ಮೈಸೂರು: ಸ್ಪೀಕರ್ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ವಿಚಾರಕ್ಕೆ ಮೈಸೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯ ಸರ್ಕಾರದ ಸಚಿವರ ಕಾರ್ಯ ಪರಿಸ್ಥಿತಿ ನೋಡಿದ್ರೆ ಕಣ್ಣಲ್ಲಿ ನೀರು ತರಿಸುತ್ತೆ. ಮಾತೆತ್ತಿದ್ರೆ ಸಂವಿಧಾನ, ಅಂಬೇಡ್ಕರ್ ಬಗ್ಗೆ ಮಾತನಾಡ್ತಾರೆ. ಆದರೆ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೋಡಿದ್ರೆ, ಕಾಂಗ್ರೆಸ್ ಸಚಿವರು ಪ್ರಜಾಪ್ರಭುತ್ವ ವಿರೋಧಿಗಳು, ದಲಿತ ವಿರೋಧಿಗಳು ಎಂಬುದು ಗೊತ್ತಾಗುತ್ತೆ. ಜಮೀರ್ ಅಹ್ಮದ್ ಖಾನ್ ಹೇಳಿಕೆಯನ್ನ ಸಿಎಂ ಆಗಲಿ, ಡಿಸಿಎಂ ಯಾರು ಸಹ ವಿರೋಧಿಸಿಲ್ಲ. ಜಮೀರ್ ಅಹ್ಮದ್ ಖಾನ್ ರ ಬಳಿ ಸಿಎಂ ಈ ಕೂಡಲೇ ರಾಜೀನಾಮೆ ಪಡೆಯಲಿ ಎಂದು ಜಮೀರ್ ಅಹ್ಮದ್ ಖಾನ್ ರಾಜೀನಾಮೆಗೆ ಬಿ ವೈ ವಿಜಯೇಂದ್ರ ಒತ್ತಾಯಿಸಿದ್ದಾರೆ
