ಇಂದಿನಿಂದ 4 ದಿನಗಳ ಕಾಲ ಬೆಂಗಳೂರಿನಲ್ಲಿ ಕೃಷಿ ಮೇಳ ನಡೆಯಲಿದೆ. ಕೃಷಿ ವಿಶ್ವವಿದ್ಯಾಲಯ – ಜಿಕೆವಿಕೆಯಲ್ಲಿ ಕೃಷಿಮೇಳ ನಡೆಯತ್ತಿದೆ. ಕೃಷಿಮೇಳಕ್ಕೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ನವೆಂಬರ್ 20ರವರೆಗೆ ಕೃಷಿ ಮೇಳ ನಡೆಯಲಿದೆ. ಕೃಷಿ ಮೇಳ ಆಹಾರ, ಆರೋಗ್ಯ, ಆದಾಯಕ್ಕಾಗಿ ಸಿರಿಧಾನ್ಯಗಳು ಎಂಬ ಘೋಷವಾಕ್ಯದಡಿ ನಡೆಯಲಿದೆ. ಈ ಬಾರಿ ಕೃಷಿ ಮೇಳದಲ್ಲಿ ಬಿತ್ತನೆ ಬೀಜಗಳ ಪ್ರದರ್ಶನದ ಜೊತೆಗೆ ಮಾರಾಟಕ್ಕೂ ಅವಕಾಶ ನೀಡಲಾಗಿದೆ. ಈ ಬಾರಿ ಕೃಷಿ ಮೇಳದಲ್ಲಿ ಬರ ಸ್ನೇಹಿ ಕೃಷಿ ತಂತ್ರಜ್ಞಾನಗಳು ಮತ್ತು ಸಿರಿಧಾನ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ.
