ಮೈಸೂರು, ನವೆಂಬರ್ 25, 2025 : ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕರಾದ ಜಿ.ಟಿ. ದೇವೇಗೌಡ (ಜಿಟಿಡಿ) ಅವರು ಇಂದು ತಮ್ಮ 75ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕರಿಗೆ ಅಭಿಮಾನಿಗಳು, ಕಾರ್ಯಕರ್ತರು ಮತ್ತು ಹಿತೈಷಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.
ಶಾಸಕ ಜಿ.ಟಿ. ದೇವೇಗೌಡರ ಹುಟ್ಟುಹಬ್ಬದ ಪ್ರಯುಕ್ತ ಮೈಸೂರಿನ ವಿ.ವಿ. ಮೊಹಲ್ಲಾದಲ್ಲಿರುವ ಅವರ ನಿವಾಸಕ್ಕೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಮತ್ತು ಬೆಂಬಲಿಗರು ಬೆಳಗ್ಗಿನಿಂದಲೇ ಭೇಟಿ ನೀಡಿದರು.ಶುಭಾಶಯ ಕೋರಲು ಆಗಮಿಸಿದವರು ಶಾಸಕ ಜಿ.ಟಿ. ದೇವೇಗೌಡರಿಗೆ ಹೂಗುಚ್ಚ ನೀಡಿ ಗೌರವ ಸಲ್ಲಿಸಿದರು.ಅವರಿಗೆ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ, ಹಾರ ತುರಾಯಿಗಳನ್ನು ಸಮರ್ಪಿಸಿ ಜನ್ಮದಿನದ ಶುಭಾಶಯಗಳನ್ನು ಕೋರಿದರು. ಜಿ.ಟಿ. ದೇವೇಗೌಡರು ಈ ಸಂದರ್ಭದಲ್ಲಿ ಅಭಿಮಾನಿಗಳು ತೋರಿದ ಪ್ರೀತಿ ಮತ್ತು ವಿಶ್ವಾಸಕ್ಕೆ ಧನ್ಯವಾದ ತಿಳಿಸಿದರು.
