೂಲಕ ಭ್ರಷ್ಟಾಚಾರ ನಿರ್ಮೂಲನೆಯಾಗಲಿ ಎಂದು ಆಕ್ರೋಶ ಹೊರಹಾಕಿದರು. ರಾಜ್ಯ ಸರ್ಕಾರ ತಕ್ಷಣವೇ ಇಂತಹ ಅವೈಜ್ಞಾನಿಕ ಆಲೋಚನೆಗಳಿಂದ ಹಿಂದೆ ಸರಿಯಬೇಕು ಎಂದು ಅವರು ಎಚ್ಚರಿಸಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಬ್ರೇಕ್ ಫಾಸ್ಟ್ ಮೀಟಿಂಗ್‌ಗೆ ಬೇರೆ ಅರ್ಥ ಬೇಡ, ನಮ್ಮಲ್ಲಿ ಭಿನ್ನಮತ ಇಲ್ಲ’: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

December 1, 2025
ಮುಖಪುಟ

ಅಸ್ಸಾಂ: ಸೈರಾಂಗ್‌-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ; ಸ್ಥಳದಲ್ಲೇ 7 ಆನೆಗಳ ದಾರುಣ ಸಾವು

December 20, 2025
ಮುಖಪುಟಮೈಸೂರು ಗ್ರಾಮಾಂತರ

ಮಾದಾಪುರ ಜಾತ್ರೆಯಲ್ಲಿ ‘ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ’ಕ್ಕೆ ಚಾಲನೆ: ಶಾಸಕ ಅನಿಲ್ ಚಿಕ್ಕಮಾದು ಅವರಿಂದ ಮಕ್ಕಳಿಗೆ ಮಾತ್ರೆ ವಿತರಣೆ

February 10, 2026
ಬೆಂಗಳೂರುಮುಖಪುಟ

ರಾಜ್ಯದ ಹಲವೆಡೆ ಅಲ್ಲಲ್ಲಿ ತುಂತುರು ಮಳೆ : ಜನವರಿ 15ರವರೆಗೂ ಮುಂದುವರಿಯಲಿದೆ ಇದೇ ವಾತಾವರಣ !

January 13, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?