PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: HD KUMARASWAMY : ಜೈಲಿನಲ್ಲಿರುವ ಪ್ರಜ್ವಲ್‌ಗೆ ಫೋನ್ ಕೊಟ್ಟವರ್‍ಯಾರು? : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > HD KUMARASWAMY : ಜೈಲಿನಲ್ಲಿರುವ ಪ್ರಜ್ವಲ್‌ಗೆ ಫೋನ್ ಕೊಟ್ಟವರ್‍ಯಾರು? : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
ಜಿಲ್ಲೆಮುಖಪುಟಹಾಸನ

HD KUMARASWAMY : ಜೈಲಿನಲ್ಲಿರುವ ಪ್ರಜ್ವಲ್‌ಗೆ ಫೋನ್ ಕೊಟ್ಟವರ್‍ಯಾರು? : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

Prathinidhi News
Last updated: September 15, 2026 5:48 pm
Prathinidhi News
Published September 15, 2026
Share
SHARE

ಹಾಸನ, ಸೆ.15: ಜೈಲಿನಲ್ಲಿ  ಪ್ರಜ್ವಲ್ ರೇವಣ್ಣ ಫೋನ್​​​ ಬಳಸಿರುವ ಬಗ್ಗೆ ರಾಜಕೀಯವಾಗಿ ಭಾರೀ ಚರ್ವೆಗೆ ಕಾರಣವಾಗಿದೆ. ಇನ್ನು ಎಫ್‌ಎಸ್‌ಎಲ್ ವರದಿಯಲ್ಲೂ ಮಹತ್ವದ ವಿಚಾರಗಳು ಪತ್ತೆಯಾಗಿದೆ, ಇದೀಗ ಈ ಬಗ್ಗೆ  ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಅಮೆರಿಕ ಪ್ರವಾಸ ಮುಗಿಸಿ ರಾಜ್ಯಕ್ಕೆ ಮರಳಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಈ ವಿಚಾರವನ್ನು ತಮ್ಮ ಕುಟುಂಬವನ್ನು ಗುರಿಯಾಗಿಸಲು ಬಳಸಿಕೊಳ್ಳಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದರು. ಮಾವಿನಕೆರೆಯಲ್ಲಿ ಈ ಹೇಳಿಕೆ ನೀಡಿದ ಕುಮಾರಸ್ವಾಮಿ, ಕಳೆದ ಎರಡು ವರ್ಷಗಳಿಂದ ಜೈಲಿನಲ್ಲಿರುವ ವ್ಯಕ್ತಿಗೆ ಈಗ ಫೋನ್ ಎಲ್ಲಿಂದ ಬಂತು, ಯಾರು ಕೊಟ್ಟರು ಎಂದು ಪ್ರಶ್ನಿಸಿದರು. ಜೈಲಿನೊಳಗಡೆ ಅಶ್ಲೀಲ ಚಿತ್ರಗಳು ಹೇಗೆ ಬಂದವು ಎಂಬ ಬಗ್ಗೆಯೂ ಅವರು ಅನುಮಾನ ವ್ಯಕ್ತಪಡಿಸಿದರು. ಪ್ರಕರಣದ ಸಮಯದ ಬಗ್ಗೆಯೂ ಕುಮಾರಸ್ವಾಮಿ ಪ್ರಶ್ನೆಗಳನ್ನು ಎತ್ತಿದರು. ಕೆಪಿಎಸ್‌ಸಿ ಹಗರಣ, ನೈಸ್ ಹಗಲು ದರೋಡೆ ಹಾಗೂ ಬಿಡದಿ ಭೂ ಹಗರಣಗಳಿಗೆ ಸಂಬಂಧಿಸಿದಂತೆ ತಾವು ಪ್ರಸ್ತಾಪಿಸಿದ ವಿಚಾರಗಳು ಬೆಳಕಿಗೆ ಬಂದ ನಂತರವೇ ಈ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಹೊಸದಾಗಿ ಸರಣಿಯಂತೆ ಬಿಡಿಸಲಾಗುತ್ತಿದೆ ಎಂದು ಅವರು ಆರೋಪಿಸಿದರು. ದೇವೇಗೌಡರ ಕುಟುಂಬದವರ ಧ್ವನಿ ಅಡಗಿಸಲು ಈ ವಿಚಾರವನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು. ತಮ್ಮನ್ನು ಮತ್ತು ತಮ್ಮ ಕುಟುಂಬವನ್ನು ಮೌನಗೊಳಿಸಲು ಸಾಧ್ಯವಿಲ್ಲ ಎಂದು ಅವರು ಒತ್ತಿ ಹೇಳಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಸರ್ವನಾಶ ಮಾಡುವ ಆದ್ಯತೆಯನ್ನು ಹೊಂದಿದ್ದಾರೆ ಎಂದು ಕುಮಾರಸ್ವಾಮಿ ನೇರವಾಗಿ ಆರೋಪಿಸಿದರು. 400 ಅತ್ಯಾಚಾರ ಪ್ರಕರಣಗಳ ಬಗ್ಗೆ ಕಥೆಗಳನ್ನು ಸೃಷ್ಟಿಸಲಾಗುತ್ತಿದೆ. ಎಷ್ಟು ಕುಟುಂಬಗಳ ಹೆಣ್ಣುಮಕ್ಕಳಿಗೆ ನ್ಯಾಯ ಸಿಕ್ಕಿದೆ ಎಂದು ಪ್ರಶ್ನಿಸಿದರು. ತಮ್ಮ ಕುಟುಂಬದ ಸದಸ್ಯರೊಬ್ಬರಿಂದ ಅನ್ಯಾಯವಾಗಿದೆ ಎಂದು ಬಿಂಬಿಸುವ ಬದಲು, ಎಷ್ಟು ಕುಟುಂಬಗಳ ಹೆಣ್ಣುಮಕ್ಕಳ ಮರ್ಯಾದೆ ಕಾಪಾಡಿದ್ದೀರಿ ಎಂದು ಮುಖ್ಯಮಂತ್ರಿಯನ್ನು ಪ್ರಶ್ನಿಸಿದರು. ಈ ಬೆಳವಣಿಗೆಗಳಿಗೆ ಹೆದರಿ ತಾವು ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ನ್ಯಾಯ ಮತ್ತು ಸತ್ಯಕ್ಕೆ ತಲೆಬಾಗುವುದಾಗಿ ಹೇಳಿದ ಅವರು, “ನಾನಾಗಲಿ ಅಥವಾ ಬೇರೆಯವರಾಗಲಿ ತಪ್ಪು ಮಾಡಿದ್ದರೆ ತಲೆಬಾಗಲು ಸಿದ್ಧನಿದ್ದೇನೆ. ಆದರೆ, ನಿಮ್ಮಂತೆ ಎಲ್ಲವನ್ನೂ ದೋಚುವ ಕೆಲಸ ಮಾಡಿಲ್ಲ” ಎಂದು ಹೇಳಿದರು. ತಮ್ಮ ಕುಟುಂಬವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ತೇಜೋವಧೆಯನ್ನು ಅವರು ಖಂಡಿಸಿದರು. ದೇವೇಗೌಡರು ತಮ್ಮ 75 ವರ್ಷಗಳ ರಾಜಕೀಯ ಜೀವನದಲ್ಲಿ ಅಕ್ರಮಗಳ ವಿರುದ್ಧವೇ ಹೋರಾಡಿದವರು ಎಂದು ನೆನಪಿಸಿಕೊಂಡರು. ಅವರ ಮಾರ್ಗದಲ್ಲಿ ತಾನು ಮುಂದುವರಿಯುವುದಾಗಿ, ತಮ್ಮ ಧ್ವನಿಯನ್ನು ನಿಲ್ಲಿಸಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

 

TAGGED:#hassan#kumaraswamy
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಸರ್ಕಾರಿ ಜಾಗ ಖಾಸಗಿಯವರ ಪಾಲು ಮಾಡಬೇಡಿ: ಮೈಸೂರಿನ ಇಟ್ಟಿಗೆಗೂಡು ನಿವಾಸಿಗಳ ಪ್ರತಿಭಟನೆ

January 2, 2026
ಮುಖಪುಟಮೈಸೂರು ನಗರ

ಮೈಸೂರು : ಡಿ.13ರ ಹನುಮ ಜಯಂತಿಯ ಪ್ರಚಾರ ರಥಕ್ಕೆ ಗಣಪತಿ ಸಜ್ಜಿದಾನಂದಸ್ವಾಮೀಜಿ ಚಾಲನೆ..!

December 10, 2025
ಬೆಂಗಳೂರುಮುಖಪುಟರಾಜಕೀಯ

ಕಾವೇರಿ ನಿವಾಸದಲ್ಲಿ ಸಿಎಂ- ಡಿಸಿಎಂ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ ; ಪವರ್‌ ಶೇರಿಂಗ್‌ ಫೈಟ್‌ ಗೆ ಬಿತ್ತಾ ತೆರೆ.?

November 29, 2025
ಬೆಂಗಳೂರುಮುಖಪುಟ

ರಾಜ್ಯ ರಾಜಧಾನಿಯಲ್ಲಿ 71 ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ ; ಪೊಲೀಸರ ಸರಣಿ ಕಾರ್ಯಾಚರಣೆ !

January 14, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?