ಮೈಸೂರು, ಜುಲೈ 3, 2026 : ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಇಂದು ಮೈಸೂರಿನ ಗಾಂಧೀ ವೃತ್ತದಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು.
ಹಿರಿಯ ರೈತ ಮುಖಂಡ ಕುರಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವು ರೈತರು ಭಾಗವಹಿಸಿ, ಬಿಡದಿ ಟೌನ್‌ಶಿಪ್ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಿಡದಿ ಟೌನ್‌ಶಿಪ್ ಯೋಜನೆಯನ್ನು ತಕ್ಷಣವೇ ಕೈಬಿಡಬೇಕು ಎಂದು ಆಗ್ರಹಿಸಿದ ರೈತರು, ಸರ್ಕಾರ ತಮ್ಮ ಬೇಡಿಕೆಯನ್ನು ಪರಿಗಣಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
