PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ: ಪರೋಕ್ಷವಾಗಿ ಸ್ಪಷ್ಟಪಡಿಸಿದ ಗೃಹ ಸಚಿವ ಪರಮೇಶ್ವರ್
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ: ಪರೋಕ್ಷವಾಗಿ ಸ್ಪಷ್ಟಪಡಿಸಿದ ಗೃಹ ಸಚಿವ ಪರಮೇಶ್ವರ್
ಮುಖಪುಟಮೈಸೂರು ನಗರರಾಜಕೀಯ

ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ: ಪರೋಕ್ಷವಾಗಿ ಸ್ಪಷ್ಟಪಡಿಸಿದ ಗೃಹ ಸಚಿವ ಪರಮೇಶ್ವರ್

Prathinidhi News
Last updated: February 7, 2026 1:22 pm
Prathinidhi News
Published February 7, 2026
Share
SHARE

ಮೈಸೂರು, ಫೆಬ್ರವರಿ 7, 2026 : ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಮುಖ್ಯಮಂತ್ರಿ ಬದಲಾವಣೆ ಹಾಗೂ ಅಧಿಕಾರ ಹಂಚಿಕೆಯ ಕುರಿತಾದ ಚರ್ಚೆಗಳಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮೈಸೂರಿನಲ್ಲಿ ಇಂದು ತೆರೆ ಎಳೆಯುವ ಪ್ರಯತ್ನ ನಡೆಸಿದರು. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನದ ಹಂಚಿಕೆಯ ಬಗ್ಗೆ ಯಾವುದೇ ಪ್ರಸ್ತಾಪವೇ ನಡೆದಿಲ್ಲ ಮತ್ತು ಹೈಕಮಾಂಡ್ ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಘೋಷಿಸಿದೆ. ಹೈಕಮಾಂಡ್ ಇದುವರೆಗೆ ಸಿದ್ದರಾಮಯ್ಯ ಅವರನ್ನು ಬದಲಿಸುವ ಬಗ್ಗೆ ಯಾವುದೇ ಸೂಚನೆ ನೀಡಿಲ್ಲದಿರುವುದು ಅವರು ಮುಂದುವರಿಯುತ್ತಾರೆ ಎನ್ನುವುದಕ್ಕೆ ಸ್ಪಷ್ಟ ಸಂಕೇತವಾಗಿದೆ ಎಂದು ತಿಳಿಸಿದರು.

ಡಾ. ಯತೀಂದ್ರ ಅವರ ‘ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ’ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಅದು ಅವರ ವೈಯಕ್ತಿಕ ಅಭಿಪ್ರಾಯವಾಗಿರಬಹುದು ಅಥವಾ ಅವರಿಗೆ ಸಿಕ್ಕಿರುವ ಮಾಹಿತಿಯ ಆಧಾರದ ಮೇಲೆ ಹೇಳಿರಬಹುದು ಎಂದರು. ಪಕ್ಷದ ಶಾಸಕರಲ್ಲಿ ಯಾವುದೇ ಗೊಂದಲಗಳಿಲ್ಲ, ಒಂದು ವೇಳೆ ಗೊಂದಲವಿದ್ದಿದ್ದರೆ ಸಿಎಲ್‌ಪಿ ಸಭೆಯಲ್ಲಿ ಶಾಸಕರು ಪ್ರಶ್ನಿಸುತ್ತಿದ್ದರು. ಸದ್ಯಕ್ಕೆ ಮುಖ್ಯಮಂತ್ರಿಗಳು ಬಜೆಟ್ ಮಂಡನೆಗೆ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು. ಹೈಕಮಾಂಡ್ ನಿರ್ಧಾರವೇ ಅಂತಿಮವಾಗಿದ್ದು, ಅವರು ಹೇಳುವವರೆಗೂ ಸಿದ್ದರಾಮಯ್ಯ ಅವರೇ ಅಧಿಕಾರದಲ್ಲಿ ಇರುತ್ತಾರೆ ಎಂದು ಪುನರುಚ್ಚರಿಸಿದರು. ಇನ್ನು ತಾವೇ ಯಾವಾಗ ಸಿಎಂ ಆಗುತ್ತೀರಿ ಎಂಬ ಮಾಧ್ಯಮಗಳ ಪ್ರಶ್ನೆಗೆ “ಆಮೇಲೆ ಹೇಳ್ತೀನಿ ನಡೀರಿ” ಎಂದು ನಗುತ್ತಾ ಉತ್ತರಿಸಿದರು.

ಸಾಲ ಮನ್ನಾ ಮತ್ತು ಡ್ರಗ್ಸ್ ಹಾವಳಿ ವಿರುದ್ಧ ಕಠಿಣ ಕ್ರಮ ಅಲ್ಪಸಂಖ್ಯಾತರ ಸಾಲ ಮನ್ನಾ ಕುರಿತಾದ ಟೀಕೆಗಳಿಗೆ ಉತ್ತರಿಸಿದ ಪರಮೇಶ್ವರ್, ಸರ್ಕಾರ ಈ ಹಿಂದೆಯೂ ರೈತರ ಸೇರಿದಂತೆ ವಿವಿಧ ಸಮುದಾಯಗಳ ಸಾಲ ಮನ್ನಾ ಮಾಡಿದೆ, ಇದರಲ್ಲಿ ಯಾವುದೇ ರಾಜಕೀಯವಿಲ್ಲ ಎಂದು ಸಮರ್ಥಿಸಿಕೊಂಡರು. ಮೈಸೂರಿನಲ್ಲಿ ಡ್ರಗ್ಸ್ ಹಾವಳಿ ಬಗ್ಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಕೆಮಿಕಲ್ ಫ್ಯಾಕ್ಟರಿಗಳನ್ನು ತಪಾಸಣೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ಇತ್ತೀಚಿನ ಎನ್‌ಸಿಬಿ ದಾಳಿಯ ವರದಿಗಳ ಕುರಿತು ಅನುಮಾನ ವ್ಯಕ್ತಪಡಿಸಿದ ಸಚಿವರು, ಸ್ಥಳೀಯ ಪೊಲೀಸರಿಗೆ ಲಭ್ಯವಾದ ಮಾಹಿತಿಗೂ ಎನ್‌ಸಿಬಿ ಪತ್ರಿಕಾ ಹೇಳಿಕೆಗೂ ವ್ಯತ್ಯಾಸವಿದ್ದು, ಕೋರ್ಟ್‌ನಲ್ಲಿ ದಾಖಲಾದ ಮಾಹಿತಿಯಲ್ಲಿ ಡ್ರಗ್ಸ್ ಪತ್ತೆಯಾದ ಬಗ್ಗೆ ಉಲ್ಲೇಖವಿಲ್ಲ ಎಂದು ಪ್ರಶ್ನಿಸಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟ

ಶಿಕ್ಷಣ ಇಲಾಖೆ ಮಹತ್ವದ ತೀರ್ಮಾನ : SSLC ಟಾಪರ್‌ಗಳಿಗೆ ಲ್ಯಾಪ್ ಟಾಪ್ ಬದಲಿಗೆ ನಗದು ಬಹುಮಾನ ನೀಡಲು ಆದೇಶ

January 24, 2026
ಮುಖಪುಟಮೈಸೂರು ಗ್ರಾಮಾಂತರ

ಹುಣಸೂರು: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆ ಸಾವು, ಇಬ್ಬರಿಗೆ ಗಾಯ

January 27, 2026
ಮುಖಪುಟಮೈಸೂರು ನಗರ

ಮೈಸೂರು: ವಿಶ್ವ ಮಧುಮೇಹ ದಿನದ ಅಂಗವಾಗಿ ಬೃಹತ್ ವಾಕಥಾನ್; ಜಾಗೃತಿ ಮೂಡಿಸಿದ ಭಾನವಿ ಆಸ್ಪತ್ರೆ

November 14, 2025
ಕ್ರೀಡೆಮುಖಪುಟರಾಜಕೀಯ

IOA ಅಧ್ಯಕ್ಷೆ ಪಿ.ಟಿ ಉಷಾ ಪತಿ ಶ್ರೀನಿವಾಸನ್ ನಿಧನ : ಪ್ರಧಾನಿ ಮೋದಿ ಸಂತಾಪ

January 30, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?