ಮೈಸೂರು, ಮಾರ್ಚ್ 5, 2026 : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಮಾರ್ಗಮಧ್ಯೆ ನಂಜನಗೂಡಿನಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿದರು.

ಮೈಸೂರಿನಿಂದ ಗುಂಡ್ಲುಪೇಟೆ ಕಡೆಗೆ ತೆರಳುತ್ತಿದ್ದ ಯಡಿಯೂರಪ್ಪ ಅವರನ್ನು ನಂಜನಗೂಡಿನ ಹುಲ್ಲಹಳ್ಳಿ ವೃತ್ತದಲ್ಲಿ ತಡೆದ ಬಿಜೆಪಿ ನಾಯಕರು, ಹೂಗುಚ್ಚ ನೀಡಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ನೆರೆದಿದ್ದ ಕಾರ್ಯಕರ್ತರು ತಮ್ಮ ನೆಚ್ಚಿನ ನಾಯಕನ ಪರವಾಗಿ ಘೋಷಣೆಗಳನ್ನು ಕೂಗಿದರು. ಪಕ್ಷದ ಮುಖಂಡರ ಸ್ವಾಗತವನ್ನು ಸ್ವೀಕರಿಸಿದ ಬಿಎಸ್ವೈ ಅವರು, ಬಳಿಕ ಅಲ್ಲಿಂದ ಗುಂಡ್ಲುಪೇಟೆ ಕಡೆಗೆ ಪ್ರಯಾಣ ಬೆಳೆಸಿದರು. ಈ ವೇಳೆ ಮಾಧ್ಯಮಗಳು ಪ್ರತಿಕ್ರಿಯೆ ಪಡೆಯಲು ಯತ್ನಿಸಿದರೂ ಸಹ, ಬಿಎಸ್ವೈ ಅವರು ಯಾವುದೇ ಹೇಳಿಕೆ ನೀಡದೆ ಮುಂದೆ ಸಾಗಿದರು.
