2028ರಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ. ಲೋಕಸಭೆ ಚುನಾವಣೆ ಸಂಬಂಧ ಈಗಾಗಲೇ ಸಭೆ ಮಾಡುತ್ತಿದ್ದೇವೆ. ಕೆಲ ಸಚಿವರಿಗೂ ಲೋಕಸಭಾ ಚುನಾವಣೆಗೆ ಸ್ಪರ್ಧಿಸಬೇಕೆಂಬ ಆಸೆ ಇದೆ. ನನಗೂ ಕೂಡ ಪಾರ್ಲಿಮೆಂಟ್ಗೆ ಹೋಗಬೇಕು ಎಂಬ ಆಸೆ ಇದೆ. ಕಾಂಗ್ರೆಸ್ ಜನರ ಬದುಕಿನ ಬಗ್ಗೆ ಯೋಚಿಸುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
