PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ರಾಜ್ಯದಲ್ಲಿ ಇ-ಖಾತಾ ಗೊಂದಲ: ಸರ್ಕಾರ ಹಾಗೂ ಐಟಿಬಿಟಿ ಸಚಿವರ ವಿರುದ್ಧ ಮಾಜಿ ಮೇಯರ್ ಶಿವಕುಮಾರ್ ತೀವ್ರ ವಾಗ್ದಾಳಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ರಾಜ್ಯದಲ್ಲಿ ಇ-ಖಾತಾ ಗೊಂದಲ: ಸರ್ಕಾರ ಹಾಗೂ ಐಟಿಬಿಟಿ ಸಚಿವರ ವಿರುದ್ಧ ಮಾಜಿ ಮೇಯರ್ ಶಿವಕುಮಾರ್ ತೀವ್ರ ವಾಗ್ದಾಳಿ
ಮುಖಪುಟಮೈಸೂರು ನಗರರಾಜಕೀಯ

ರಾಜ್ಯದಲ್ಲಿ ಇ-ಖಾತಾ ಗೊಂದಲ: ಸರ್ಕಾರ ಹಾಗೂ ಐಟಿಬಿಟಿ ಸಚಿವರ ವಿರುದ್ಧ ಮಾಜಿ ಮೇಯರ್ ಶಿವಕುಮಾರ್ ತೀವ್ರ ವಾಗ್ದಾಳಿ

Prathinidhi News
Last updated: February 3, 2026 12:35 pm
Prathinidhi News
Published February 3, 2026
Share
SHARE

ಮೈಸೂರು, ಫೆಬ್ರವರಿ 3, 2026 : ರಾಜ್ಯದಾದ್ಯಂತ ಕಳೆದ ಎರಡು ತಿಂಗಳಿನಿಂದ ಇ-ಖಾತಾ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಮೇಯರ್ ಶಿವಕುಮಾರ್ ಕಿಡಿಕಾರಿದ್ದಾರೆ.

ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆಯಾದ ಮೈಸೂರಿನಲ್ಲೂ ಇ-ಖಾತಾ ವ್ಯವಸ್ಥೆ ಸಂಪೂರ್ಣವಾಗಿ ಸ್ತಬ್ಧವಾಗಿದ್ದು, ಐಟಿಬಿಟಿ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಬೆಂಗಳೂರಿನ ಹಿರಿಮೆಗೆ ಈ ಅವ್ಯವಸ್ಥೆ ಕಪ್ಪುಚುಕ್ಕೆಯಾಗಿದೆ. ಪ್ರಸ್ತುತ ರಾಜ್ಯ ಸರ್ಕಾರ ತಾಂತ್ರಿಕ ವ್ಯವಸ್ಥೆಯನ್ನು ಉನ್ನತೀಕರಿಸುವ ಬದಲು ಇಡೀ ವ್ಯವಸ್ಥೆಯನ್ನು 20 ವರ್ಷಗಳಷ್ಟು ಹಿಂದಕ್ಕೆ ಕೊಂಡೊಯ್ದಿದೆ ಎಂದು ಅವರು ಆರೋಪಿಸಿದರು.

ಇ-ಖಾತಾವನ್ನು ಕಡ್ಡಾಯಗೊಳಿಸುವ ಮೊದಲು ಸರ್ಕಾರ ಅದರ ಸಾಧಕ-ಬಾಧಕಗಳನ್ನು ಕೂಲಂಕಷವಾಗಿ ಪರಿಶೀಲಿಸಬೇಕಿತ್ತು. ಹಂತ ಹಂತವಾಗಿ ಅನುಷ್ಠಾನಕ್ಕೆ ತರುವ ಬದಲು ತರಾತುರಿಯಲ್ಲಿ ನಿರ್ಧಾರ ಕೈಗೊಂಡಿದ್ದರಿಂದ ಇಂದು ಜನರು ಪರದಾಡುವಂತಾಗಿದೆ. ಕಾವೇರಿ ತಂತ್ರಾಂಶವು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಹಾಗೂ ಜನರು ಆಸ್ತಿ ಖರೀದಿ ಮತ್ತು ಮಾರಾಟ ಮಾಡಲು ಸಾಧ್ಯವಾಗದಂತಹ ವಿಷಮ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಸಾರ್ವಜನಿಕರು ಕೋರ್ಟ್ ಮತ್ತು ಕಚೇರಿಗಳಿಗೆ ಅಲೆಯುವಂತಾಗಿದೆ ಎಂದು ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು. ಅನ್ಯ ರಾಜ್ಯಗಳಲ್ಲಿ ಮನೆಯಲ್ಲೇ ಕುಳಿತು ಎಐ (AI) ತಂತ್ರಜ್ಞಾನದ ಮೂಲಕ ಇ-ಖಾತೆ ಪಡೆಯುವ ಸೌಲಭ್ಯವಿದ್ದರೆ, ನಮ್ಮ ರಾಜ್ಯದಲ್ಲಿ ತಾಂತ್ರಿಕ ದೋಷಗಳಿಂದಾಗಿ ಜನರು ಮಧ್ಯವರ್ತಿಗಳ ಪಾಲಾಗುತ್ತಿದ್ದು, ಹಣದ ಸುಲಿಗೆಯಾಗುತ್ತಿದೆ ಎಂದು ಅವರು ದೂರಿದರು.

- ಜಾಹೀರಾತು -

ಮೈಸೂರು ಮಹಾನಗರ ಪಾಲಿಕೆಯಲ್ಲಿ ವಾರ್ಷಿಕ ಸುಮಾರು 200 ಕೋಟಿ ರೂಪಾಯಿ ಕಂದಾಯ ವಸೂಲಿಯಾಗುತ್ತದೆ. ಆದರೆ ಈಗಿನ ತಾಂತ್ರಿಕ ಸಮಸ್ಯೆಯಿಂದಾಗಿ ಜನರು ತೆರಿಗೆ ಕಟ್ಟಲು ಕೂಡ ಸಾಧ್ಯವಾಗುತ್ತಿಲ್ಲ. ಇದರಿಂದ ಸರ್ಕಾರ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಭಾರಿ ಆರ್ಥಿಕ ನಷ್ಟವಾಗುತ್ತಿದೆ. ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಧಾನಿ ಮೋದಿ ಬಗ್ಗೆ ಮಾತನಾಡುವ ಮೊದಲು ತಮ್ಮ ಇಲಾಖೆಯ ವೈಫಲ್ಯಗಳನ್ನು ಸರಿಪಡಿಸಿಕೊಳ್ಳಲಿ. ಮೈಕ್ರೋಸಾಫ್ಟ್ ಮತ್ತು ಗೂಗಲ್‌ನಂತಹ ಪ್ರತಿಷ್ಠಿತ ಕಂಪನಿಗಳು ರಾಜ್ಯದಿಂದ ಹೊರಹೋಗುತ್ತಿದ್ದು, ಸಾವಿರಾರು ಯುವಕರ ಉದ್ಯೋಗಾವಕಾಶಗಳು ಕೈತಪ್ಪುತ್ತಿವೆ. ಇದಕ್ಕೆ ಸಚಿವರ ವೈಫಲ್ಯವೇ ನೇರ ಕಾರಣ ಎಂದು ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಪಾಲಿಕೆ ಸದಸ್ಯರಾದ ಬಿ.ವಿ. ಮಂಜುನಾಥ್, ಸುಬ್ಬಯ್ಯ ಹಾಗೂ ರಂಗಸ್ವಾಮಿ ಉಪಸ್ಥಿತರಿದ್ದರು. ಇ-ಖಾತೆ ಕಡ್ಡಾಯ ನಿಯಮವನ್ನು ಸದ್ಯಕ್ಕೆ ಕೈಬಿಟ್ಟು, ಮೊದಲು ಮನೆ ಮನೆಗೆ ಹೋಗಿ ಸರ್ವೇ ನಡೆಸಿ ಡೇಟಾ ಸಂಗ್ರಹಿಸಬೇಕು. ಒಂದು ವಾರದೊಳಗೆ ಈ ತಾಂತ್ರಿಕ ಲೋಪಗಳನ್ನು ಸರಿಪಡಿಸದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟ

ರಾಜ್ಯದಲ್ಲಿ ಕುಸಿದ ತಾಪಮಾನ ; ಮುಂದಿನ ಮೂರ್ನಾಲ್ಕು ದಿನ ಶೀತಗಾಳಿ ಪ್ರಭಾವ

November 17, 2025
ಬೆಂಗಳೂರುಮುಖಪುಟರಾಜಕೀಯ

ಬೆಂಗಳೂರಿನ ಶಾಸಕರ ಭವನದಲ್ಲಿ ಮುಖ್ಯಮಂತ್ರಿಗಳಿಂದ ದಾಸಶ್ರೇಷ್ಠ ಕನಕದಾಸರ ಜಯಂತಿ ಆಚರಣೆ

November 8, 2025
ಮುಖಪುಟಮೈಸೂರು ಗ್ರಾಮಾಂತರರಾಜಕೀಯಸನ್ನಿಧಾನ

ಹೊಸರಾಮನಹಳ್ಳಿಯಲ್ಲಿ ಶ್ರೀ ಈರಣ್ಣೇಶ್ವರ ಹಬ್ಬದ ಸಂಭ್ರಮ: ಶಾಸಕ ಜಿ.ಡಿ. ಹರೀಶ್ ಗೌಡರಿಂದ ಪೂಜೆ ಸಲ್ಲಿಕೆ

January 12, 2026
ಮುಖಪುಟಮೈಸೂರು ನಗರರಾಜಕೀಯ

ಪೂರ್ಣ 5 ವರ್ಷಕ್ಕೆ ಸಿದ್ದರಾಮಯ್ಯ ಅವ್ರೇ ಮುಖ್ಯಮಂತ್ರಿ ಆಗಿರ್ಲಿ.., ರಸ್ತೆ ತಡೆ ನಡೆಸಿ ಸಿಎಂ ಸಿದ್ದರಾಮಯ್ಯ ಬೆಂಬಲಿಗರಿಂದ ಪ್ರತಿಭಟನೆ !

November 29, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?