ಪ್ರತಿನಿಧಿ ವರದಿ ಸಾಲಿಗ್ರಾಮ
ಕೋಮುವಾದಿ ಬಿಜೆಪಿಯೊಂದಿಗೆ ಜಾತ್ಯಾತೀತ ಪಕ್ಷವಾದ ಜೆಡಿಎಸ್ ಮೈತ್ರಿ ಮಾಡಿಕೊಂಡು ಪಕ್ಷದ ತತ್ವ ಸಿದ್ಧಾಂತಗಳಿಗೆ ತಿಲಾಂಜಲಿ ಹೇಳಿದ ಕಾರಣ ಬೇಸತ್ತು ಕಾಂಗ್ರೆಸ್‌ಗೆ ಬೇಷರತ್ ಬೆಂಬಲ ನೀಡುತ್ತಿರುವುದಾಗಿ ಮೈಸೂರು ಜಿಲ್ಲಾ ಜೆಡಿಎಸ್ ಸಂಘಟನಾ ಕಾರ್ಯದರ್ಶಿ ಉತ್ತಮ್ ಗೌಡ ರಾಂಪುರ ಹೇಳಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಎಲ್ಲಾ ವರ್ಗಗಳ ಮತದಾರರ ಬೆಂಬಲದಿಂದ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ವಾತಾವರಣವಿದ್ದು,ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರುಗೆಲುವು ನಿಶ್ಚಿತ.
ಕಳೆದ ಬಾರಿ ಈ ಕ್ಷೇತ್ರದಲ್ಲಿ ಜೆಡಿಎಸ್ ಸ್ವಯಂಕೃತ ತಪ್ಪುಗಳಿಂದ ಸೋಲು ಕಂಡಿತ್ತು.ಈ ಬಾರಿಯ ಚುನಾವಣೆಯಲ್ಲೂ ಜೆಡಿಎಸ್ ಪರಾಭವಗೊಳ್ಳಲಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಶ್ರೀರಂಗಪಟ್ಟಣ ಶಾಸಕರು, ಮಾರ್ಗದರ್ಶಕರಾದ ರಮೇಶ್ ಬಂಡಿಸಿದ್ದೇಗೌಡರು ಸಹ ಕಾಂಗ್ರೆಸ್ ಬೆಂಬಲಿಸಲು ಮನವಿ ಮಾಡಿದ್ದಾರೆ. ಈ ಬಾರಿ ನನ್ನ ಸ್ನೇಹಿತರು, ಹಿತೈಷಿಗಳೆಲ್ಲಾ ಕಾಂಗ್ರೆಸ್ ಗೆ ಸಂಪೂರ್ಣ ಬೆಂಬಲ ನೀಡಲಿದ್ದೇವೆ ಎಂದಿದ್ದಾರೆ.
