ಬೆಂಗಳೂರು, ಡಿಸೆಂಬರ್ 20, 2025 : ಇಯರ್ ಅಂಡ್ ಕ್ರಿಸ್ಮಸ್ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದ್ದು, ರಜೆ ಹಿನ್ನೆಲೆ ಬೆಂಗಳೂರಿನಿಂದ ಬೇರೆ ಊರುಗಳಿಗೆ ಸಂಚರಿಸುವ ಜನರಿಗೆ KSRTC ಸಿಹಿಸುದ್ದಿ ಕೊಟ್ಟಿದೆ.
ಕ್ರಿಸ್ಮಸ್ ಹಬ್ಬದ ಹಿನ್ನಲೆ ಪ್ರಯಾಣಿಕರಿಗೆ KSRTC ಗುಡ್ ನ್ಯೂಸ್ ನೀಡಿದ್ದು, ಡಿ. 20 ಇವತ್ತು ಹಾಗೂ 24 ರಂದು ಬೆಂಗಳೂರಿನಿಂದ ರಾಜ್ಯದಾದ್ಯಂತ ಹೆಚ್ಚುವರಿ ಬಸ್ಸುಗಳು ಸಂಚರಿಸಲಿವೆ. ನಗರದಿಂದ ಪ್ರಮುಖ ಸ್ಥಳಗಳಿಗೆ ವಿಶೇಷ ಬಸ್ ಸೇವೆ ಲಭ್ಯವಿದ್ದು, ಡಿ.26, 28ರಂದು ಮರಳಿ ಬರುವವರಿಗೂ ವ್ಯವಸ್ಥೆ ಮಾಡಲಾಗಿದೆ.
ಹೆಚ್ಚುವರಿಯಾಗಿ 1000 ಬಸ್ಗಳು ಸಂಚಾರ ನಡೆಸಲಿವೆ ಎಂದು KSRTC ಪ್ರಕಟಣೆಯಲ್ಲಿ ತಿಳಿಸಿದೆ.ಸಾಮಾನ್ಯ ಸಾರಿಗೆ, ಐರಾವತ ಹಾಗೂ ಸ್ಲೀಪರ್ ಕೋಚ್ ಸೇರಿದಂತೆ ಎಲ್ಲಾ ಐಷಾರಾಮಿ ಬಸ್ಗಳ ವ್ಯವಸ್ಥೆಯನ್ನು ಪ್ರಯಾಣಿಕರಿಗಾಗಿ ಮಾಡಲಾಗಿದೆ. ಕ್ರಿಸ್ಮಸ್ ಹಬ್ಬ ಮುಗಿದ ಬಳಿಕವೂ ವಿಶೇಷ ಬಸ್ಗಳ ಕಾರ್ಯಾಚರಣೆ ನಡೆಯಲಿದ್ದು, ಡಿ.26 ಹಾಗೂ 28ರಂದು ವಾಪಸ್ ಬರುವ ಪ್ರಯಾಣಿಕರಿಗೂ ವ್ಯವಸ್ಥೆ ಮಾಡ್ಲಾಗಿದೆ.
ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಬಸ್ಗಳು ವಿಶೇಷ ಕಾರ್ಯಾಚರಣೆ ನಡೆಸಲಿವೆ. ಇನ್ನು ಟಿಕೆಟ್ ಬುಕ್ಕಿಂಗ್ ನಲ್ಲಿ ವಿಶೇಷ ರಿಯಾಯಿತಿ ಕೊಡುವ ಬಗ್ಗೆ ಪ್ರಕಟಣೆಯಲ್ಲಿ ಉಲ್ಲೇಖ ಮಾಡಲಾಗಿದೆ.
