ಬೆಂಗಳೂರು, ನವೆಂಬರ್ 19, 2025 : ರಾಜ್ಯ ಸರ್ಕಾರವು ಪಡಿತರ ಕಾರ್ಡ್ ದಾರರಿಗೆ ಗುಡ್ ನ್ಯೂಸ್ ಕೊಟ್ಟಿದೆ. 2026 ಹೊಸ ವರ್ಷಕ್ಕೆ ಜನರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ.
ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿಯಾಗಿ ನೀಡುತ್ತಿರುವ 5 ಕೆ.ಜಿ ಅಕ್ಕಿಯ ಬದಲು ಪ್ರತಿ ಪಡಿತರ ಚೀಟಿಗೆ ‘ಇಂದಿರಾ’ ಆಹಾರ ಕಿಟ್ ವಿತರಣೆ ಯೋಜನೆಯನ್ನು ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಪಡಿತರ ಚೀಟಿದಾರರ ಸಂಖ್ಯೆಗೆ ಅನುಗುಣವಾಗಿ ಮೂರು ವಿಭಾಗಗಳಾಗಿ ವಿಂಗಡಿಸಿ ಈ ಕಿಟ್‌ನಲ್ಲಿ ಆಹಾರ ಪದಾರ್ಥಗಳನ್ನು ವಿತರಿಸಲಾಗುವುದು ಎನ್ನಲಾಗಿದ್ದು, ಒಬ್ಬರು ಅಥವಾ ಇಬ್ಬರು ಸದಸ್ಯರಿದ್ದರೆ ಕಿಟ್‌ನಲ್ಲಿ 750 ಗ್ರಾಂ ತೊಗರಿ ಬೇಳೆ, ಅರ್ಧ ಲೀಟರ್ ಅಡುಗೆ ಎಣ್ಣೆ, ತಲಾ ಅರ್ಧ ಕಿಲೋ ಸಕ್ಕರೆ ಮತ್ತು ಉಪ್ಪು, ಮೂವರು ಅಥವಾ ನಾಲ್ವರು ಸದಸ್ಯರಿದ್ದರೆ ಒಂದೂವರೆ ಕಿಲೋ ಗ್ರಾಂ ತೊಗರಿ ಬೇಳೆ, ಒಂದು ಲೀಟರ್ ಅಡುಗೆ ಎಣ್ಣೆ, ತಲಾ ಒಂದು ಕಿಲೋ ಸಕ್ಕರೆ ಮತ್ತು ಉಪ್ಪು, ಐವರು ಅಥವಾ ಅದಕ್ಕಿಂತ ಹೆಚ್ಚು ಸದಸ್ಯರಿದ್ದರೆ 2,250 ಗ್ರಾಂ ತೊಗರಿ ಬೇಳೆ, ಒಂದೂವರೆ ಲೀಟರ್ ಅಡುಗೆ ಎಣ್ಣೆ, ತಲಾ ಒಂದೂವರೆ ಕಿಲೋ ಸಕ್ಕರೆ ಮತ್ತು ಉಪ್ಪು ವಿತರಿಸಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.
ಈ ಯೋಜನೆ ಜನವರಿ ತಿಂಗಳಿನಿಂದ ಈ ಕಿಟ್ ಫಲಾನುಭವಿಗಳ ಕೈ ಸೇರುವ ಸಾಧ್ಯತೆಯಿದೆ. ಯೋಜನೆ ಸಮರ್ಪಕವಾಗಿ ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖ ಆಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
