ಬೆಂಗಳೂರು, ನವೆಂಬರ್ 3, 2025 : ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ವಿರಾಮ ನೀಡಿದ್ದ ಮಳೆಯು ಮತ್ತೆ ಅಬ್ಬರಿಸಲು ಸಜ್ಜಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ನವೆಂಬರ್ 5 ರಿಂದ ರಾಜ್ಯದಲ್ಲಿ ಮಳೆ ಆರ್ಭಟ ಶುರುವಾಗಲಿದೆ. ಬಂಗಾಳಕೊಲ್ಲಿಯಲ್ಲಿ ಮತ್ತೊಮ್ಮೆ ಕಡಿಮೆ ಒತ್ತಡದ ವಾಯುಭಾರ ಕುಸಿತ ಉಂಟಾಗಿರುವುದರಿಂದ, ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ.
ನವೆಂಬರ್ 5 ರಿಂದ 3 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು,ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೆ ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ, ಹಾಸನ, ಚಿಕ್ಕಬಳ್ಳಾಪುರ, ಚಾಮರಾಜನಗರ ಸೇರಿದಂತೆ ಹಲವೆಡೆ ಮಳೆ ಸುರಿಯಲಿದೆ.
ಇನ್ನು, ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ ಹಾಗೂ ಕೊಪ್ಪಳದಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಕೊಡಲಾಗಿದೆ.
ಹಾಗೆಯೇ, ನವೆಂಬರ್ 7 ಕ್ಕೆ ಮಳೆ ಹೆಚ್ಚಾಗಲಿದೆ. ಪ್ರಮುಖವಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ, ಬೀದರ್, ಕಲಬುರ್ಗಿ, ಕೊಪ್ಪಳ, ಯಾದಗಿರಿ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಕೋಲಾರ, ತುಮಕೂರು, ರಾಮನಗರ ವಿಜಯನಗರದಲ್ಲಿ ಸಾಧಾರಣ ಗುಡುಗು-ಮಿಂಚು ಸಹಿತ ಮಳೆಯಾಘುವ ಮುನ್ಸೂಚನೆ ಇದೆ ಎಂದು ಹೇಳಲಾಗಿದೆ.
