PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಇಂದು ಭಾರತ ತಂಡ ಪ್ರಕಟ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಇಂದು ಭಾರತ ತಂಡ ಪ್ರಕಟ
ಜಿಲ್ಲೆ

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಇಂದು ಭಾರತ ತಂಡ ಪ್ರಕಟ

Prathinidhi News
Last updated: November 30, 2023 10:17 am
Prathinidhi News
Published November 30, 2023
Share
SHARE
ಐಸಿಸಿ ಏಕದಿನ ವಿಶ್ವಕಪ್‌ನ ಮುಕ್ತಾಯದ ನಂತರ, ಈಗ ಟಿ20 ವಿಶ್ವಕಪ್ 2024 ರ ಕಡೆಗೆ ಎಲ್ಲ ತಂಡಗಳು ಗಮನ ಹರಿಸಿದೆ. ಇದರ ಮೊದಲ ಹೆಜ್ಜೆಯಾಗಿ ಭಾರತ ತಂಡವು ಈಗಾಗಲೇ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಆಡುತ್ತಿದೆ. ಇದಾದ ಬಳಿಕ ಟೀಮ್ ಇಂಡಿಯಾವು ದಕ್ಷಿಣ ಆಫ್ರಿಕಾ ಪ್ರವಾಸ ಬೆಳೆಸಲಿದೆ. ಇಲ್ಲಿ ಭಾರತವು ಮೂರು ಪಂದ್ಯಗಳ ಟಿ20-ಏಕದಿನ ಸರಣಿ ಮತ್ತು ಎರಡು ಟೆಸ್ಟ್ ಆಡಲಿದೆ.ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿ ಇಂದು ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇದೇವೇಳೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮತ್ತು ಆಯ್ಕೆ ಸಮಿತಿಯು ಮುಂದಿನ ವರ್ಷ ಜೂನ್‌ನಲ್ಲಿ ಅಮೆರಿಕದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಬಗ್ಗೆ ಚರ್ಚಿಸಲು ದೆಹಲಿಯಲ್ಲಿ ಸಭೆ ಸೇರುವ ಸಾಧ್ಯತೆಯಿದೆ.ಡಿಸೆಂಬರ್ 17 ರಂದು ಜೊಹಾನ್ಸ್​ಬರ್ಗ್‌ನಲ್ಲಿ ಮೊದಲ ಏಕದಿನ ಪಂದ್ಯ, ಎರಡನೇ-ಮೂರನೇ ಪಂದ್ಯ ಗ್ಕೆಬರ್ಹಾದಲ್ಲಿ ಮತ್ತು ಪಾರ್ಲ್‌ನಲ್ಲಿ ನಡೆಯಲಿದೆ. ಡಿಸೆಂಬರ್ 26 ರಿಂದ 30 ರವರೆಗೆ ಸೆಂಚುರಿಯನ್ ನಲ್ಲಿ ಮತ್ತು ಜನವರಿ 3 ರಿಂದ 7 ರವರೆಗೆ ಕೇಪ್ ಟೌನ್ ನಲ್ಲಿ ಟೆಸ್ಟ್ ಪಂದ್ಯಗಳನ್ನು ಆಯೋಜಿಸಲಾಗಿದೆ.

ಐಸಿಸಿ ಏಕದಿನ ವಿಶ್ವಕಪ್‌ನ ಮುಕ್ತಾಯದ ನಂತರ, ಈಗ ಟಿ20 ವಿಶ್ವಕಪ್ 2024 ರ ಕಡೆಗೆ ಎಲ್ಲ ತಂಡಗಳು ಗಮನ ಹರಿಸಿದೆ. ಇದರ ಮೊದಲ ಹೆಜ್ಜೆಯಾಗಿ ಭಾರತ ತಂಡವು ಈಗಾಗಲೇ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಆಡುತ್ತಿದೆ. ಇದಾದ ಬಳಿಕ ಟೀಮ್ ಇಂಡಿಯಾವು ದಕ್ಷಿಣ ಆಫ್ರಿಕಾ ಪ್ರವಾಸ ಬೆಳೆಸಲಿದೆ. ಇಲ್ಲಿ ಭಾರತವು ಮೂರು ಪಂದ್ಯಗಳ ಟಿ20-ಏಕದಿನ ಸರಣಿ ಮತ್ತು ಎರಡು ಟೆಸ್ಟ್ ಆಡಲಿದೆ.

ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿ ಇಂದು ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇದೇವೇಳೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮತ್ತು ಆಯ್ಕೆ ಸಮಿತಿಯು ಮುಂದಿನ ವರ್ಷ ಜೂನ್‌ನಲ್ಲಿ ಅಮೆರಿಕದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಬಗ್ಗೆ ಚರ್ಚಿಸಲು ದೆಹಲಿಯಲ್ಲಿ ಸಭೆ ಸೇರುವ ಸಾಧ್ಯತೆಯಿದೆ.

ಇದರ ನಡುವೆ ಭಾರತ ಟಿ20 ತಂಡಕ್ಕೆ ನಾಯಕ ಯಾರು?, ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಪ್ರಶ್ನೆ ಎದ್ದಿದೆ. ಹಾರ್ದಿಕ್ ಇಂಜುರಿಯಿಂದ ಗುಣಮುಖರಾಗದ ಕಾರಣ ರೋಹಿತ್ ಶರ್ಮಾ ಅವರನ್ನು ಕರೆತರುವ ಬಗ್ಗೆ ಬಿಸಿಸಿಐ ಚರ್ಚಿಸುತ್ತಿದೆ.

ಏಕದಿನ ವಿಶ್ವಕಪ್​ನಲ್ಲಿ ರೋಹಿತ್ ತಂಡವನ್ನು ಮುನ್ನಡೆಸಿದ ರೀತಿ ಕಂಡು ಬಿಸಿಸಿಐ ಖಷಿ ಆಗಿದೆ. ಸದ್ಯ ಪಿಟಿಐ ವರದಿಯ ಪ್ರಕಾರ, ಬಿಸಿಸಿಐ ರೋಹಿತ್ ಅವರನ್ನು ಟಿ20 ನಾಯಕನಾಗಿ ಹಿಂತಿರುಗಿಸಲು ಬಯಸುತ್ತಿದೆ. ಹಿಟ್​ಮ್ಯಾನ್ ಮನವೊಲಿಸಲು ಬಿಸಿಸಿಐ ಮುಂದಾಗಿದೆ. ಸದ್ಯಕ್ಕೆ, ಸೂರ್ಯ ಮತ್ತು ರೋಹಿತ್ ಎರಡು ಹೆಸರುಗಳಿವೆ.

ಆಫ್ರಿಕಾ ವಿರುದ್ಧದ ಪ್ರವಾಸ ಮೂಲಕ ರೋಹಿತ್ ಏಕದಿನ ಮತ್ತು ಟೆಸ್ಟ್‌ಗಳಲ್ಲಿ ಪೂರ್ಣ ಸಮಯದ ನಾಯಕನಾಗಿ ಮರಳಲಿದ್ದಾರೆ. ಆದರೆ, ಆಫ್ರಿಕಾ ಪ್ರವಾಸದ ವೈಟ್ ಬಾಲ್ ಕ್ರಿಕೆಟ್​ನಿಂದ ವಿರಾಟ್ ಕೊಹ್ಲಿ ಹಿಂದೆ ಸರಿದಿದ್ದಾರೆ ಎಂದು ವರದಿಯಾಗಿದೆ. ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ ಕೂಡ ಟೆಸ್ಟ್ ಸರಣಿಯಲ್ಲಿ ಆಡಲಿದ್ದಾರೆ.

ಭಾರತದ ದ. ಆಫ್ರಿಕಾ ಪ್ರವಾಸವು T20I ಪಂದ್ಯದೊಂದಿಗೆ ಪ್ರಾರಂಭವಾಗುತ್ತದೆ. ಮೊದಲ ಪಂದ್ಯ ಡಿಸೆಂಬರ್ 10 ರಂದು ಡರ್ಬನ್‌ನಲ್ಲಿ ನಡೆಯಲಿದೆ. ಡಿಸೆಂಬರ್ 12 ರಂದು ಗ್ಕೆಬರ್ಹಾದಲ್ಲಿ ಎರಡನೇ ಮತ್ತು ಜೋಹಾನ್ಸ್‌ಬರ್ಗ್‌ನಲ್ಲಿ ಮೂರನೇ ಟಿ20 ಪಂದ್ಯ ಆಯೋಜಿಸಲಾಗಿದೆ.

ಡಿಸೆಂಬರ್ 17 ರಂದು ಜೊಹಾನ್ಸ್​ಬರ್ಗ್‌ನಲ್ಲಿ ಮೊದಲ ಏಕದಿನ ಪಂದ್ಯ, ಎರಡನೇ-ಮೂರನೇ ಪಂದ್ಯ ಗ್ಕೆಬರ್ಹಾದಲ್ಲಿ ಮತ್ತು ಪಾರ್ಲ್‌ನಲ್ಲಿ ನಡೆಯಲಿದೆ. ಡಿಸೆಂಬರ್ 26 ರಿಂದ 30 ರವರೆಗೆ ಸೆಂಚುರಿಯನ್ ನಲ್ಲಿ ಮತ್ತು ಜನವರಿ 3 ರಿಂದ 7 ರವರೆಗೆ ಕೇಪ್ ಟೌನ್ ನಲ್ಲಿ ಟೆಸ್ಟ್ ಪಂದ್ಯಗಳನ್ನು ಆಯೋಜಿಸಲಾಗಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಜಿಲ್ಲೆ

ನಾಡಪ್ರಭು ಕೆಂಪೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್ ನಟ ಚೇತನ್ ಅಹಿಂಸಾ ವಿರುದ್ಧ ದೂರು

December 17, 2023
ಜಿಲ್ಲೆ

ಇಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಮಾಜಿ ಸಚಿವ ಸೋಮಣ್ಣ ಭೇಟಿ

November 25, 2023
ಜಿಲ್ಲೆ

ಕನ್ನಡ ಫಲಕ ಹಾಕದ ಬೆಂಗಳೂರಿನ 18,000 ಮಳಿಗೆಗೆ ನೋಟಿಸ್‌

January 12, 2024
ಜಿಲ್ಲೆ

ಬೆಂಗಳೂರು ಕಂಬಳ: ಕೋಣಗಳಿಗೆ ನಿತ್ಯ 2000 ಖರ್ಚು, ಬಾದಾಮಿ ತಿನ್ನಿಸಿ, ಆಯಿಲ್‌ ಮಸಾಜ್‌

November 26, 2023
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?