ಪ್ರತಿನಿಧಿ ವರದಿ ಕೆ.ಎಂ.ದೊಡ್ಡಿ
ಸಮೀಪದ ಕಾಡುಕೊತ್ತನಹಳ್ಳಿ ಗ್ರಾಮದ ಉದ್ಯಮಿ ಹಾಗೂ ಬಿಜೆಪಿ ಪಕ್ಷದ ಹಿರಿಯ ಮುಖಂಡ ಕೆ.ಮಾದೇಗೌಡ ಮದ್ದೂರು ಕ್ಷೇತ್ರದ ಶಾಸಕ ಕದಲೂರು ಉದಯ್ ಸಮ್ಮುಖದಲ್ಲಿ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಕಾಡುಕೊತ್ತನಹಳ್ಳಿ ಗ್ರಾಮದ ತಮ್ಮ ನಿವಾಸದಲ್ಲಿ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು ಒಪ್ಪಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಿಸಲು ಹಾಗೂ ಶಾಸಕ ಕದಲೂರು ಉದಯ್ ಅವರ ಕೈ ಬಲಪಡಿಸುವ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಕದಲೂರು ಉದಯ್ ಮಾತನಾಡಿ, ಉದ್ಯಮಿ ಹಾಗೂ ಬಿಜೆಪಿ ಪಕ್ಷದ ಹಿರಿಯ ಮುಖಂಡ ಕೆ.ಮಾದೇಗೌಡ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷದ ತತ್ತ್ವ ಸಿದ್ಧಾಂತ ಒಪ್ಪಿಕೊಂಡು ಪಕ್ಷ ಸೇರಿರುವುದು ಉತ್ತಮ ಬೆಳೆವಣಿಗೆಯಾಗಿದ್ದು ,ಕಾಂಗ್ರೆಸ್ ಪಕ್ಷ ತಳ ಮಟ್ಟದಿಂದ ಸಂಘಟಿಸಲು ಹಾಗೂ ಜನಪರ ಯೋಜನೆಗಳನ್ನು ಜನತೆಗೆ ತಲುಪುಸಲು ನೆರವಾಗುತ್ತದೆ. ಈ ನಿಟ್ಟಿನಲ್ಲಿ ಮದ್ದೂರು ಕ್ಷೇತ್ರದ ಅಭಿವೃದ್ಧಿಗಾಗಿ ಕ್ಷೇತ್ರದಾದ್ಯಂತ ಅನೇಕ ಮುಖಂಡರು ಹಾಗೂ ಅನ್ಯ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದು ಪಕ್ಷದ ಬಲವನ್ನು ಹೆಚ್ಚಿಸಿದೆ ಎಂದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಸ್ಟಾರ್ ಚಂದ್ರು ಅವರು ಜಯಗಳಿಸುವುದು ನಿಶ್ಚಿತವಾಗಿದ್ದು ಎದುರಾಳಿಗಳು ಯಾರೇ ಆಗಿದ್ದರು ಈ ಬಾರಿ ಜಿಲ್ಲೆಯ ಜನತೆ ಕಾಂಗ್ರೆಸ್ ಪಕ್ಷದ ಪರವಾಗಿದ್ದು ಸ್ಟಾರ್ ಚಂದ್ರು ಗೆಲುವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರ ನೇತೃತ್ವದಲ್ಲಿ ಜನಪರ ಆಡಳಿತವನ್ನು ನೀಡುತ್ತಿದ್ದು. ಚುನಾವಣಾ ಪೂರ್ವವಾಗಿ ಜನತೆಗೆ ನೀಡಿದ್ದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ರೂಪಿಸಿ ಸಮರ್ಥವಾಗಿ ಜಾರಿಗೊಳಿಸಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಈ ಬಾರಿ ಲೋಕಸಬಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷದ ಗೆಲುವಿಗೆ ನೆರವಾಗುತ್ತವೆ. ಅಲ್ಲದೆ ಲೋಕಸಭೆ ಚುನಾವಣೆಯಲ್ಲಿ ೨೦ಕ್ಕೂ ಸ್ಥಾನಗಳನ್ನು ಗೆಲ್ಲುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ತಾ.ಪಂ.ಮಾಜಿ ಅಧ್ಯಕ್ಷ ಕೆ.ಕಪನಿಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಟ್ಟನಹಳ್ಳಿ ಶಿವಲಿಂಗೇಗೌಡ, ಮುಖಂಡ ಚಿದಂಬರ ಮೂರ್ತಿ, ಗ್ರಾ.ಪಂ ಸದಸ್ಯ ನಂಜುಡೇಗೌಡ, ಹಾಲು ಉತ್ಪಾದಕರ ಸಂಘದ ಸದಸ್ಯ ಕೆ.ಇ.ರಾಮಣ್ಣ, , ಗುತ್ತಿಗೆದಾರ ಚೆನ್ನನಿಂಗಸ್ವಾಮಿ ,ಗ್ರಾ.ಪಂ. ಸದಸ್ಯ ಕೆ.ಪಿ ದೊಡ್ಡಿ ಸಿದ್ದರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.
—————–
೨೩ಏಒಆ-೧ ಕಾಡುಕೊತ್ತನಹಳ್ಳಿ ಗ್ರಾಮದ ಉದ್ಯಮಿ ಹಾಗೂ ಬಿಜೆಪಿ ಪಕ್ಷದ ಹಿರಿಯ ಮುಖಂಡ ಕೆ.ಮಾದೇಗೌಡರವರು ಮದ್ದೂರು ಕ್ಷೇತ್ರದ ಶಾಸಕ ಕದಲೂರು ಉದಯ್ ರವರ ಸಮ್ಮುಖದಲ್ಲಿ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.