ಬೆಂಗಳೂರು, ಜನವರಿ 20, 2026 : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ, ನಾಗರಾಜು ಮತ್ತು ಲಕ್ಷ್ಮಣ್ ಅವರುಗಳಿಗೆ ಮನೆ ಊಟ ಪಡೆಯಲು 57ನೇ ಸಿಸಿಎಚ್ ನ್ಯಾಯಾಲಯ ಅನುಮತಿ ನೀಡಿತ್ತು. ಅದರಂತೆ ಜೈಲಲ್ಲಿದ್ದರೂ ಮನೆ ಊಟವನ್ನು ಈ ಆರೋಪಿಗಳು ಸವಿಯುತ್ತಿದ್ದರು, ಆದರೆ ಇದೀಗ ಹೈಕೋರ್ಟ್ ಈ ಆದೇಶಕ್ಕೆ ತಡೆ ನೀಡಿದೆ.
ಕೊಲೆ ಆರೋಪಿ ಪವಿತ್ರಾ ಗೌಡ, ನಾಗರಾಜು ಮತ್ತು ಲಕ್ಷ್ಮಣ್ ಅವರುಗಳು ನ್ಯಾಯಾಂಗ ಬಂಧನದಲ್ಲಿದ್ದು ಅವರಿಗೆ ವಾರಕ್ಕೊಮ್ಮೆ ಮನೆ ಊಟ ಲಭಿಸುತ್ತಿತ್ತು. ಟ್ರಯಲ್ ಕೋರ್ಟ್ಗೆ ಅರ್ಜಿ ಸಲ್ಲಿಸಿ ಈ ಮೂವರು ಜೈಲಿನಲ್ಲೇ ಮನೆ ಊಟ ಸಿಗುವಂತೆ ವ್ಯವಸ್ಥೆ ಮಾಡಿಕೊಂಡಿದ್ದರು. ಪೊಲೀಸರ ಮೇಲ್ಮನವಿಯ ಬಳಿಕ ಪ್ರತಿದಿನ ಅಲ್ಲ ಬದಲಿಗೆ ವಾರಕ್ಕೆ ಒಮ್ಮೆ ಮನೆ ಊಟ ಕೊಡಬಹುದು, ವೈದ್ಯರು ಸಲಹೆ ಕೊಟ್ಟರೆ ದರ್ಶನ್ ಸೇರಿದಂತೆ ಪ್ರಕರಣದ ಎಲ್ಲ ಆರೋಪಿಗಳಿಗೂ ಮನೆ ಊಟ ಕೊಡಬಹುದು ಎಂದಿದ್ದರು. ಆದರೆ ಇದೀಗ ಈ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಪವಿತ್ರಾ ಗೌಡ ಮತ್ತು ಇತರೆ ಇಬ್ಬರು ಆರೋಪಿಗಳಿಗೆ ಮನೆ ಊಟ ಕೊಡುವಂತೆ 57ನೇ ಸಿಸಿಎಚ್ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಜೈಲಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ಇದೇ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಜೈಲಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದು, ಯಾವುದೇ ಆರೋಪಿಗೆ ವಿಶೇಷ ಸವಲತ್ತು ನೀಡಬಾರದು ಎಂದು ಸೂಚಿಸಿದೆ, ವಿಶೇಷ ಸವಲತ್ತು ನೀಡಿದಲ್ಲಿ ಕ್ರಮ ಜರುಗಿಸುವ ಎಚ್ಚರಿಕೆ ನೀಡಿದೆ. ಷಚಞ
