ಕೂಡಿಗೆ: ಹಾಸನ ಹಾಲು ಒಕ್ಕೂಟದ ಆಡಳಿತ ಮಂಡಳಿಯ ನಿರ್ದೇಶಕರಾಗಿ ಕೆ.ಕೆ.ಹೇಮಂತ್ ಕುಮಾರ್ ಎರಡನೇ ಬಾರಿ ಅವಿರೋಧವಾಗಿ ಆಯ್ಕೆಯಾದರು.
ಒಕ್ಕೂಟದ ಆಡಳಿತ ಮಂಡಳಿಯ ಚುನಾವಣಾ ಪ್ರಕ್ರಿಯೆಯಲ್ಲಿ ಜಿಲ್ಲೆಯಿಂದ ಒಂದೇ ನಾಮಪತ್ರ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಕುಡುಮಂಗಳೂರು ರಾಮೇಶ್ವರ ಸಹಕಾರ ಸಂಘದ ಅಧ್ಯಕ್ಷ ಕೆ.ಕೆ.ಹೇಮಂತ್ ಕುಮಾರ್ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದು, ಚುನಾವಣಾ ಅಧಿಕಾರಿ ಆಯ್ಕೆ ಪ್ರಮಾಣ ಪತ್ರವನ್ನು ಹಸ್ತಾಂತರ ಮಾಡಲಾಯಿತು. ಒಕ್ಕೂಟದ ಅಧ್ಯಕ್ಷ ಎಚ್.ಡಿ.ರೇವಣ್ಣ ಇದ್ದರು.