ಚಿಕ್ಕಬಳ್ಳಾಪುರ : ಜಿಲ್ಲೆಯ ವಿವಿಧೆಡೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಕಾರ್ಯನಿರ್ವಹಿಸಿರುವ ಚಿಕ್ಕಬಳ್ಳಾಪುರ ತಾಲ್ಲೂಕಿನ ಪೆರೇಸಂದ್ರದ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಬಾಗೇಪಲ್ಲಿಯ ಮುರಾರ್ಜಿ ದೇಸಾಯಿ ವಸತಿ ಶಾಲೆ (ರಾಜ್ಯ ಪಠ್ಯಕ್ರಮ) ಹಾಗೂ ಚಿಂತಾಮಣಿ ತಾಲ್ಲೂಕಿನ ಮಸ್ತೇನಹಳ್ಳಿಯ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಸಿ) ಯಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿಯನ್ನು ಏಪ್ರಿಲ್ 15 ರವರೆಗೆ ವಿಸ್ತರಿಸಲಾಗಿದೆ.
ಈ ಹಿಂದೆ ಪ್ರವೇಶ ಪಡೆಯಲು ಮಾರ್ಚ್ 31 ಕಡೆಯದಿನವಾಗಿತ್ತು. ಇದೀಗ ವಿದ್ಯಾರ್ಥಿಗಳಿಂದ ಆನ್ ಲೈನ್ ಸೇವಾಸಿಂಧು https://sevasindhuservices.karnataka.gov.in ಮೂಲಕ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 15ರ ವರೆಗೂ ಕಲಾವಕಾಶವಿದೆ.
ಅರ್ಹ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಶೇ. 75 ರಷ್ಟು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ (ಮುಸ್ಲಿಂ, ಕ್ರೈಸ್ತ, ಜೈನ್, ಸಿಖ್, ಪಾರ್ಸಿ ಮತ್ತು ಬೌದ್ದ) ಹಾಗೂ ಶೇ. 25 ರಷ್ಟು ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಯಲ್ಲಿ ಪಡೆದ ಅಂಕಗಳಿಗೆ ಅನುಗುಣವಾಗಿ ಹಾಗೂ ರೋಸ್ಟರ್ ನಿಯಮದಂತೆ ಪ್ರವೇಶ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿ ಹಾಗೂ ಅರ್ಜಿಗಳನ್ನು ಉಚಿತವಾಗಿ ಸಲ್ಲಿಸಲು ಜಿಲ್ಲಾ ಅಲ್ಪಸಂಖ್ಯಾತರ ಅಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ, ಎಸ್.ಎ8, 2ನೇ ಮಹಡಿ ಶಿಡ್ಲಘಟ್ಟ ರಸ್ತೆ, ಚಿಕ್ಕಬಳ್ಳಾಪುರ ದೂರವಾಣಿ:08156-277049, ಪ್ರಾಂಶುಪಾಲರು ಪೆರೇಸಂದ್ರ ಮತ್ತು ಬಾಗೇಪಲ್ಲಿ 9686200416, ಪ್ರಾಂಶುಪಾಲರು ಮಸ್ತೇನಹಳ್ಳಿ-9972408072 ಹಾಗೂ ಚಿಂತಾಮಣಿ ಮಾಹಿತಿ ಕೇಂದ್ರ -8746882888, ಶಿಟ್ಲಘಟ್ಟ-9739426396, ಗೌರಿಬಿದನೂರು-8867760346, ಬಾಗೇಪಲ್ಲಿ 8123318947, ಗುಡಿಬಂಡೆ-7204915866, ಚಿಕ್ಕಬಳ್ಳಾಪುರ 7204453320 ಗೆ ಸಂಪರ್ಕಿಸಬಹುದೆಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
