PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸಿದ್ದರಾಮಯ್ಯ ಅವರಿಗೆ ಸೋಲಿನ ಭಯ: ಕೂಡಲೇ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಸಾ.ರಾ. ಮಹೇಶ್ ಸವಾಲು !
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಸಿದ್ದರಾಮಯ್ಯ ಅವರಿಗೆ ಸೋಲಿನ ಭಯ: ಕೂಡಲೇ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಸಾ.ರಾ. ಮಹೇಶ್ ಸವಾಲು !
ಮುಖಪುಟಮೈಸೂರು ನಗರರಾಜಕೀಯ

ಸಿದ್ದರಾಮಯ್ಯ ಅವರಿಗೆ ಸೋಲಿನ ಭಯ: ಕೂಡಲೇ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಸಾ.ರಾ. ಮಹೇಶ್ ಸವಾಲು !

Prathinidhi News
Last updated: April 17, 2026 4:52 pm
Prathinidhi News
Published April 17, 2026
Share
SHARE

ಮೈಸೂರು, ಏಪ್ರಿಲ್ 17, 2026: ಬೆಂಗಳೂರು ನಗರದಲ್ಲಿ ಒಂದು ಲಕ್ಷಕ್ಕೂ ಅಧಿಕ ಜನರ ಸಮ್ಮುಖದಲ್ಲಿ ಯಶಸ್ವಿಯಾಗಿ ‘ಜನರೊಂದಿಗೆ ಜನತಾದಳ’ ಕಾರ್ಯಕ್ರಮ ನಡೆಸಿದ ಬೆನ್ನಲ್ಲೇ, ನಾಳೆ ಮೈಸೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಪದಗ್ರಹಣ ಹಾಗೂ ಜನರೊಂದಿಗೆ ಜನತಾದಳ ಕಾರ್ಯಕ್ರಮ ಆಯೋಜಿಸಲಾಗಿದೆ. 

ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಕಾರ್ಯಕರ್ತರನ್ನು ಕರೆಯದೆ, ಕೇವಲ ಚಾಮರಾಜ, ಕೃಷ್ಣರಾಜ ಹಾಗೂ ನರಸಿಂಹರಾಜ ಕ್ಷೇತ್ರಗಳ ಕಾರ್ಯಕರ್ತರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಉಳಿದಂತೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಾರ್ಯಕ್ರಮ ನಡೆಸುವ ಕುರಿತು ಈಗಾಗಲೇ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಲಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಈ ಅಭಿಯಾನ ನಡೆಯಲಿದೆ. ಅದರಲ್ಲೂ ವಿಶೇಷವಾಗಿ ಮೇ 13ರಂದು ವರುಣ ಕ್ಷೇತ್ರದಲ್ಲಿ ಬೃಹತ್ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಾ.ರಾ. ಮಹೇಶ್ ತಿಳಿಸಿದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ರಾಜ್ಯದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ ಎಂದು ಆರೋಪಿಸಿದರು. ಮುಖ್ಯಮಂತ್ರಿಗಳೇ, ನೀವು ಮತ್ತು ನಿಮ್ಮ ಮಗ ಯತೀಂದ್ರ ಮಾತ್ರ ಅಧಿಕಾರದಲ್ಲಿ ಇರಬೇಕೆಂದು ಬಯಸಬೇಡಿ, ಕೂಡಲೇ ಬಾಕಿ ಇರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಮಹಾನಗರ ಪಾಲಿಕೆ ಚುನಾವಣೆಗಳನ್ನು ನಡೆಸಿ ಎಂದು ಒತ್ತಾಯಿಸಿದರು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಅವಧಿಯಲ್ಲೆಲ್ಲಾ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಸಾಧ್ಯವಾಗಿಲ್ಲ. ಈ ಬಾರಿ ಚುನಾವಣೆ ನಡೆಸಿದರೆ ಎನ್.ಡಿ.ಎ ಮೈತ್ರಿಕೂಟ ಅಧಿಕಾರಕ್ಕೆ ಬರುತ್ತದೆ ಎಂಬ ಭಯದಿಂದಾಗಿ ಅವರು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಟೀಕಿಸಿದರು.

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮುಂದುವರಿಯುವ ಕುರಿತು ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಚರ್ಚೆಯಾಗಿದೆ. ಮೈಸೂರು ಜಿಲ್ಲೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿಯೇ ಚುನಾವಣೆಯನ್ನು ಎದುರಿಸಲಿವೆ ಎಂದು ಸ್ಪಷ್ಟಪಡಿಸಿದರು. ಇನ್ನು ನಾಳಿನ ಕಾರ್ಯಕ್ರಮಕ್ಕೆ ಜಿ.ಟಿ. ದೇವೇಗೌಡರು ಬರುತ್ತಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ಮೇಲೆ ನಿಷ್ಠೆ ಇರುವ ಎಲ್ಲಾ ಕಾರ್ಯಕರ್ತರು ಮತ್ತು ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಕಾರ್ಯಕ್ರಮವು ಕುಮಾರಸ್ವಾಮಿ ಹಾಗೂ ನಿಖಿಲ್ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆಯಲಿದ್ದು, ನಿಷ್ಠಾವಂತರೆಲ್ಲರೂ ಅಲ್ಲಿ ಇರುತ್ತಾರೆ ಎಂದು ಮಾರ್ಮಿಕವಾಗಿ ನುಡಿದರು.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಕ್ರೀಡೆಬೆಂಗಳೂರುಮುಖಪುಟ

ಚಿನ್ನಸ್ವಾಮಿಯಲ್ಲೇ IPL -2026 ಫೈನಲ್ ಮ್ಯಾಚ್ ನಡೆಯುತ್ತಾ..? ಹೋಂ ಗ್ರೌಂಡ್ ನಲ್ಲಿ RCB ಟೀಮ್ 5 ಪಂದ್ಯ ಆಡೋದು ಕನ್ಫರ್ಮ್..!

March 4, 2026
ಬೆಂಗಳೂರುಮುಖಪುಟ

ಪವಿತ್ರಾ ಗೌಡ ಮನೆ ಊಟಕ್ಕೆ ಬಿತ್ತು ಬ್ರೇಕ್ : ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದ ಹೈಕೋರ್ಟ್

January 20, 2026
ಮುಖಪುಟಮೈಸೂರು ನಗರ

ಮೈಸೂರು ಅರಮನೆ ಬಳಿ ಸಿಲಿಂಡರ್ ಸ್ಫೋಟ ಪ್ರಕರಣ: ಎನ್.ಐ.ಎ ತನಿಖೆಗೆ ಪ್ರಮೋದ್ ಮುತಾಲಿಕ್ ಒತ್ತಾಯ

December 29, 2025
ಮುಖಪುಟಮೈಸೂರು ಗ್ರಾಮಾಂತರ

ಮೈಸೂರು: ಮೊಳೆಯೂರು ವಲಯದಲ್ಲಿ ಮತ್ತೊಂದು ಹುಲಿ ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

November 18, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?