ಬೆಂಗಳೂರು, ಡಿಸೆಂಬರ್ 31, 2025 : ಸಿಎಂ ಸಿದ್ದರಾಮಯ್ಯ ಹೊಸ ವರ್ಷಕ್ಕೆ ಹೊಸ ದಾಖಲೆ ಬರೆಯುತ್ತಿದ್ದಾರೆ.. ಮಾಜಿ ಸಿಎಂ ದೇವರಾಜ ಅರಸು ಅವರ ರೆಕಾರ್ಡ್ ಅನ್ನು ಸಿಎಂ ಮುರಿಯಲಿದ್ದಾರೆ. ಕರ್ನಾಟಕವನ್ನು ದೀರ್ಘಕಾಲ ಆಳಿದ ಸಿಎಂ ಎಂಬ ಖ್ಯಾತಿ ಸಿದ್ದರಾಮಯ್ಯ ಪಾಲಾಗಲಿದ್ದು, ಇಷ್ಟು ವರ್ಷ ದೇವರಾಜ ಅರಸು ಹೆಸರಲ್ಲಿದ್ದ ದಾಖಲೇ ಇನ್ಮುಂದೆ ಸಿಎಂ ಸಿದ್ದರಾಮಯ್ಯ ಪಾಲಾಗಲಿದೆ.

ಸಿದ್ದರಾಮಯ್ಯ ಅವರು ಜ.7ರಂದು ಕರ್ನಾಟಕದ ಅತ್ಯಂತ ದೀರ್ಘಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದು, ಸಂಭ್ರಮಾಚರಣೆಗೆ ಸಿದ್ಧತೆಗಳು ಭರದಿಂದ ನಡೆಯುತ್ತಿವೆ.
ರಾಜ್ಯದೆಲ್ಲೆಡೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ಅಭಿಮಾನಿಗಳು ಈಗಾಗಲೇ ಸಿದ್ಧತೆ ಆರಂಭಿಸಿದ್ದು, ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಮೂಲಕ ಹೈ ಕಮಾಂಡ್ ನಾಯಕರಿಗೆ ಸಿದ್ದರಾಮಯ್ಯ ಶಕ್ತಿ ತೋರಿಸಲು ಸಿದ್ಧತೆ ನಡೆದಿದೆ.
ದೇವರಾಜ ಅರಸು ಅವರು ಈವರೆಗಿನ ದೀರ್ಘಾವಧಿ ಸೇವೆ ಸಲ್ಲಿಸಿದ ಮುಖ್ಯಮಂತ್ರಿಯಾಗಿದ್ದಾರೆ. ಅವರು ಎರಡು ಅವಧಿಗಳಲ್ಲಿ ಒಟ್ಟು 2,792 ದಿನಗಳು ಅಥವಾ 7.6 ವರ್ಷಗಳ ಕಾಲ ಮುಖ್ಯಮಂತ್ರಿ ಹುದ್ದೆಯಲ್ಲಿದ್ದರು. ಸೋಮವಾರ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ 2,784 ದಿನಗಳನ್ನು ಪೂರ್ಣಗೊಳಿಸಿದ್ದಾರೆ.
ಸಿಎಂ ಕುರ್ಚಿ ಹಗ್ಗಜಗ್ಗಾಟದ ನಡುವೆ ಸಿದ್ದರಾಮಯ್ಯ ದೇವರಾಜ ಅರಸು ದಾಖಲೆ ಮುರಿಯುತ್ತಿದ್ದು, ಕಾಂಗ್ರೆಸ್ ನಲ್ಲಿರೋ ಸಿದ್ದರಾಮಯ್ಯ ಬಣ ಕೊಂಚ ದೊಡ್ಡದಾಗಿಯೇ ಬಲ ಪ್ರದರ್ಶನಕ್ಕೆ ಸಿದ್ಧವಾಗಿದೆ.
ಸಿದ್ದರಾಮಯ್ಯ ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ದಿನ ಸಿಎಂ ಆಗಿರೋ ಖ್ಯಾತಿಗೆ ಭಾಜನರಾಗುತ್ತಿದ್ದು, ಬೆಂಬಲಿಗರಲ್ಲಿ ಉತ್ಸಾಹವನ್ನು ಇನ್ನಷ್ಟು ಹೆಚ್ಚಿಸುತ್ತಿದೆ.
