PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: RCB ಫ್ಯಾನ್ಸ್ ಗೆ ಗುಡ್ ನ್ಯೂಸ್ ! ಬೆಂಗಳೂರಲ್ಲಿ ನಡೆಯುತ್ತೆ IPL ಉದ್ಘಾಟನೆ ಪಂದ್ಯ : KSCA ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಮಾಹಿತಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಕ್ರೀಡೆ > RCB ಫ್ಯಾನ್ಸ್ ಗೆ ಗುಡ್ ನ್ಯೂಸ್ ! ಬೆಂಗಳೂರಲ್ಲಿ ನಡೆಯುತ್ತೆ IPL ಉದ್ಘಾಟನೆ ಪಂದ್ಯ : KSCA ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಮಾಹಿತಿ
ಕ್ರೀಡೆಮುಖಪುಟಮೈಸೂರು ನಗರ

RCB ಫ್ಯಾನ್ಸ್ ಗೆ ಗುಡ್ ನ್ಯೂಸ್ ! ಬೆಂಗಳೂರಲ್ಲಿ ನಡೆಯುತ್ತೆ IPL ಉದ್ಘಾಟನೆ ಪಂದ್ಯ : KSCA ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಮಾಹಿತಿ

Prathinidhi News
Last updated: December 16, 2025 3:09 pm
Prathinidhi News
Published December 16, 2025
Share
SHARE

ಮೈಸೂರು, ಡಿಸೆಂಬರ್‌ 16, 2025 : ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಅಭಿಮಾನಿಗಳಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಸಿಹಿಸುದ್ದಿಯೊಂದನ್ನು ನೀಡಿದ್ದಾರೆ. ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಉದ್ಘಾಟನಾ ಪಂದ್ಯವನ್ನು ಬೆಂಗಳೂರಿನಲ್ಲಿಯೇ ಆಯೋಜಿಸುವ ನಿಟ್ಟಿನಲ್ಲಿ ಬಿಸಿಸಿಐ ಜೊತೆ ಗಂಭೀರ ಮಾತುಕತೆ ನಡೆಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ವೆಂಕಟೇಶ್ ಪ್ರಸಾದ್, ಸಾಮಾನ್ಯವಾಗಿ ಹಿಂದಿನ ಆವೃತ್ತಿಯಲ್ಲಿ ಟ್ರೋಫಿ ಗೆದ್ದ ತಂಡದ ತವರು ಮೈದಾನದಲ್ಲಿಯೇ ಮುಂದಿನ ಆವೃತ್ತಿಯ ಉದ್ಘಾಟನಾ ಪಂದ್ಯ ನಡೆಯುವುದು ಐಪಿಎಲ್ ಸಂಪ್ರದಾಯವಾಗಿದೆ. ಆದರೆ, ಕಳೆದ ಬಾರಿ ಆರ್‌ಸಿಬಿ ಸಂಭ್ರಮಾಚರಣೆಯ ವೇಳೆ ನಡೆದ ಘಟನೆಯಿಂದ ಕೆಲವೊಂದು ಗೊಂದಲಗಳು ಉಂಟಾಗಿದ್ದವು. ಹೀಗಾಗಿ ಕೆಎಸ್‌ಸಿಎ ಚುನಾವಣೆ ಗೆದ್ದ ಬಳಿಕ ತಮ್ಮ ತಂಡ ರಾಜ್ಯ ಸರ್ಕಾರದ ಜೊತೆ ಮಾತುಕತೆ ನಡೆಸಿದೆ. ಪಂದ್ಯಾವಳಿ ನಡೆಸಲು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಈಗಾಗಲೇ ‘ಗ್ರೀನ್ ಸಿಗ್ನಲ್’ ನೀಡಿದ್ದು, ಗೃಹ ಸಚಿವರೊಂದಿಗೂ ದೂರವಾಣಿ ಮೂಲಕ ಚರ್ಚಿಸಿರುವುದಾಗಿ ಅವರು ಸ್ಪಷ್ಟಪಡಿಸಿದರು. ಶೀಘ್ರದಲ್ಲೇ ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯದ ದಿನಾಂಕ ನಿಗದಿಯಾಗಲಿದ್ದು, ಬೆಂಗಳೂರಿನಲ್ಲಿ ಐಪಿಎಲ್ ಹಾಗೂ ಅಂತರಾಷ್ಟ್ರೀಯ ಪಂದ್ಯಗಳು ಸೇರಿದಂತೆ ಎಲ್ಲಾ ಮಾದರಿಯ ಪಂದ್ಯಗಳು ನಡೆಯಲಿವೆ ಎಂಬ ಭರವಸೆ ನೀಡಿದರು.

ಇದೇ ವೇಳೆ ಕ್ರಿಕೆಟ್ ಪ್ರೇಮಿಗಳಿಗೆ ಮತ್ತೊಂದು ಮಾಹಿತಿಯನ್ನು ಹಂಚಿಕೊಂಡ ಅವರು, ಮುಂಬರುವ ವಿಜಯ್ ಹಜಾರೆ ಟ್ರೋಫಿ ಪಂದ್ಯವನ್ನಾಡಲು ಟೀಂ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದರು. ಈ ಬಾರಿ ದೆಹಲಿ ತಂಡದ ಪರವಾಗಿ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದಾರೆ. ಬೆಂಗಳೂರಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣ ಸೇರಿದಂತೆ ಒಟ್ಟು ಮೂರು ಕ್ರೀಡಾಂಗಣಗಳಿದ್ದು, ಕೊಹ್ಲಿ ಆಡುವ ಪಂದ್ಯ ಎಲ್ಲಿ ನಡೆಯಲಿದೆ ಎಂಬುದು ಇನ್ನೂ ಅಂತಿಮವಾಗಿಲ್ಲ ಎಂದು ತಿಳಿಸಿದರು.

ಜೊತೆಗೆ ಮೈಸೂರು ಭಾಗದ ಕ್ರಿಕೆಟ್ ಬೆಳವಣಿಗೆಯ ಕುರಿತು ಮಾತನಾಡಿದ ಅವರು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣದ ಬಗ್ಗೆ ಮಾತುಕತೆಗಳು ನಡೆಯುತ್ತಿವೆ ಎಂದರು. ಕಳೆದ ಮೂರು ವರ್ಷಗಳಿಂದ ಕ್ಲಬ್‌ನಲ್ಲಿ ಸಾಕಷ್ಟು ಗೊಂದಲಗಳಿದ್ದವು, ಆದರೆ ತಮ್ಮ ನೇತೃತ್ವದ ಹೊಸ ತಂಡ ಆ ಎಲ್ಲಾ ಗೊಂದಲಗಳನ್ನು ಬಗೆಹರಿಸಿ ಉತ್ತಮ ಕ್ರಿಕೆಟ್‌ಗೆ ಮೊದಲ ಆದ್ಯತೆ ನೀಡಲಿದೆ ಎಂದು ವೆಂಕಟೇಶ್ ಪ್ರಸಾದ್ ಹೇಳಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ರಾಜ್ಯದಲ್ಲಿ ಇ-ಖಾತಾ ಗೊಂದಲ: ಸರ್ಕಾರ ಹಾಗೂ ಐಟಿಬಿಟಿ ಸಚಿವರ ವಿರುದ್ಧ ಮಾಜಿ ಮೇಯರ್ ಶಿವಕುಮಾರ್ ತೀವ್ರ ವಾಗ್ದಾಳಿ

February 3, 2026
ಬೆಂಗಳೂರುಮುಖಪುಟ

ಶಿಕ್ಷಣ ಇಲಾಖೆ ಮಹತ್ವದ ತೀರ್ಮಾನ : SSLC ಟಾಪರ್‌ಗಳಿಗೆ ಲ್ಯಾಪ್ ಟಾಪ್ ಬದಲಿಗೆ ನಗದು ಬಹುಮಾನ ನೀಡಲು ಆದೇಶ

January 24, 2026
ನವದೆಹಲಿಮುಖಪುಟಮೈಸೂರು ನಗರ

ಸ್ಫೋಟಕ್ಕೂ ಮುನ್ನ ಮಸೀದಿ ಬಳಿ 3 ಗಂಟೆ ಪಾರ್ಕ್‌: ಶಂಕಿತ ಆತ್ಮಹತ್ಯಾ ಬಾಂಬರ್ ಚಿತ್ರ ಬಹಿರಂಗ..!

November 11, 2025
ಮುಖಪುಟಮೈಸೂರು ನಗರ

ಮೈಸೂರು : ಹಳೇ ಕೋರ್ಟ್‌ ಗೆ ಬಾಂಬ್‌ ಬ್ಲ್ಯಾಸ್ಟ್‌ ಬೆದರಿಕೆ ಇ ಮೇಲ್‌ – ಸ್ಥಳಕ್ಕೆ ಬಾಂಬ್ ತಪಾಸಣಾ ದಳ ಹಾಗೂ ಶ್ವಾನ ದಳ ಭೇಟಿ

January 6, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?