ಹೆಚ್ ಡಿ ಕೋಟೆ, ನವೆಂಬರ್ 12, 2025 : ಹೆಚ್ ಡಿ ಕೋಟೆ ತಾಲೂಕಿನ ಮೇಟಿಕುಪ್ಪೆ ಮುಖ್ಯ ರಸ್ತೆಯಲ್ಲಿರುವ ಬಸವನಗಿರಿ ಆಶ್ರಮ ಶಾಲೆಯಲ್ಲಿ ಭಾರೀ ಗಾತ್ರದ ಹೆಬ್ಬಾವು ಪ್ರತ್ಯಕ್ಷವಾಗಿದ್ದು, ಕೆಲಕಾಲ ಆಶ್ರಮ ಶಾಲೆಯಲ್ಲಿದ್ದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಸಿದ್ದ ಘಟನೆ ಜರುಗಿದೆ.
ಶಾಲೆಯ ಆವರಣದಲ್ಲಿ ಸುಮಾರು 15 ಅಡಿ ಉದ್ದದ ಭಾರೀ ಗಾತ್ರದ ಹೆಬ್ಬಾವು ಪ್ರತ್ಯಕ್ಷವಾಗಿದ್ದು, ಶಿಕ್ಷಕರು ಮತ್ತು ವಿದ್ಯಾರ್ಥಿಗಳಲ್ಲಿ ಆತಂಕ ಮನೆ ಮಾಡಿತ್ತು. ನಂತರ ವಿಷಯ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಗ್ರಾಮಸ್ಥರ ಸಹಾಯದಿಂದ ಭಾರೀ ಗಾತ್ರದ ಹೆಬ್ಬಾವು ರಕ್ಷಣೆ ಮಾಡಿದ್ದಾರೆ. ಹಾಗೂ ರಕ್ಷಿಸಿದ ಹೆಬ್ಬಾವನ್ನು ಸುರಕ್ಷಿತವಾಗಿ ದೂರದ ಅರಣ್ಯ ಪ್ರದೇಶಕ್ಕೆ ರವಾನೆ ಮಾಡಿದ್ದಾರೆ.
