PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಅರಣ್ಯ ಇಲಾಖೆ ಸಿಬ್ಬಂದಿ ಹರಸಾಸಹ, 15 ದಿನವಾದರೂ ಸೆರೆ ಸಿಕ್ಕದ ಹುಲಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮೈಸೂರು ಗ್ರಾಮಾಂತರ > ಅರಣ್ಯ ಇಲಾಖೆ ಸಿಬ್ಬಂದಿ ಹರಸಾಸಹ, 15 ದಿನವಾದರೂ ಸೆರೆ ಸಿಕ್ಕದ ಹುಲಿ
ಮೈಸೂರು ಗ್ರಾಮಾಂತರಮೈಸೂರು ನಗರ

ಅರಣ್ಯ ಇಲಾಖೆ ಸಿಬ್ಬಂದಿ ಹರಸಾಸಹ, 15 ದಿನವಾದರೂ ಸೆರೆ ಸಿಕ್ಕದ ಹುಲಿ

Prathinidhi News
Last updated: December 12, 2023 10:06 am
Prathinidhi News
Published December 12, 2023
Share
SHARE

ಮೈಸೂರು, ಡಿ 12: ಮೈಸೂರಿನ ಗ್ರಾಮಗಳಲ್ಲಿ ಭೀತಿ ಹುಟ್ಟಿಸಿರುವ ಹುಲಿಯ ಸೆರೆಗೆ ಅರಣ್ಯ ಇಲಾಖೆ ಹರಸಾಹಸಪಡುವಂತಾಗಿದೆ. ಕಳೆದ ಒಂದು ತಿಂಗಳಿನಿಂದ ದೊಡ್ಡಕನ್ಯಾ, ಚಿಕ್ಕಕನ್ಯಾ, ಬ್ಯಾತಹಳ್ಳಿಮ ಸಿಂಧುವಳ್ಳಿ ಹಾಗೂ ಅಕ್ಕಪಕ್ಕದ ಗ್ರಾಮಗಳಲ್ಲಿ ಹುಲಿ ಭಯ ಹುಟ್ಟಿಸಿದ್ದು, ಅರಣ್ಯ ಇಲಾಖೆಯೊಂದಿಗೆ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ. ಈ ಮಧ್ಯೆ, ಒಂದೂವರೆ ವರ್ಷದ ಹುಲಿಯನ್ನು ಸೆರೆಹಿಡಿಯಲು ಸರಗೂರು ಟ್ರಾಕ್ ತಂಡ ಮತ್ತು ಅಗ್ನಿಶಾಮಕ, ತುರ್ತು ಸೇವೆಗಳ ಸಿಬ್ಬಂದಿ ಜಂಟಿಯಾಗಿ ಅರಣ್ಯ ಇಲಾಖೆ ಸಿಬ್ಬಂದಿ ಜತೆ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.

ಡಿಸೆಂಬರ್ 1 ರಂದು ಕ್ಯಾಮೆರಾ ಕಣ್ಣಿಗೆ ಕಾಣಿಸಿದ್ದ ಹುಲಿ ನಂತರ ಎರಡು ದಿನ ಕಣ್ಮರೆಯಾಗಿತ್ತು. ನಂತರ, ದೊಡ್ಡಕನ್ಯಾ ಮತ್ತು ಚಿಕ್ಕಕನ್ಯಾದಲ್ಲಿನ ಕಬ್ಬಿನ ಗದ್ದೆಗಳಲ್ಲಿಟ್ಟಿದ್ದ ಕ್ಯಾಮೆರಾಗಳಲ್ಲಿ ಅದರ ಚಲನವಲನ ಸೆರೆಯಾಗಿತ್ತು. ಅದರ ಆಧಾರದಲ್ಲಿ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ತೀವ್ರಗೊಳಿಸಿತು. ಡಿಸೆಂಬರ್ 8 ರಂದು ಮತ್ತೆ ಹುಲಿಯ ಚಲನವಲನ ಕಂಡುಬಂದಿತ್ತು. ಅನೇಕ ಪ್ರಯತ್ನಗಳ ಹೊರತಾಗಿಯೂ, ಹುಲಿ ತಪ್ಪಿಸಿಕೊಂಡಿದೆ.

ಅರಣ್ಯ ಇಲಾಖೆ ಅಧಿಕಾರಿಗಳು, ತಜ್ಞರು ಸೇರಿದಂತೆ 100 ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಆದರೆ, ಅರಣ್ಯ ಇಲಾಖೆ ಸಿಬ್ಬಂದಿಯ ಅನುಭವದ ಕೊರತೆಯಿಂದಾಗಿ ಕಾರ್ಯಾಚರಣೆ ವಿಫಲವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅರಣ್ಯ ಸಿಬ್ಬಂದಿ ಆರಂಭದಲ್ಲಿ ಹುಲಿ ಇರುವಿಕೆಯ ವರದಿಗಳನ್ನು ತಳ್ಳಿಹಾಕಿದರು ಮತ್ತು ಅದನ್ನು ಚಿರತೆ ಎಂದು ಹೇಳಿದ್ದರು. ಅರಣ್ಯ ಸಿಬ್ಬಂದಿಗಳು ಹುಲಿಯನ್ನು ಪತ್ತೆ ಮಾಡಿದ ನಂತರವೇ ಅದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಕ್ರೈಂ ಸುದ್ದಿಗಳುಮುಖಪುಟಮೈಸೂರು ಗ್ರಾಮಾಂತರ

ತಮ್ಮನಿಂದಲೇ ಅಣ್ಣನ ಮೇಲೆ ಗುಂಡಿನ ದಾಳಿ..! ಗುಂಡು ಹಾರಿಸಲು ತಾಯಿಯೇ ಹೇಳಿದಳಾ?

January 29, 2025
ಮೈಸೂರು ನಗರ

ಮನತಣಿಸಿದ ವಿಶೇಷ‌‌ ಮಕ್ಕಳ ನೃತ್ಯ

July 22, 2024
ಮುಖಪುಟಮೈಸೂರು ನಗರರಾಜಕೀಯ

ಕುಂಭಮೇಳದಲ್ಲಿ ಕಾಲ್ತುಳಿತ: ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಹೇಳಿದ್ದೇನು?

January 29, 2025
ಮುಖಪುಟಮೈಸೂರು ನಗರ

PODCAST : ಜ್ಯುವೆಲರಿ ಮಳಿಗೆಯಲ್ಲಿ ಚಿನ್ನಾಭರಣ ದೋಚಿದ ಖದೀಮರು..!

April 1, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?