ಬೆಂಗಳೂರು: ಎಷ್ಟು ದಿನ ಈ ಆಟಗಳು ಯಾವತ್ತಿದ್ರೂ ಬರಬೇಕು. ನನ್ನ ಮತ್ತು ಹೆಚ್ ಡಿ ದೇವೇಗೌಡರ ಮೇಲೆ ಗೌರವ ಇದ್ದರೇ 48 ಗಂಟೆಗಳಲ್ಲಿ ಬಂದು ಶರಣಾಗು, ತನಿಖೆಗೆ ಸಹಕರಿಸು ಎಂದು ಸಂಸದ ಪ್ರಜ್ವಲ್ ರೇವಣ್ಣಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮನವಿ ಮಾಡಿದರು.
ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಈ ನೆಲದ ಕಾನೂನು ಇದೆ, ಯಾಕೆ ಹೆದರಬೇಕು. ಎಷ್ಟು ದಿನ ಕಳ್ಳ ಪೊಲೀಸ್ ಆಟ. ನನ್ನ ಹಾಗೂ ಹೆಚ್ಡಿ ದೇವೇಗೌಡರ ಮೇಲೆ ಗೌರವ ಇದ್ದರೆ ಕೈಮುಗಿದು ಮನವಿ ಮಾಡ್ತೇನೆ 24 ಇಲ್ಲಾ 48 ಗಂಟೆಯಲ್ಲಿ ಶರಣಾಗು. ವಿದೇಶದಿಂದ ಬಂದು ತನಿಖೆಗೆ ಸಹಕಾರ ನೀಡಬೇಕು ಎಂದು ಹೇಳಿದರು.
ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಇದು ಎಲ್ಲರೂ ತಲೆತಗ್ಗಿಸುವ ಪ್ರಕರಣ. ಹಾಗಾಗಿ ನಾನು ಸಾರ್ವಜನಿಕವಾಗಿ ಮತ್ತೊಮ್ಮೆ ಕ್ಷಮೆ ಕೋರುತ್ತೇನೆ. ಎಲ್ಲರೂ ಅಸಹ್ಯ ಪಡುವ ಪ್ರಕರಣ ಇದು. ಈ ಕೇಸ್ನಲ್ಲಿ ನನ್ನ ಹಾಗೂ ದೇವೇಗೌಡರನ್ನ ತಾಳೆ ಹಾಕಿದ್ದಾರೆ ಎಂದು ಹೆಚ್.ಡಿಕೆ ಆರೋಪಿಸಿದರು.
ದೇವೇಗೌಡರರಿಗೆ ಈ ವಿಷಯದಲ್ಲಿ ಬಹಳ ನೋವಿದೆ. ರಾಜ್ಯಸಭೆ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು. ನಾನೇ ಬೇಡ ಎಂದು ತಡೆದಿದ್ದೇನೆ ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.
