PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಕೆ ಆರ್ ಎಸ್ ಪಕ್ಷದ ಅಭ್ಯರ್ಥಿಯಾಗಿ ಕಂದಹಳ್ಳಿ ಮಹೇಶ್
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚಾಮರಾಜನಗರ > ಕೆ ಆರ್ ಎಸ್ ಪಕ್ಷದ ಅಭ್ಯರ್ಥಿಯಾಗಿ ಕಂದಹಳ್ಳಿ ಮಹೇಶ್
ಚಾಮರಾಜನಗರ

ಕೆ ಆರ್ ಎಸ್ ಪಕ್ಷದ ಅಭ್ಯರ್ಥಿಯಾಗಿ ಕಂದಹಳ್ಳಿ ಮಹೇಶ್

ಪ್ರತಿನಿಧಿ
Last updated: March 22, 2024 5:33 pm
ಪ್ರತಿನಿಧಿ
Published March 21, 2024
Share
SHARE

ಪ್ರತಿನಿಧಿ ವರದಿ ಯಳಂದೂರು

ತಾಲೂಕಿನ ಕಂದಹಳ್ಳಿ ಗ್ರಾಮದ ಮಹೇಶ್ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ (ಕೆ.ಆರ್.ಎಸ್) ಚಾ.ನಗರ ಮೀಸಲು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.

ಇದರ ಬಗ್ಗೆ ಕೆ.ಆರ್‌.ಎಸ್. ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣ ರೆಡ್ಡಿ ಅಧಿಕೃತವಾಗಿ ಪಕ್ಷದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕಂದಹಳ್ಳಿ ಮಹೇಶ್ ಹೆಸರನ್ನು ಘೋಷಣೆ ಮಾಡಿದ್ದಾರೆ.

ಕೆಆರ್‌ಎಸ್ ಪಕ್ಷದ ಅಭ್ಯರ್ಥಿ ಕಂದಹಳ್ಳಿ ಮಹೇಶ್ ಮಾತನಾಡಿ ನಾನು ಈ ಹಿಂದೆ ಗ್ರಾಮ ಪಂಚಾಯಿತಿ ಸದಸ್ಯನಾಗಿ ಆಯ್ಕೆಯಾಗಿ ಕೆಲಸ ಮಾಡಿದ ಅನುಭವವಿದೆ ಜತೆಗೆ ಸಾಮಾಜಿಕ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಕಳೆದ ಬಾರಿ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲೂ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು ನನಗೆ ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನೇಕರು ಪರಿಚಿತರಾಗಿದ್ದಾರೆ. ಜತೆಗೆ ಕೆಆರ್‌ಎಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಈ ಪಕ್ಷಕ್ಕೆ ಸೇರ್ಪಡೆಗೊಂಡ ನನಗೆ ಪಕ್ಷದ ವರಿಷ್ಠರು ಈ ಬಾರಿ ಲೋಕಸಭಾ ಚುನಾವಣೆಯ ಟಿಕೆಟ್ ನೀಡಿದ್ದಾರೆ. ಕ್ಷೇತ್ರದ ಉದ್ದಗಲಕ್ಕೂ ಸಂಚಾರ ಮಾಡಿ ಮತದಾರರಲ್ಲಿ ನನಗೆ ಒಂದು ಅವಕಾಶ ಕೊಡಿ ಎಂದು ಬೇಡಿಕೊಳ್ಳುತ್ತೇನೆ ಎಂದು ತಿಳಿಸಿದರು.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚಾಮರಾಜನಗರಮುಖಪುಟಮೈಸೂರು ಗ್ರಾಮಾಂತರ

ಹಕ್ಕಿ ಜ್ವರ ಭೀತಿ : ಕೇರಳ ಗಡಿ ಭಾಗ ಬಾವಲಿ ಚೆಕ್ ಪೋಸ್ಟ್ ನಲ್ಲಿ ಹೈ ಅಲರ್ಟ್ – ಅಧಿಕಾರಿಗಳ ಭೇಟಿ, ಪರಿಶೀಲನೆ ..!

March 6, 2025
ಚಾಮರಾಜನಗರಮುಖಪುಟಮೈಸೂರು ಗ್ರಾಮಾಂತರ

ಚಾ. ನಗರದ ಕೊಳ್ಳೇಗಾಲದಿಂದ ಉದಕಮಂಡಲಕ್ಕೆ KSRTC ಬಸ್‌ ಪುನರಾರಂಭ..!

January 24, 2025
ಚಾಮರಾಜನಗರ

ದಾಖಲೆ ಇಲ್ಲದ 60 ಸಾವಿರ ರೂ. ಹಣ ವಶ

April 10, 2024
ಚಾಮರಾಜನಗರ

ಜನ-ಜಾನುವಾರು ಹಾನಿಗೆ ಅಗತ್ಯ ಮುನ್ನೆಚ್ಚರಿಕೆಗೆ ಸೂಚನೆ

May 24, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?