PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಭಾರತ-ಸೌತ್ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಸಮಗ್ರ > ಭಾರತ-ಸೌತ್ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ
ಸಮಗ್ರ

ಭಾರತ-ಸೌತ್ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ

Prathinidhi News
Last updated: December 23, 2023 9:39 am
Prathinidhi News
Published December 23, 2023
Share
SHARE

ಭಾರತ-ಸೌತ್ ಆಫ್ರಿಕಾ ನಡುವಣ ಸೀಮಿತ ಓವರ್​ಗಳ ಸರಣಿ ಮುಕ್ತಾಯಗೊಂಡಿದೆ. ಮೂರು ಪಂದ್ಯಗಳ ಟಿ20 ಸರಣಿಯು 1-1 ಅಂತರದಿಂದ ಸಮಬಲಗೊಂಡರೆ, ಏಕದಿನ ಸರಣಿಯನ್ನು ಟೀಮ್ ಇಂಡಿಯಾ 2-1 ಅಂತರದಿಂದ ಗೆದ್ದುಕೊಂಡಿದೆ. ಇದೀಗ ಉಭಯ ತಂಡಗಳು ಟೆಸ್ಟ್ ಸರಣಿಗಾಗಿ ಸಜ್ಜಾಗುತ್ತಿದೆ.

ಈ ಸರಣಿಯಲ್ಲಿ 2 ಪಂದ್ಯಗಳನ್ನಾಡಲಿದ್ದು, ಮೊದಲ ಪಂದ್ಯವು ಬಾಕ್ಸಿಂಗ್ ಡೇ ಟೆಸ್ಟ್ ಆಗಿರಲಿದೆ. ಅಂದರೆ ಕ್ರಿಸ್​ಮಸ್ ಮರುದಿನ ಡಿಸೆಂಬರ್ 26 ರಿಂದ ಮೊದಲ ಟೆಸ್ಟ್ ಪಂದ್ಯ ಶುರುವಾಗಲಿದೆ. ಈ ಪಂದ್ಯವು ಸೆಂಚುರಿಯನ್​ನಲ್ಲಿ ನಡೆದರೆ, 2ನೇ ಪಂದ್ಯವು ಕೇಪ್ಜನವರಿ 3 ರಿಂದ ​ಟೌನ್​ನಲ್ಲಿ ಆರಂಭವಾಗಲಿದೆ.

ಈ ಎರಡೂ ಪಂದ್ಯಗಳು ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ನ ಭಾಗವಾಗಿದ್ದು, ಹೀಗಾಗಿ ಉಭಯ ತಂಡಗಳ ಪಾಲಿಗೆ ತುಂಬಾ ಮಹತ್ವದ ಪಂದ್ಯಗಳಾಗಿವೆ. ಹೀಗಾಗಿ ಟೆಸ್ಟ್ ಸರಣಿಯ ಗೆಲುವಿನೊಂದಿಗೆ ಟೀಮ್ ಇಂಡಿಯಾ ಹೊಸ ವರ್ಷಕ್ಕೆ ಮುನ್ನುಡಿ ಬರೆಯುವ ಇರಾದೆಯಲ್ಲಿದೆ ಟೀಮ್ ಇಂಡಿಯಾ.

ಉಭಯ ತಂಡಗಳ ಮುಖಾಮುಖಿ:

ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು 42 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 15 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಸೌತ್ ಆಫ್ರಿಕಾ ತಂಡವು 17 ಮ್ಯಾಚ್​ಗಳಲ್ಲಿ ಗೆಲುವಿನ ನಗೆ ಬೀರಿದೆ. ಇನ್ನು 10 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿದೆ.

- ಜಾಹೀರಾತು -

ಇನ್ನು ಕೊನೆಯ ಐದು ಟೆಸ್ಟ್ ಪಂದ್ಯಗಳ ಮುಖಾಮುಖಿಯಲ್ಲಿ ಸೌತ್ ಆಫ್ರಿಕಾ 2 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಟೀಮ್ ಇಂಡಿಯಾ 3 ಪಂದ್ಯಗಳಲ್ಲಿ ಗೆಲುವು ದಾಖಲಿಸಿ ಮೇಲುಗೈ ಹೊಂದಿದೆ. ಆದರೆ ಈ ಬಾರಿ ಪಂದ್ಯ ನಡೆಯುತ್ತಿರುವುದು ಸೌತ್ ಆಫ್ರಿಕಾದಲ್ಲಿ. ಹೀಗಾಗಿ ಭಾರತ ತಂಡಕ್ಕೆ ಸೌತ್ ಆಫ್ರಿಕಾ ತಂಡದಿಂದ ಕಠಿಣ ಪೈಪೋಟಿ ಎದುರಾಗುವುದಂತು ನಿಶ್ಚಿತ. ಅದರಂತೆ ಈ ಸರಣಿಗಾಗಿ ಆಯ್ಕೆ ಮಾಡಲಾದ ಉಭಯ ತಂಡಗಳು ಈ ಕೆಳಗಿನಂತಿದೆ…

ಭಾರತ ಟೆಸ್ಟ್​ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ.

ಸೌತ್ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಡೇವಿಡ್ ಬೆಡಿಂಗ್‌ಹ್ಯಾಮ್, ನಾಂಡ್ರೆ ಬರ್ಗರ್, ಜೆರಾಲ್ಡ್ ಕೊಟ್ಝಿ, ಟೋನಿ ಡಿ ಝೋರ್ಝಿ, ಡೀನ್ ಎಲ್ಗರ್, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ವಿಯಾನ್ ಮುಲ್ಡರ್, ಲುಂಗಿ ಎನ್‌ಗಿಡಿ, ಕೀಗನ್ ಪೀಟರ್‌ಸನ್, ಕಗಿಸೊ ರಬಾಡ, ಟ್ರಿಸ್ಟಾನ್ ಸ್ಟಬ್, ಕೈಲ್ ವೆರ್ರೆನ್ನೆ.

ಟೆಸ್ಟ್ ಸರಣಿ ವೇಳಾಪಟ್ಟಿ:

  1. ಡಿಸೆಂಬರ್ 26 ರಿಂದ- ಮೊದಲ ಟೆಸ್ಟ್ ಪಂದ್ಯ (ಸೆಂಚುರಿಯನ್)
  2. ಜನವರಿ 3 ರಿಂದ- ಎರಡನೇ ಟೆಸ್ಟ್  ಪಂದ್ಯ (ಕೇಪ್​ಟೌನ್).
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಸಮಗ್ರ

ಸುಳ್ಳು ಜಾತಿ ಪ್ರಮಾಣಪತ್ರ: ಉಪ‌ ತಹಸೀಲ್ದಾರ್‌ ಪರಿಶೀಲನೆ

July 10, 2024
ಸಮಗ್ರ

ಜಿಲ್ಲೆಯ ಮರುನಾಮಕರಣಕ್ಕೆ ಸಹಕರಿಸಿ

July 13, 2024
ಚುನಾವಣೆಮುಖಪುಟಸಮಗ್ರ

ಪಾಕಿಸ್ತಾನ ಬಳೆ ತೊಟ್ಟುಕೊಂಡಿಲ್ಲ ಅಂದ್ರೆ ನಾವು ತೊಡಿಸ್ತೇವೆ: ಪ್ರಧಾನಿ ಮೋದಿ

May 13, 2024
ಸಮಗ್ರ

ಚಿತ್ರ ಮತ್ತು ಶೀರ್ಷಿಕೆ

March 21, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?