PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ಹರಿಕಾರ ದಿವಂಗತ ಡಿ ದೇವರಾಜ ಅರಸುರವರ ಪ್ರತಿಮೆ ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ಹರಿಕಾರ ದಿವಂಗತ ಡಿ ದೇವರಾಜ ಅರಸುರವರ ಪ್ರತಿಮೆ ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖಪುಟಮೈಸೂರು ನಗರರಾಜಕೀಯ

ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ಹರಿಕಾರ ದಿವಂಗತ ಡಿ ದೇವರಾಜ ಅರಸುರವರ ಪ್ರತಿಮೆ ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Prathinidhi News
Last updated: November 3, 2025 2:58 pm
Prathinidhi News
Published November 3, 2025
Share
SHARE

ಮೈಸೂರು, ನವೆಂಬರ್‌ 3, 2025 : ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿಂದು ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ಹರಿಕಾರ ದಿವಂಗತ ಡಿ ದೇವರಾಜ ಅರಸುರವರ ಪ್ರತಿಮೆಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು. 

ಈ ವೇಳೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದೇವರಾಜ ಅರಸುರವರ ಪ್ರತಿಮೆ ಉದ್ಘಾಟನಾ ಸಮಾರಂಭ ಅದ್ದೂರಿಯಾಗಿ ನೆರವೇರಬೇಕಿತ್ತು. ನವೆಂಬರ್ 15 ಕ್ಕೆ ಉದ್ಘಾಟನೆ ಮಾಡಲು ಚಿಂತಿಸಲಾಗಿತ್ತು ಆದರೆ ಇಂದು ಉದ್ಘಾಟನೆ ನೆರವೇರಿದೆ. ಮೈಸೂರು ಜಿಲ್ಲೆ ದೇವರಾಜ ಅವರ ಜನ್ಮಭೂಮಿಯಾದ ಕಾರಣ ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಅವರ ಪ್ರತಿಮೆ ನಿರ್ಮಿಸುವ ಚಿಂತನೆ ಮೊದಲಿನಿಂದಲೂ ಇತ್ತು. ದೇವರಾಜ ಅರಸು ಸಿಎಂ ಆಗಿದ್ದಾಗ ನಾವೆಲ್ಲರೂ ಬೇರೆ ಬೇರೆ ಪಕ್ಷದಲ್ಲಿದ್ದರೂ ಅವರು ನಮಗೆಲ್ಲರಿಗೂ ಮಾದರಿಯಾಗಿದ್ದರು. ಸಮಾಜದ ಎಲ್ಲಾ ವರ್ಗದ ಜನರಿಗೂ ನ್ಯಾಯ ಸಿಕ್ಕಾಗ ಮಾತ್ರ ಸಮ ಸಮಾಜದ ನಿರ್ಮಾಣ ಸಾಧ್ಯವಾಗಲಿದೆ. ಸಮಾಜದಲ್ಲಿ ವಂಚಿತವಾಗಿದ್ದ ತಳ ಸಮುದಾಯಗಳಿಗೆ ನ್ಯಾಯ ದೊರಕಿಸಿಕೊಟ್ಟರು.ದೇವರು ವರವನ್ನು ಕೊಡೋದಿಲ್ಲ, ಶಾಪವನ್ನು ಕೊಡೋದಿಲ್ಲ, ಅವಕಾಶವನ್ನು ಕೊಡುತ್ತಾನೆ. ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವುದು ಬುದ್ಧಿವಂತಿಕೆಯ ಲಕ್ಷಣ.ಎಲ್ಲರಿಗೂ ಸಮಾನ ಅವಕಾಶ ಸಿಗದ ಕಾರಣ ಅಸಮಾನತೆಯ ಸಮಾಜ ನಿರ್ಮಾಣವಾಯಿತು. ನಮ್ಮ ಸರ್ಕಾರ ಅಸಮಾನತೆ ನಿರ್ಮೂಲನೆಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಸಮ ಸಮಾಜದ ನಿರ್ಮಾಣ ಇನ್ನೂ ಸಾಧ್ಯವಾಗಿಲ್ಲ. ಶಿಕ್ಷಣದಿಂದ ವಂಚಿತರಾದ ಜನರು ಬಡತನಕ್ಕೆ ಒಳಗಾಗಿ, ನಿರುದ್ಯೋಗ ಸಮಸ್ಯೆಗೆ ಸಿಲುಕಿ, ಅಧಿಕಾರದಿಂದ ವಂಚಿತರಾಗುತ್ತಾರೆ. ಅಂತಹವರಿಗೆ ಶಕ್ತಿ ತುಂಬುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದು ನುಡಿದರು.

ಇದೇ ವೇಳೆ ಸಿದ್ದರಾಮಯ್ಯ ಭಾಷಣ ಮಾಡಲು ಬರುತ್ತಿದ್ದಂತೆ ಕಂಸಾಳೆ ರವಿಯವರು, ಅಂದು ದೇವರಾಜ ಅರಸು, ಇಂದು ಸಿದ್ದರಾಮಯ್ಯ ಎಂದು ಘೋಷಣೆ ಕೂಗಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆದ ಘಟನೆ ಜರುಗಿದ್ದು,  ಘೋಷಣೆ ಕೂಗಿದವರು ಯಾರು ಎಂದು ಪ್ರಶ್ನಿಸಿದ ಸಿದ್ದರಾಮಯ್ಯ,  ದೇವರಾಜ ಅರಸು ದೇವರಾಜ ಅರಸುರವರೇ. ಸಿದ್ದರಾಮಯ್ಯ ಸಿದ್ದರಾಮಯ್ಯನೇ ಎಂದು ನುಡಿದರು. ಈ ಸಂದರ್ಭ ಸಿಎಂ ಸಿದ್ದರಾಮಯ್ಯಗೆ ಜಯವಾಗಲಿ ಎಂದು ಜಯಕಾರ ಕೂಗಿದವರ ಬಾಯ್ಮುಚ್ಚಿಸಿದರು ಅಲ್ಲದೆ ಘೋಷಣೆ ಕೂಗದಂತೆ ಗದರಿದರು.

- ಜಾಹೀರಾತು -

ಸಮಾರಂಭದಲ್ಲಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ,, ದೇವರಾಜ ಅರಸುರವರ ಪುತ್ರಿ ಭಾರತಿ ಅರಸು, ಶಾಸಕರಾದ ತನ್ವೀರ್ ಸೇಠ್, ಪುಟ್ಟರಂಗಶೆಟ್ಟಿ, ಡಿ ರವಿಶಂಕರ್, ವಿಧಾನ ಪರಿಷತ್ ಸದಸ್ಯರಾದ ಎಚ್ ವಿಶ್ವನಾಥ್, ಡಾ. ಡಿ ತಿಮ್ಮಯ್ಯ, ಸಿ‌ ಎನ್ ಮಂಜೇಗೌಡ, ಡಾ. ಯತೀಂದ್ರ, ಶಿವಕುಮಾರ್ ಸೇರಿದಂತೆ ಇತರ ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟರಾಜಕೀಯ

ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ; ರೈತರು-ಪೊಲೀಸರ ನಡುವೆ ಘರ್ಷಣೆ

November 7, 2025
ಬೆಂಗಳೂರುಮುಖಪುಟ

ವಿಶ್ವವಿದ್ಯಾಲಯಗಳ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವಂತೆ ಆಗ್ರಹ

December 9, 2025
ಮುಖಪುಟಮೈಸೂರು ನಗರರಾಜಕೀಯ

ನಾಯಕತ್ವ ಬದಲಾವಣೆ ಮತ್ತು ಕೊಟ್ಟ ಮಾತು : ಡಿಕೆ ಸಹೋದರರಿಗೆ ಪರೋಕ್ಷ ಟಾಂಗ್ ನೀಡಿದ ಸಿಎಂ ಸಿದ್ದರಾಮಯ್ಯ

November 21, 2025
ಮುಖಪುಟಮೈಸೂರು ಗ್ರಾಮಾಂತರ

ಸರಗೂರು: ನಿಧಿ ಆಸೆಗಾಗಿ ದೇವರ ವಿಗ್ರಹ ಕಿತ್ತು ಹಾಕಿದ ದುಷ್ಕರ್ಮಿಗಳು..! ಗ್ರಾಮಸ್ಥರಿಂದ ಆಕ್ರೋಶ

November 6, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?