PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಬೆಂಗಳೂರು-ಮೈಸೂರು ರೈಲು ಮಾರ್ಗದಲ್ಲಿ ಸಚಿವರ ಜಂಟಿ ಪರಿವೀಕ್ಷಣೆ; ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್‌ ನಿಲುಗಡೆಗೆ ಹಸಿರು ನಿಶಾನೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ಬೆಂಗಳೂರು-ಮೈಸೂರು ರೈಲು ಮಾರ್ಗದಲ್ಲಿ ಸಚಿವರ ಜಂಟಿ ಪರಿವೀಕ್ಷಣೆ; ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್‌ ನಿಲುಗಡೆಗೆ ಹಸಿರು ನಿಶಾನೆ
ಬೆಂಗಳೂರುಮುಖಪುಟ

ಬೆಂಗಳೂರು-ಮೈಸೂರು ರೈಲು ಮಾರ್ಗದಲ್ಲಿ ಸಚಿವರ ಜಂಟಿ ಪರಿವೀಕ್ಷಣೆ; ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್‌ ನಿಲುಗಡೆಗೆ ಹಸಿರು ನಿಶಾನೆ

Prathinidhi News
Last updated: April 9, 2026 7:20 pm
Prathinidhi News
Published April 9, 2026
Share
SHARE

ಬೆಂಗಳೂರು, ಏಪ್ರಿಲ್‌ 9, 2026: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಮೈಸೂರಿನವರೆಗೆ ವಿಶೇಷ ರೈಲಿನಲ್ಲಿ ‘ವಿಂಡೋ ಟ್ರೇಲಿಂಗ್’ (Window Trailing) ಮೂಲಕ ಜಂಟಿ ಪರಿವೀಕ್ಷಣೆ ನಡೆಸಿದರು.

ಒಡೆಯರ್ ಎಕ್ಸ್‌ಪ್ರೆಸ್‌ಗೆ ರಾಮನಗರ ನಿಲುಗಡೆ: ಅತ್ಯಂತ ನಿರೀಕ್ಷಿತ ವಿಷಯವಾದ ‘ಒಡೆಯರ್ ಎಕ್ಸ್‌ಪ್ರೆಸ್’ ರೈಲಿಗೆ ರಾಮನಗರದಲ್ಲಿ ನಿಲುಗಡೆ ನೀಡುವ ಕುರಿತು ರೈಲ್ವೆ ಮಂಡಳಿಯಿಂದ ಅಧಿಕೃತ ಅನುಮತಿ ದೊರೆತಿದೆ. ಈ ಸಂಬಂಧ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ರಾಜ್ಯ ಸಚಿವ ವಿ. ಸೋಮಣ್ಣ ಅವರೊಂದಿಗೆ ಕುಮಾರಸ್ವಾಮಿಯವರು ಸಮಾಲೋಚನೆ ನಡೆಸಿದ್ದರು. ಕೇಂದ್ರ ಸಚಿವರು ಸಮಯ ನಿಗದಿಪಡಿಸಿದ ನಂತರ, ರಾಮನಗರದಲ್ಲಿ ನಿಲುಗಡೆಗೆ ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಮಾರ್ಗದುದ್ದಕ್ಕೂ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ: ಸಚಿವರು ಮೈಸೂರು ಮಾರ್ಗದ ಉದ್ದಕ್ಕೂ ರೈಲು ಹಳಿಗಳ ಸ್ಥಿತಿಗತಿ, ರೈಲ್ವೆ ಮಾರ್ಗದ ವ್ಯಾಪ್ತಿಯಲ್ಲಿ ಬರುವ ಅಂಡರ್-ಪಾಸ್‌ಗಳು (Underpass) ಮತ್ತು ಮೇಲ್ಸೇತುವೆಗಳ (Overbridges) ನಿರ್ಮಾಣ ಹಾಗೂ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಖುದ್ದು ವೀಕ್ಷಿಸಿ, ಪರಿಶೀಲನೆ ನಡೆಸಿದರು.

ಅಧಿಕಾರಿಗಳೊಂದಿಗೆ ಸಮಾಲೋಚನೆ: ಈ ಪರಿವೀಕ್ಷಣಾ ಪ್ರವಾಸದಲ್ಲಿ ದಕ್ಷಿಣ ಪಶ್ಚಿಮ ರೈಲ್ವೆ ವಿಭಾಗೀಯ ವ್ಯವಸ್ಥಾಪಕರು ಸೇರಿದಂತೆ ಹಿರಿಯ ರೈಲ್ವೆ ಅಧಿಕಾರಿಗಳು ಹಾಗೂ ರೈಲು ಮಾರ್ಗ ವ್ಯಾಪ್ತಿಗೆ ಬರುವ ಆಯಾ ಕ್ಷೇತ್ರಗಳ ಜನಪ್ರತಿನಿಧಿಗಳು ಭಾಗವಹಿಸಿದ್ದರು. ಪರಿವೀಕ್ಷಣೆ ವೇಳೆ ಮಂಡ್ಯ, ರಾಮನಗರ ಮತ್ತು ಮೈಸೂರು ಲೋಕಸಭಾ ಕ್ಷೇತ್ರಗಳಲ್ಲಿ ಬಾಕಿ ಉಳಿದಿರುವ ರೈಲ್ವೆ ಯೋಜನೆಗಳ ಕುರಿತು ಸಚಿವರು ಮತ್ತು ಉನ್ನತ ಅಧಿಕಾರಿಗಳೊಂದಿಗೆ ಕುಮಾರಸ್ವಾಮಿಯವರು ಸುದೀರ್ಘ ಚರ್ಚೆ ನಡೆಸಿದರು.

- ಜಾಹೀರಾತು -

ಈ ಜಂಟಿ ಪರಿವೀಕ್ಷಣೆಯು ಈ ಭಾಗದ ರೈಲ್ವೆ ಸಂಪರ್ಕ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಮತ್ತು ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟ

ಪೋಕ್ಸೋ ಕೇಸ್ ನಲ್ಲಿ ಮುರುಘಾ ಶ್ರೀಗಳು ಖುಲಾಸೆ..! ಚಿತ್ರದುರ್ಗದ 2ನೇ ಹೆಚ್ಚುವರಿ ಕೋರ್ಟ್ ನಿಂದ ಮಹತ್ವದ ತೀರ್ಪು..!

November 26, 2025
ಜಿಲ್ಲೆಮುಖಪುಟಮೈಸೂರು ಗ್ರಾಮಾಂತರ

ಹುಲಿ ದಾಳಿ ತಡೆಗೆ ಅರಣ್ಯ ಇಲಾಖೆಯಿಂದ ‘ಫೇಸ್ ಮಾಸ್ಕ್’ ಪ್ರಯೋಗ: ಪಶ್ಚಿಮ ಬಂಗಾಳ ಮಾದರಿ ಅನುಸರಣೆ

November 15, 2025
ಮುಖಪುಟಮೈಸೂರು ಗ್ರಾಮಾಂತರ

ತಿ ನರಸೀಪುರ: ಕರೋಹಟ್ಟಿ ಗ್ರಾಮದಲ್ಲಿ ಸಡಗರದ ಯುಗಾದಿ – ಶ್ರೀ ಬಸವೇಶ್ವರಸ್ವಾಮಿ ರಥೋತ್ಸವ ಅದ್ದೂರಿ

March 20, 2026
ಬೆಂಗಳೂರುಮುಖಪುಟ

KSRTC ವತಿಯಿಂದ ಪ್ರಯಾಣಿಕರಿಗೆ ಗಿಫ್ಟ್‌ ; ಫ್ಲೈ ಬಸ್ ನಲ್ಲಿ ನಂದಿನಿ ಸ್ನ್ಯಾಕ್ ಕಿಟ್ ವಿತರಣೆ.!

November 12, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?