PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ನಿಯಮಬಾಹಿರ ನೇಮಕಾತಿ ಆರೋಪ: ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ನಿಯಮಬಾಹಿರ ನೇಮಕಾತಿ ಆರೋಪ: ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭ
ಮುಖಪುಟಮೈಸೂರು ನಗರ

ನಿಯಮಬಾಹಿರ ನೇಮಕಾತಿ ಆರೋಪ: ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭ

Prathinidhi News
Last updated: December 3, 2025 3:57 pm
Prathinidhi News
Published December 3, 2025
Share
SHARE

ಮೈಸೂರು, ಡಿಸೆಂಬರ್‌ 3, 2025 : 2025-26ನೇ ಸಾಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯಲ್ಲಿ ನಿಯಮಬಾಹಿರ ಆಯ್ಕೆ ಕೌನ್ಸಿಲಿಂಗ್ ನಡೆಸಲಾಗುತ್ತಿದೆ ಎಂದು ಆರೋಪಿಸಿ, ಮೈಸೂರು ಜಿಲ್ಲೆಯ ಅತಿಥಿ ಉಪನ್ಯಾಸಕರು ಇಂದಿನಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಆರಂಭಿಸಿದ್ದಾರೆ.

Contents
ಸಾವಿರಾರು ಅತಿಥಿ ಉಪನ್ಯಾಸಕರು ಬೀದಿಗೆವಯೋಮಿತಿ ಮೀರಿದವರ ಭವಿಷ್ಯ ಅತಂತ್ರ

ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯ ಮೈಸೂರು ಜಿಲ್ಲಾ ಘಟಕದ ಗೌರವಾಧ್ಯಕ್ಷರಾದ ಹನುಮಂತೇಶ್ ಅವರ ನೇತೃತ್ವದಲ್ಲಿ, ಮೈಸೂರಿನ ಹುಣಸೂರು ರಸ್ತೆಯಲ್ಲಿರುವ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಮುಂಭಾಗದಲ್ಲಿ ಧರಣಿ ಆರಂಭವಾಗಿದೆ.

ಸಾವಿರಾರು ಅತಿಥಿ ಉಪನ್ಯಾಸಕರು ಬೀದಿಗೆ

ಪ್ರತಿಭಟನಾಕಾರರು ನೀಡಿರುವ ಮಾಹಿತಿ ಪ್ರಕಾರ, ರಾಜ್ಯದಾದ್ಯಂತ ಇರುವ 440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 10,972 ಅತಿಥಿ ಉಪನ್ಯಾಸಕರು ಕಳೆದ ಹತ್ತು, ಹದಿನೈದು ಮತ್ತು ಇಪ್ಪತ್ತು ವರ್ಷಗಳಿಂದ ಕೇವಲ ಕನಿಷ್ಠ ಗೌರವಧನ ವೇತನ ಪಡೆದು ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ.

ಆದರೆ, ಪ್ರಸಕ್ತ 2025-26ನೇ ಸಾಲಿನಲ್ಲಿ, ಇವರಲ್ಲಿ 6,904 ಅತಿಥಿ ಉಪನ್ಯಾಸಕರು ಯುಜಿಸಿ (UGC) ಅರ್ಹತೆ ಪಡೆದಿಲ್ಲ ಎಂಬ ಕಾರಣಕ್ಕಾಗಿ ಅವರನ್ನು ಕೆಲಸದಿಂದ ತೆಗೆದು ಹಾಕಿ, ಹೊಸದಾಗಿ ನೇಮಕಾತಿ ಮಾಡಲು ಈಗಾಗಲೇ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ನಡೆಸಲಾಗಿದೆ.

- ಜಾಹೀರಾತು -

ವಯೋಮಿತಿ ಮೀರಿದವರ ಭವಿಷ್ಯ ಅತಂತ್ರ

ಇಲಾಖೆಯ ಈ ಕ್ರಮದಿಂದಾಗಿ ಸಾವಿರಾರು ಅತಿಥಿ ಉಪನ್ಯಾಸಕರು ದಿಢೀರ್ ಆಗಿ ಬೀದಿಗೆ ಬೀಳುವಂತಾಗಿದೆ.  ಕೆಲಸ ಕಳೆದುಕೊಳ್ಳುತ್ತಿರುವ ಅನೇಕ ಉಪನ್ಯಾಸಕರು ಬೇರೆ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಈಗಾಗಲೇ ವಯೋಮಿತಿ ಮೀರಿದೆ. ಇವರನ್ನೇ ಅವಲಂಬಿಸಿರುವ ಕುಟುಂಬಗಳು ಮತ್ತು ವಯೋವೃದ್ಧ ತಂದೆ-ತಾಯಿಯರ ಜೀವನ ನಿರ್ವಹಣೆ ಕಷ್ಟಕರವಾಗಲಿದೆ ಎಂದು ಪ್ರತಿಭಟನಾಕಾರರು ಕಳವಳ ವ್ಯಕ್ತಪಡಿಸಿದ್ದಾರೆ.

ಕಾಲೇಜು ಶಿಕ್ಷಣ ಇಲಾಖೆ ನಡೆಸುತ್ತಿರುವ ಈ ಕೌನ್ಸಿಲಿಂಗ್ ಪ್ರಕ್ರಿಯೆಯು ನಿಯಮಬಾಹಿರವಾಗಿದೆ ಹಾಗೂ ಸಾಮಾಜಿಕ ನ್ಯಾಯ ಮತ್ತು ನೀತಿಗೂ ವಿರುದ್ಧವಾಗಿದೆ ಎಂದು ಪ್ರತಿಭಟನಾಕಾರರು ಬಲವಾಗಿ ಆಪಾದಿಸಿದ್ದಾರೆ. ಹೀಗಾಗಿ, ಸರ್ಕಾರ ಮತ್ತು ಕಾಲೇಜು ಶಿಕ್ಷಣ ಇಲಾಖೆಯು ಕೂಡಲೇ ಮಧ್ಯಪ್ರವೇಶಿಸಿ, ಅತಿಥಿ ಉಪನ್ಯಾಸಕರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಮತ್ತು ನಿಯಮಬಾಹಿರ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ತಡೆಯಬೇಕು ಎಂದು ಪ್ರತಿಭಟನಾಕಾರರು ಏಕಕಂಠದಿಂದ ಆಗ್ರಹಿಸಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರು: ಕರ್ತವ್ಯದಲ್ಲೇ ಸೆಕ್ಯೂರಿಟಿ ಗಾರ್ಡ್ ಸಾವು ; ರಜೆ ನೀಡದ ಸೂಪರ್‌ವೈಸರ್ ವಿರುದ್ಧ ಆಕ್ರೋಶ, ಪ್ರತಿಭಟನೆ!

November 12, 2025
ಮುಖಪುಟಮೈಸೂರು ಗ್ರಾಮಾಂತರ

ಟಿ. ನರಸೀಪುರ: ಕಾಡಾನೆ ದಾಳಿಗೆ ರೈತ ಬಲಿ

February 18, 2026
ಮುಖಪುಟಮೈಸೂರು ನಗರ

ಮೈಸೂರು : ಬೋಗಾದಿ ಬಳಿ 4 ವರ್ಷದ ಹೆಣ್ಣು ಚಿರತೆ ಸೆರೆ..! ಸಾರ್ವಜನಿಕರ ನಿಟ್ಟುಸಿರು

December 29, 2025
ಬೆಂಗಳೂರುಮುಖಪುಟರಾಜಕೀಯ

We the people of INDIA ಎನ್ನುವುದೇ ನಮ್ಮ ಸಂವಿಧಾನದ ಮೂಲ ಮಂತ್ರ ; ಸಿಎಂ ಸಿದ್ದರಾಮಯ್ಯ

November 26, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?