PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ನಂಜನಗೂಡು: ಹಾದನೂರು ಗ್ರಾಮಸ್ಥರ ನಿದ್ದೆಗೆಡಿಸಿದ್ದ ವ್ಯಾಘ್ರ ಸೆರೆ; ನಿಟ್ಟುಸಿರು ಬಿಟ್ಟ ರೈತರು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ನಂಜನಗೂಡು > ನಂಜನಗೂಡು: ಹಾದನೂರು ಗ್ರಾಮಸ್ಥರ ನಿದ್ದೆಗೆಡಿಸಿದ್ದ ವ್ಯಾಘ್ರ ಸೆರೆ; ನಿಟ್ಟುಸಿರು ಬಿಟ್ಟ ರೈತರು
ನಂಜನಗೂಡುಮುಖಪುಟ

ನಂಜನಗೂಡು: ಹಾದನೂರು ಗ್ರಾಮಸ್ಥರ ನಿದ್ದೆಗೆಡಿಸಿದ್ದ ವ್ಯಾಘ್ರ ಸೆರೆ; ನಿಟ್ಟುಸಿರು ಬಿಟ್ಟ ರೈತರು

Prathinidhi News
Last updated: April 18, 2026 5:51 pm
Prathinidhi News
Published April 18, 2026
Share
SHARE

ನಂಜನಗೂಡು, ಏಪ್ರಿಲ್‌ 18, 2026 : ತಾಲೂಕಿನ ಹೆಡಿಯಾಲ ಸಮೀಪದ ಹಾದನೂರು ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಆತಂಕ ಸೃಷ್ಟಿಸಿದ್ದ ಹುಲಿಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಕೊನೆಗೂ ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ. ಈ ಕಾರ್ಯಾಚರಣೆಯ ಮೂಲಕ ಗ್ರಾಮಸ್ಥರು ಮತ್ತು ರೈತರ ದೀರ್ಘಕಾಲದ ಭೀತಿ ದೂರವಾದಂತಾಗಿದೆ.

ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯು ಅತ್ಯಂತ ಸವಾಲಿನಿಂದ ಕೂಡಿತ್ತು. ಒಂದು ಕಡೆ ಹುಲಿಯ ಹಾವಳಿಯಿಂದ ಆಕ್ರೋಶಗೊಂಡಿದ್ದ ರೈತರ ಪ್ರತಿಭಟನೆ, ಇನ್ನೊಂದೆಡೆ ದಟ್ಟ ಪೊದೆಯಲ್ಲಿ ಅಡಗಿದ್ದ ಹುಲಿಯನ್ನು ಪತ್ತೆ ಹಚ್ಚುವ ಅನಿವಾರ್ಯತೆ ಅರಣ್ಯ ಇಲಾಖೆಯ ಮುಂದಿತ್ತು. ಈ ಹಿನ್ನೆಲೆಯಲ್ಲಿ ಇಲಾಖೆಯು ಎರಡು ಸಾಕಾನೆಗಳನ್ನು ಬಳಸಿಕೊಂಡು ವ್ಯವಸ್ಥಿತವಾಗಿ ಕಾರ್ಯಾಚರಣೆ ರೂಪಿಸಿತ್ತು.

ಇಡೀ ದಿನ ನಡೆದ ಹರಸಾಹಸದ ನಂತರ, ಅಡಗಿದ್ದ ಹುಲಿಯನ್ನು ಪತ್ತೆಹಚ್ಚಿ ಅರಿವಳಿಕೆ ಮದ್ದು ನೀಡುವ ಮೂಲಕ ಸೆರೆಹಿಡಿಯಲಾಯಿತು. ಸೆರೆಸಿಕ್ಕ ಹುಲಿಯನ್ನು ಹೆಚ್ಚಿನ ನಿಗಾ ಮತ್ತು ರಕ್ಷಣೆಗಾಗಿ ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ರವಾನಿಸಲಾಗಿದೆ. ಅರಣ್ಯ ಇಲಾಖೆಯ ಈ ತ್ವರಿತ ಕ್ರಮಕ್ಕೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದ್ದು, ಹಾದನೂರು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಕಾರ್ಯಾಚರಣೆಯ ಸ್ಥಳದಲ್ಲಿ ಸಿಎಫ್ ಪ್ರಭಾಕರನ್, ಎಸಿಎಫ್ ಪ್ರಭಾಕರ್, ಆರ್ ಎಫ್ ಓ ಕೃಷ್ಣ ಸೇರಿದಂತೆ ವಿವಿಧ ವಲಯಗಳ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದು ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಿದರು.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ವಿದ್ಯುತ್‌ ಬಿಲ್‌ ಬಾಕಿ ವಸೂಲಾತಿ ಅಭಿಯಾನ ; ಬಾಕಿ ಉಳಿದಿರುವ ಬಿಲ್‌ ಪಾವತಿಸಲು ನವೆಂಬರ್‌ 14ರ ಗಡುವು!

November 7, 2025
ಬೆಂಗಳೂರುಮುಖಪುಟ

ಛತ್ತೀಸ್‌ಗಢ : ಭದ್ರತಾ ಪಡೆಗಳೊಂದಿಗೆ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 14 ಸಶಸ್ತ್ರ ಮಾವೋವಾದಿಗಳ ಸಾವು

January 3, 2026
ಮುಖಪುಟಮೈಸೂರು ನಗರ

ಮೈಸೂರು: ಚಾಮುಂಡಿ ಬೆಟ್ಟದ ಕಾಮಗಾರಿಗೆ ಹೈಕೋರ್ಟ್ ತಡೆ; ಅಧಿಕಾರಿಗಳ ವಿರುದ್ಧ ಪರಿಸರ ಹೋರಾಟಗಾರ ಪರಶುರಾಮೇಗೌಡ ವಾಗ್ದಾಳಿ

April 11, 2026
ಮುಖಪುಟ

ಬೆಳಗಾವಿ : ರಜೆಗೆಂದು ಮನೆಗೆ ತೆರಳಿದ್ದ ಯೋಧ ರಸ್ತೆ ಅಪಘಾತದಲ್ಲಿ ಸಾವು

December 22, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?