PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಕರಾಮುವಿ ಪದವಿ ಪ್ರದಾನ ಸಂಭ್ರಮ: ಮಾಜಿ ಸಚಿವ ಸಿ.ಟಿ. ರವಿ ಅವರಿಗೆ ಪಿಎಚ್‌ಡಿ ಪದವಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಕರಾಮುವಿ ಪದವಿ ಪ್ರದಾನ ಸಂಭ್ರಮ: ಮಾಜಿ ಸಚಿವ ಸಿ.ಟಿ. ರವಿ ಅವರಿಗೆ ಪಿಎಚ್‌ಡಿ ಪದವಿ
ಮುಖಪುಟಮೈಸೂರು ನಗರ

ಕರಾಮುವಿ ಪದವಿ ಪ್ರದಾನ ಸಂಭ್ರಮ: ಮಾಜಿ ಸಚಿವ ಸಿ.ಟಿ. ರವಿ ಅವರಿಗೆ ಪಿಎಚ್‌ಡಿ ಪದವಿ

Prathinidhi News
Last updated: January 31, 2026 3:21 pm
Prathinidhi News
Published January 31, 2026
Share
SHARE

ಮೈಸೂರು, ಜನವರಿ 31, 2026: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 21ನೇ ವಾರ್ಷಿಕ ಘಟಿಕೋತ್ಸವವು ಮೈಸೂರಿನ ಕರಾಮುವಿ ಕ್ಯಾಂಪಸ್‌ನಲ್ಲಿರುವ ಘಟಿಕೋತ್ಸವ ಭವನದಲ್ಲಿ ಅತ್ಯಂತ ಸಂಭ್ರಮದಿಂದ ಜರುಗಿತು. ರಾಜ್ಯಪಾಲರಾದ ಥಾವರಚಂದ್ ಗೆಹಲೋಟ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಮಾರಂಭದಲ್ಲಿ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

 ಈ ಬಾರಿಯ ಘಟಿಕೋತ್ಸವವು ವಿಶೇಷವಾಗಿತ್ತು, ಏಕೆಂದರೆ ಯುಜಿಸಿ ಮಾನ್ಯತೆಯ ಸಮಸ್ಯೆಯಿಂದಾಗಿ ಈ ಹಿಂದೆ ಪದವಿ ಪಡೆಯಲಾಗದಿದ್ದ 2013-14 ಮತ್ತು 2014-15ನೇ ಸಾಲಿನ ವಿದ್ಯಾರ್ಥಿಗಳೂ ಸೇರಿದಂತೆ ಒಟ್ಟು 41,206 ಅಭ್ಯರ್ಥಿಗಳಿಗೆ ವಿವಿಧ ಪದವಿಗಳನ್ನು ಪ್ರದಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಪ್ರೊ. ಭಾಷ್ಯಂ ಸ್ವಾಮೀಜಿ, ಬಿ.ಎಸ್. ನಾಗಭೂಷಣ ಅತ್ರಿ, ಬ್ರಹ್ಮಕುಮಾರಿ ಲಕ್ಷ್ಮೀ ಜೀ, ಡಾ. ಸಿ. ಸೋಮಶೇಖರ್ ಸೇರಿದಂತೆ ಎಂಟು ಗಣ್ಯರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.

ಘಟಿಕೋತ್ಸವದಲ್ಲಿ 2021-22ನೇ ಜನವರಿಯಿಂದ 2023-24ರ ಜನವರಿ ಆವೃತ್ತಿಯ 10,623 ವಿದ್ಯಾರ್ಥಿಗಳು ಹಾಗೂ ಹಳೆಯ ಸಾಲಿನ 30,515 ಅಭ್ಯರ್ಥಿಗಳು ಪದವಿ ಸ್ವೀಕರಿಸಿದರು. ಒಟ್ಟಾರೆ ಫಲಿತಾಂಶದಲ್ಲಿ ಮತ್ತು ಪದವಿ ಪಡೆದವರಲ್ಲಿ ಮಹಿಳೆಯರೇ ಮೇಲುಗೈ ಸಾಧಿಸಿರುವುದು ಈ ಬಾರಿಯ ವಿಶೇಷತೆಯಾಗಿತ್ತು. ಸಾಧಕ ವಿದ್ಯಾರ್ಥಿಗಳಿಗೆ 65 ಚಿನ್ನದ ಪದಕ ಹಾಗೂ 62 ನಗದು ಬಹುಮಾನಗಳನ್ನು ವಿತರಿಸಿ ಪ್ರೋತ್ಸಾಹಿಸಲಾಯಿತು. ಶೈಕ್ಷಣಿಕವಾಗಿ ಶೇ. 75.50 ರಷ್ಟು ಉತ್ತಮ ಫಲಿತಾಂಶ ದಾಖಲಾಗಿದ್ದು, ಮುಕ್ತ ವಿಶ್ವವಿದ್ಯಾಲಯವು ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿದೆ.

ಇದೇ ವೇದಿಕೆಯಲ್ಲಿ ಮಾಜಿ ಸಚಿವ ಸಿ.ಟಿ. ರವಿ ಅವರು ‘ಎನ್‌ಡಿಎ ಹಾಗೂ ಯುಪಿಎ ಸಮ್ಮಿಶ್ರ ಸರ್ಕಾರಗಳ ತುಲನಾತ್ಮಕ ಅಧ್ಯಯನ’ ವಿಷಯದ ಕುರಿತು ಸಲ್ಲಿಸಿದ್ದ ಪ್ರಬಂಧಕ್ಕಾಗಿ ಪಿಎಚ್‌ಡಿ ಪದವಿ ಸ್ವೀಕರಿಸಿ ಎಲ್ಲರ ಗಮನ ಸೆಳೆದರು. ನಾಲ್ಕು ವರ್ಷಗಳ ಸುದೀರ್ಘ ಅಧ್ಯಯನದ ನಂತರ ಪದವಿ ಪಡೆದ ಸಂಭ್ರಮ ಹಂಚಿಕೊಂಡ ಅವರು, ರಾಜಕೀಯ ಕ್ಷೇತ್ರದ ಅನುಭವವು ತಮ್ಮ ಸಂಶೋಧನೆಗೆ ಪೂರಕವಾಗಿತ್ತು ಮತ್ತು ಓದುವ ಹವ್ಯಾಸವೇ ತಮಗೆ ಈ ಯಶಸ್ಸು ತಂದುಕೊಟ್ಟಿದೆ ಎಂದು ಹರ್ಷ ವ್ಯಕ್ತಪಡಿಸಿದರು.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಸಿಎಂ ತವರು ಮೈಸೂರು ಜಿಲ್ಲೆಯಲ್ಲಿ ಫ್ಲೆಕ್ಸ್ ಕಿರಿಕ್: ಎಚ್‌ಡಿಕೆ ಹಾಗೂ ಸಾ.ರಾ. ಮಹೇಶ್ ಭಾವಚಿತ್ರಕ್ಕೆ ಅವಮಾನ

January 17, 2026
ಮುಖಪುಟಮೈಸೂರು ನಗರರಾಜಕೀಯ

ಕೆಡಿಪಿ ಸಭೆ ನಂತರ ಸಿಎಂ ಸಿದ್ದರಾಮಯ್ಯ: ‘ಜನರನ್ನು ಅಲೆಸುವ ಅಧಿಕಾರಿಗಳ ವಿರುದ್ಧ ಕ್ರಮ’, ‘ಮೈಸೂರನ್ನು ಡ್ರಗ್ಸ್‌ ಮುಕ್ತಗೊಳಿಸಿ’

November 11, 2025
ಮುಖಪುಟರಾಜಕೀಯ

ಭೀಕರ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ದುರ್ಮರಣ..!

January 28, 2026
ಬೆಂಗಳೂರುಮುಖಪುಟಸಿನಿಮಾ

ಮೋಹಕತಾರೆ ನಟಿ ರಮ್ಯಾಗೆ 43ನೇ ಹುಟ್ಟುಹಬ್ಬದ ಸಂಭ್ರಮ

November 29, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?