PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಅಂಬಾವಿಲಾಸ ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಪೋಟ : ಬಲೂನ್ ವ್ಯಾಪಾರಿ ಸಾವು, ಐವರಿಗೆ ಗಂಭೀರ ಗಾಯ!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಅಂಬಾವಿಲಾಸ ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಪೋಟ : ಬಲೂನ್ ವ್ಯಾಪಾರಿ ಸಾವು, ಐವರಿಗೆ ಗಂಭೀರ ಗಾಯ!
ಮುಖಪುಟಮೈಸೂರು ನಗರ

ಅಂಬಾವಿಲಾಸ ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಪೋಟ : ಬಲೂನ್ ವ್ಯಾಪಾರಿ ಸಾವು, ಐವರಿಗೆ ಗಂಭೀರ ಗಾಯ!

Prathinidhi News
Last updated: December 26, 2025 11:08 am
Prathinidhi News
Published December 26, 2025
Share
SHARE

ಮೈಸೂರು, ಡಿಸೆಂಬರ್‌ 25, 2025 : ಸಾಂಸ್ಕೃತಿಕ ನಗರಿ ಮೈಸೂರಿನ ವಿಶ್ವವಿಖ್ಯಾತ ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಇಂದು ಭೀಕರ ದುರ್ಘಟನೆಯೊಂದು ಸಂಭವಿಸಿದೆ. ಬಲೂನ್‌ಗಳಿಗೆ ಗ್ಯಾಸ್ ತುಂಬಿಸುವ ವೇಳೆ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ ಓರ್ವ ಬಲೂನ್ ವ್ಯಾಪಾರಿ ಸಾವನ್ನಪ್ಪಿದ್ದು, ಐವರು ಪ್ರವಾಸಿಗರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತ ವ್ಯಾಪಾರಿಯನ್ನು ಉತ್ತರ ಪ್ರದೇಶ ಮೂಲದ ಸಲೀಂ (40) ಎಂದು ಗುರುತಿಸಲಾಗಿದೆ. ಸಲೀಂ ಅವರು ದೀರ್ಘಕಾಲದಿಂದ ಅರಮನೆಯ ಆವರಣದ ಬಳಿ ಬಲೂನ್ ಮಾರಾಟ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಇಂದು ಎಂದಿನಂತೆ ಹೀಲಿಯಂ ಹಾಗೂ ನೈಟ್ರೋಜನ್ ಗ್ಯಾಸ್ ಬಳಸಿ ಬಲೂನ್‌ಗಳಿಗೆ ಗಾಳಿ ತುಂಬಿಸುತ್ತಿದ್ದ ಸಂದರ್ಭದಲ್ಲಿ ಈ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಸಲೀಂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ದುರ್ಘಟನೆಯಲ್ಲಿ ಒಟ್ಟು ಐವರು ಗಂಭೀರವಾಗಿ ಗಾಯಗೊಂಡಿದ್ದು, ಅವರಲ್ಲಿ ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ನಗರದ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುಗಳ ವಿವರ ಇಂತಿದೆ: ಕೋಲ್ಕತ್ತಾ ಮೂಲದ ಶಹನಾಜ್ ಶಬ್ಬೀರ್ (54), ಬೆಂಗಳೂರು ನಿವಾಸಿ ಲಕ್ಷ್ಮಿ (45), ರಾಣೆಬೆನ್ನೂರಿನ ಕೊಟ್ರೇಶ್ (35), ನಂಜನಗೂಡಿನ ಮಂಜುಳಾ (29) ಮತ್ತು ರಂಜಿತಾ (30). ಇವರ ಪೈಕಿ ಲಕ್ಷ್ಮಿ ಹಾಗೂ ಮಂಜುಳಾ ಅವರ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ತುರ್ತು ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದೆ. ರಂಜಿತಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜೆ.ಎಸ್.ಎಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

- ಜಾಹೀರಾತು -

ಘಟನಾ ಸ್ಥಳಕ್ಕೆ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಹಾಗೂ ಡಿಸಿಪಿ ಸುಂದರ್ ರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಕೆ.ಆರ್. ಆಸ್ಪತ್ರೆಗೆ ಭೇಟಿ ನೀಡಿದ ಅಧಿಕಾರಿಗಳು ಗಾಯಾಳುಗಳ ಆರೋಗ್ಯ ವಿಚಾರಿಸಿ, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ. ಅರಮನೆಯಂತಹ ಜನನಿಬಿಡ ಪ್ರದೇಶದಲ್ಲಿ ನಡೆದ ಈ ಸ್ಫೋಟವು ಪ್ರವಾಸಿಗರಲ್ಲಿ ಕೆಲಕಾಲ ಆತಂಕ ಸೃಷ್ಟಿಸಿತ್ತು. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಮನ್ ರೇಗಾ ಹೆಸರು ಬದಲಾವಣೆ ವಿರೋಧಿಸಿ ಮೈಸೂರಿನಲ್ಲಿ ಕಾಂಗ್ರೆಸ್ ಅಹೋರಾತ್ರಿ ಧರಣಿ: ಕೇಂದ್ರದ ವಿರುದ್ಧ ಸಚಿವ ಮಹದೇವಪ್ಪ ಆಕ್ರೋಶ

February 2, 2026
ಕ್ರೈಂ ಸುದ್ದಿಗಳುಬೆಂಗಳೂರುಮುಖಪುಟ

ಬೆಂಗಳೂರಿನಲ್ಲಿ 18 ಕೋಟಿ ದರೋಡೆ : ಕೆಲಸಕ್ಕೆ ಸೇರಿದ 20 ದಿನದಲ್ಲೇ ಕೈಚಳಕ ತೋರಿಸಿದ ದಂಪತಿ

January 28, 2026
ಮುಖಪುಟಮೈಸೂರು ನಗರ

ಫಿಟ್‌ ಮೈಸೂರು ವಾಕಥಾನ್‌ ಯಶಸ್ವಿ : ವಾಕಥಾನ್‌ ಯಶಸ್ಸಿಗೆ ಕೈಜೋಡಿಸಿದವರಿಗೆ ಕೃತಜ್ಞತೆ

January 17, 2026
ಮುಖಪುಟಮೈಸೂರು ಗ್ರಾಮಾಂತರ

ಬೈಲಕುಪ್ಪೆಯಲ್ಲಿ ಖದೀಮರ ಅಟ್ಟಹಾಸ: ಹೊಸ ಮೊಬೈಲ್ ಅಂಗಡಿಗೆ ಕನ್ನ ಹಾಕಿ ಲಕ್ಷಾಂತರ ಮೌಲ್ಯದ ವಸ್ತುಗಳ ಲೂಟಿ

January 12, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?