ಪ್ರತಿನಿಧಿ ವರದಿ ಮಡಿಕೇರಿ
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಮಣ್ಣು ಮತ್ತು ಭೂಮಿಯ ಮೇಲೆ ಹವಾಮಾನ ಬದಲಾವಣೆಯ ಪರಿಣಾಮಗಳ ಬಗ್ಗೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ.
ಕರ್ನಾಟಕ ರಾಜ್ಯದ ಯಾವುದೇ ಮಂಡಳಿಯಲ್ಲಿ ಪ್ರಸ್ತುತ ದಾಖಲಾದ ಪ್ರೌಢಶಾಲಾ ವಿದ್ಯಾರ್ಥಿಗಳು ಈ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಪ್ರಬಂಧಗಳನ್ನು ಕನ್ನಡ ಅಥವಾ ಇಂಗ್ಲಿಷ್‌ನಲ್ಲಿ ಸಲ್ಲಿಸಬಹುದು. ಪ್ರತಿ ಭಾಷೆಗೆ ಒಬ್ಬ ಸ್ಪರ್ಧಿಗೆ ಕೇವಲ ಒಂದು ಪ್ರಬಂಧವನ್ನು ಮಾತ್ರ ಸಲ್ಲಿಸಲು ಅವಕಾಶವಿದೆ. ಒಂದು ನಿರ್ದಿಷ್ಟ ಭಾಷೆಯಲ್ಲಿ ಒಂದಕ್ಕಿಂತ ಹೆಚ್ಚು ಪ್ರಬಂಧಗಳನ್ನು ಸಲ್ಲಿಸಿರುವುದು ಕಂಡುಬಂದರೆ, ಅವರು ಸಲ್ಲಿಸಿದ ಎಲ್ಲಾ ಪ್ರಬಂಧಗಳನ್ನು ಅಮಾನ್ಯವೆಂದು ಪರಿಗಣಿಸಲಾಗುತ್ತದೆ.
ಪ್ರಬಂಧದ ಕೊನೆಯಲ್ಲಿ ಹೆಸರು, ವಿಳಾಸ, ಸಂಪರ್ಕ ಸಂಖ್ಯೆ, ಇ-ಮೇಲ್ ವಿವರಗಳನ್ನು ಒದಗಿಸಬೇಕು. ಪ್ರಬಂಧವನ್ನು ಸಲ್ಲಿಸಲು ಮೇ 27 ಕೊನೆಯ ದಿನಾಂಕವಾಗಿದೆ. ಮೂಲ ಪ್ರಬಂಧ ಮಾತ್ರ ಅರ್ಹ, ಬೇರೆ ಯಾವುದೇ ಸ್ಪರ್ಧೆಗಳಿಗೆ ಸಲ್ಲಿಸಿರಬಾರದು ಹಾಗೂ ಎಲ್ಲು ಪ್ರಕಟಿಸಿರಬಾರದು.
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮತ್ತು ಪರಿಸರ ಸಂಘ ಬೆಂಗಳೂರು ರಚಿಸಿದ ತಜ್ಞರ ಸಮಿತಿಯು ಪ್ರಬಂಧಗಳನ್ನು ಮೌಲ್ಯಮಾಪನ ಮಾಡುತ್ತದೆ. ಸಮಿತಿಯ ನಿರ್ಧಾರವು ಅಂತಿಮವಾಗಿರುತ್ತದೆ ಮತ್ತು ಎಲ್ಲರೂ ಇದಕ್ಕೆ ಬದ್ಧರಾಗಿರಬೇಕು.
ಪ್ರಥಮ ಬಹುಮಾನ ರೂ.5 ಸಾವಿರ, ದ್ವೀತಿಯ ರೂ.3 ಸಾವಿರ ಮತ್ತು ತೃತೀಯ ಬಹುಮಾನ ರೂ.2 ಸಾವಿರ. ಪ್ರಬಂಧವು 1000 ಪದಗಳನ್ನು ಮೀರಬಾರದು. ಇಂಗ್ಲಿಷ್‌ನಲ್ಲಿ ಏರಿಯಾಲ್ ಫಾಂಟ್ ಗಾತ್ರ 14 ಮತ್ತು ಕನ್ನಡದಲ್ಲಿ ನುಡಿ ಯೂನಿಕೋಡ್ 12 ಗಾತ್ರದಲ್ಲಿ ಟೈಪ್ ಮಾಡಿ ಕಳುಹಿಸಬೇಕು.
ಪ್ರಬಂಧದ ಹಾರ್ಡ್ ಕಾಫಿಯನ್ನು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಪ್ರೊ.ಯು.ಆರ್.ರಾವ್ ವಿಜ್ಞಾನ ಭವನ, ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆ, ತೋಟಗಾರಿಕೆ ವಿಜ್ಞಾನ ಕಾಲೇಜು ಪ್ರವೇಶ ದ್ವಾರದ ಬಳಿ, ವಿದ್ಯಾರಣ್ಯಪುರ ಪೋಸ್ಟ್, ಯಲಹಂಕ, ಬೆಂಗಳೂರು- 560097. ಈ ವಿಳಾಸಕ್ಕೆ ಅಂಚೆ ಮೂಲಕ ಮತ್ತು ಪಿಡಿಎಫ್ ಪ್ರತಿಯನ್ನು ಇ-ಮೇಲ್ essಚಿಥಿ.ಞsಣಚಿ@gmಚಿiಟ.ಛಿom ಗೆ ಕಳುಹಿಸುವುದು.
ಪ್ರಬಂಧದ ಜೊತೆಗೆ ವಿದ್ಯಾರ್ಥಿಯ ಗುರುತಿನ (ಆಧಾರ್/ವಿದ್ಯಾರ್ಥಿ ಐಡಿ ಕಾರ್ಡ್) ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಅಕಾಡೆಮಿಯ ತಿತಿತಿ.ಞsಣಚಿಛಿಚಿಜemಥಿ.iಟಿ ನಲ್ಲಿ ಹಾಗೂ ಮೊ. 9008675123 ಪಡೆಯಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಎಂ.ರಮೇಶ್ ತಿಳಿಸಿದ್ದಾರೆ.
