ತುಮಕೂರು: ಗ್ರಾಮಂತರ ಕಾಂಗ್ರೆಸ್ ತಾಲೂಕು ಘಟಕದ ಅಧ್ಯಕ್ಷರಾದ ಹಾಲುನೂರು ಲೇಪಾಕ್ಷ ರಾಜೀನಾಮೆ ಪಡೆದಿರುವುದು ಸ್ವಾಗತಾರ್ಹ ವಿಚಾರ ಎಂದು ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಕಾರ್ಯದರ್ಶಿ ಹಾಗೂ ವಕೀಲ ಸೈಯದ್ ಸದಾದ್ ತಿಳಿಸಿದ್ದಾರೆ.
ಹಾಲುನೂರು ಲೇಪಾಕ್ಷ ಕಾಂಗ್ರೆಸ್ ಪಕ್ಷದಲ್ಲಿ ಇದ್ದುಕೊಂಡು ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರನ್ನು ಬೆಂಬಲಿಸದೇ ಪಕ್ಷೇತರ ಅಭ್ಯರ್ಥಿ ವಿನೋದ್ ಶಿವರಾಜು ಪರ ಪ್ರಚಾರ ಕಾರ್ಯದಲ್ಲಿ ತೊಡಗಿರುವುದು ಕಂಡು ಬಂದಿತ್ತು ಈ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವರಿಸಚಿವ ಪರಮೇಶ್ವರ್ ಹಾಗೂ ಸಹಕಾರಿಸಚಿವ ಕೆ.ಎನ್.ರಾಜಣ್ಣ ಅವರ ಗಮನಕ್ಕೆ ತರಲಾಗಿತ್ತು. ರಾಜ್ಯಾಧ್ಯಕ್ಷರ ಸೂಚನೆ ಮೇರೆಗೆ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಗೌಡ ಅವರು ಹಾಲುನೂರು ಲೇಪಾಕ್ಷಿ ಅವರಿಂದ ರಾಜೀನಾಮೆ ಪಡೆದಿರುವುದು ಉತ್ತಮ ಬೆಳವಣಿಗೆ ಎಂದು ತಿಳಿಸಿದ್ದಾರೆ.
ವಕೀಲ ಹಾಗೂ ಕಾಂಗ್ರೆಸ್ ಮುಖಂಡ ರಾಘವೇಂದ್ರ ಮಾತನಾಡಿದರು.
ವಕೀಲ ಚಿತ್ತಯ್ಯ ಇದ್ದರು.

