PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ವದಂತಿ ಹರಡುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ: ಆನೆಗಳ ರಕ್ಷಣೆಗೆ ಎಐ ತಂತ್ರಜ್ಞಾನದ ಮೊರೆ ಹೋದ ಅರಣ್ಯ ಇಲಾಖೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ವದಂತಿ ಹರಡುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ: ಆನೆಗಳ ರಕ್ಷಣೆಗೆ ಎಐ ತಂತ್ರಜ್ಞಾನದ ಮೊರೆ ಹೋದ ಅರಣ್ಯ ಇಲಾಖೆ
ಮುಖಪುಟಮೈಸೂರು ನಗರ

ವದಂತಿ ಹರಡುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ: ಆನೆಗಳ ರಕ್ಷಣೆಗೆ ಎಐ ತಂತ್ರಜ್ಞಾನದ ಮೊರೆ ಹೋದ ಅರಣ್ಯ ಇಲಾಖೆ

Prathinidhi News
Last updated: December 23, 2025 2:00 pm
Prathinidhi News
Published December 23, 2025
Share
SHARE

ಮೈಸೂರು, ಡಿಸೆಂಬರ್‌ 23, 2025 :ಜನವಸತಿ ಪ್ರದೇಶಗಳಿಗೆ ಹುಲಿ ಮತ್ತು ಚಿರತೆಗಳು ಬಂದಿವೆ ಎಂದು ಸುಳ್ಳು ಮಾಹಿತಿ ಹಾಗೂ ವದಂತಿಗಳನ್ನು ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು ಡಿಸಿಎಫ್ ಪರಮೇಶ್ ಅವರು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚೆಗೆ ಮೈಸೂರಿನ ಅಶೋಕಪುರಂ ಬಳಿ ಚಿರತೆ ಬಂದಿದೆ ಎಂದು ನಂಬಿಸುವ ರೀತಿಯಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ತಯಾರಿಸಿದ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿತ್ತು. ಮರದ ಮೇಲೆ ಚಿರತೆ ಕುಳಿತಿರುವ ಮತ್ತು ನೀರು ಕುಡಿಯುತ್ತಿರುವಂತೆ ಬಿಂಬಿಸಲಾಗಿದ್ದ ಈ ಚಿತ್ರಗಳು ಸಾರ್ವಜನಿಕರಲ್ಲಿ ಭಾರೀ ಆತಂಕ ಮೂಡಿಸಿದ್ದವು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಅರಣ್ಯ ಇಲಾಖೆಯು ಸೆನ್ ವಿಭಾಗದ ಪೊಲೀಸರ ಗಮನಕ್ಕೆ ತಂದು, ಫೋಟೋ ಹರಿಬಿಟ್ಟವರನ್ನು ಪತ್ತೆಹಚ್ಚಿ ಎಚ್ಚರಿಕೆ ನೀಡಿದೆ. ಸಾರ್ವಜನಿಕರು ಇಂತಹ ಪೋಟೋಗಳನ್ನು ನೋಡಿ ಭಯಪಡಬಾರದು ಮತ್ತು ಯಾವುದೇ ಮಾಹಿತಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ ರಾಜ್ಯದ ಅರಣ್ಯ ಸಂಪತ್ತಿನ ಬಗ್ಗೆ ಮಾತನಾಡಿದ ಡಿಸಿಎಫ್ ಪರಮೇಶ್, ಆನೆಗಳ ಸಂತತಿಯಲ್ಲಿ ಕರ್ನಾಟಕ ಇಡೀ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಹೆಮ್ಮೆಯಿಂದ ತಿಳಿಸಿದರು. ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ಆನೆಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಇವುಗಳ ರಕ್ಷಣೆಗೆ ಅರಣ್ಯ ಇಲಾಖೆ ಸರ್ವ ಸನ್ನದ್ಧವಾಗಿದೆ. ವಿಶೇಷವಾಗಿ ಕಾಡಂಚಿನ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿಯನ್ನು ತಡೆಗಟ್ಟಲು ಇಲಾಖೆಯು ಈಗ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೊರೆ ಹೋಗಿದೆ. ಈ ನೂತನ ತಂತ್ರಜ್ಞಾನದ ಕ್ಯಾಮರಾಗಳನ್ನು ಅರಣ್ಯದಂಚಿನಲ್ಲಿ ಅಳವಡಿಸಲಾಗಿದ್ದು, ಇವು ಆನೆಗಳ ಚಲನವಲನದ ಮೇಲೆ ಸತತ ನಿಗಾ ಇಡಲಿವೆ.

ಈ ವಿಶೇಷ ಕ್ಯಾಮರಾಗಳು ಕಾಡಾನೆಗಳ ಸುಳಿವನ್ನು ಅತ್ಯಂತ ವೇಗವಾಗಿ ಗ್ರಹಿಸಿ ತಕ್ಷಣವೇ ಸಂಬಂಧಪಟ್ಟವರಿಗೆ ಸಂದೇಶ ರವಾನಿಸುತ್ತವೆ. ಒಂದು ವೇಳೆ ಆನೆಗಳು ತಡೆಬೇಲಿಗಳನ್ನು ದಾಟಿ ಗ್ರಾಮದತ್ತ ಬರಲು ಪ್ರಯತ್ನಿಸಿದರೆ, ಈ ಎಐ ಕ್ಯಾಮರಾಗಳು ಒಂದು ವಿಚಿತ್ರ ಶಬ್ದವನ್ನು ಹೊರಹೊಮ್ಮಿಸುತ್ತವೆ. ಈ ಶಬ್ದದಿಂದ ಗಲಿಬಿಲಿಗೊಳ್ಳುವ ಆನೆಗಳು ಭೀತಿಯಿಂದ ಮರಳಿ ಕಾಡಿನತ್ತ ಮುಖ ಮಾಡುತ್ತವೆ ಮತ್ತು ಪುನಃ ಅದೇ ಭಾಗದಿಂದ ಬರಲು ಹಿಂದೇಟು ಹಾಕುತ್ತವೆ. ಈ ವಿನೂತನ ತಂತ್ರಜ್ಞಾನವು ಅರಣ್ಯ ಇಲಾಖೆಯ ಸಿಬ್ಬಂದಿಗೆ ವರದಾನವಾಗಿ ಪರಿಣಮಿಸಿದ್ದು, ಮಾನವ-ಪ್ರಾಣಿ ಸಂಘರ್ಷ ತಪ್ಪಿಸಲು ಸಹಕಾರಿಯಾಗಲಿದೆ ಎಂದು ಡಿಸಿಎಫ್ ಪರಮೇಶ್ ಮಾಹಿತಿ ನೀಡಿದರು.

 

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರಸಿನಿಮಾ

ಸಿಗರೇಟ್ ಸೇದುತ್ತಾ ಫೋಟೋಶೂಟ್ : ಬಿಗ್ ಬಾಸ್ ಖ್ಯಾತಿಯ ರಜತ್ ಮೇಲೆ ಮೈಸೂರಿನಲ್ಲಿ ದೂರು ದಾಖಲು

February 5, 2026
ಮುಖಪುಟಮೈಸೂರು ಗ್ರಾಮಾಂತರಮೈಸೂರು ನಗರ

ಗುಂಗ್ರಾಲ್ ಛತ್ರ ಗ್ರಾಮದಲ್ಲಿ ಬೇಕರಿ ಬೀಗ ಮುರಿದು ಹಣ ಕಳ್ಳತನ ಮಾಡಿದ ಖದೀಮರು..!

November 6, 2025
ಮಂಡ್ಯಮುಖಪುಟರಾಜಕೀಯ

ಡಿ.ಕೆ. ಶಿವಕುಮಾರ್ ಸಿಎಂ ಆಗಲೆಂದು ಮಳವಳ್ಳಿಯ ನರಸಿಂಹಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ!

November 26, 2025
ಮುಖಪುಟಮೈಸೂರು ನಗರಸಿನಿಮಾ

ಚಿತ್ರ ನಗರಿ ನಿರ್ಮಾಣದಿಂದ ಚಿತ್ರರಂಗಕ್ಕೆ ಮತ್ತಷ್ಟು ಪ್ರೋತ್ಸಾಹ : ಪ್ರಶಸ್ತಿ ಸಮಾರಂಭದಲ್ಲಿ ನಟ ರಿಷಬ್ ಶೆಟ್ಟಿ ಮಾತು

November 4, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?