ಬೆಂಗಳೂರು, ನವೆಂಬರ್ 27, 2025 : ರಾಜ್ಯ ರಾಜಕೀಯದಲ್ಲಿ ಸಿಎಂ ಕುರ್ಚಿ ಕದನ ತಾರಕಕ್ಕೇರಿದ್ದು, ಸಿದ್ದು – ಡಿಕೆಶಿ ನಡುವೆ ಮುಸುಕಿನ ಗುದ್ಧಾಟ ಮುಂದುವರಿದಿದೆ. ನಾ ಕೊಡೆ ನೀ ಬಿಡೆ ಎಂಬ ಸ್ಥಿತಿ ನಿರ್ಮಾಣವಾಗಿದೆ.ಸದ್ಯ ಹೈ ಕಮಾಂಡ್ ಅಂಗಳಕ್ಕೆ ಸಿಎಂ ಚೇರ್ ಫೈಟ್ ಬಿದ್ದಿದ್ದು ಹೈ ನಾಯಕರು ಸಮಸ್ಯೆ ಬಗೆಹರಿಸೋ ನಿಟ್ಟಿನಲ್ಲಿ ಸರ್ವ ಪ್ರಯತ್ನ ನಡೆಸ್ತಿದ್ದಾರೆ.
ಇದರ ನಡುವೆ ಇಂದು ಡಿಸಿಎಂ ಡಿಕೆಶಿ ಪೋಸ್ಟ್ ಕರುನಾಡಿನೆಲ್ಲೆಡೆ ವೈರಲ್ ಆಗಿದೆ. ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರದ ಗುದ್ದಾಟದ ನಡುವೆಯೇ ಉಪಮಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ‘ಕೊಟ್ಟ ಮಾತು ಉಳಿಸಿಕೊಳ್ಳುವುದೇ ದೊಡ್ಡ ಶಕ್ತಿ’ ಎಂಬ ಪೋಸ್ಟ್ ಕುತೂಹಲ ಮೂಡಿಸಿದೆ.
ಜಗತ್ತಿನ ಅತಿದೊಡ್ಡ ಶಕ್ತಿ ಎಂದರೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು.ನ್ಯಾಯಾಧೀಶರಾಗಲಿ, ಅಧ್ಯಕ್ಷರಾಗಲಿ, ನಾನಾಗಲಿ, ಬೇರೆ ಯಾರೇ ಆಗಿರಲಿ ಎಲ್ಲರೂ ನುಡಿದಂತೆ ನಡೆಯಬೇಕು. ಮಾತು ಉಳಿಸಿಕೊಳ್ಳುವುದು ಮುಖ್ಯ’ ಎಂದು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
ಇನ್ನೂ, ಡಿಕೆಶಿ ಸದ್ಯ ತಾವು ಯಾವುದೇ ಪೋಸ್ಟ್ ತಾವು ಮಾಡಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದು, ವಿವಾದಕ್ಕೆ ತೆರೆ ಎಳೆಯೋ ಪ್ರಯತ್ನ ಮಾಡಿದ್ದಾರೆ.
ಇನ್ನೂ,ರಾಜ್ಯ ಸರ್ಕಾರ ಎರಡೂವರೆ ವರ್ಷ ಪೂರೈಸುತ್ತಿದ್ದಂತೆ ಅಧಿಕಾರ ಹಸ್ತಾಂತರ ಮತ್ತು ಸಂಪುಟ ಪುನರ್ ರಚನೆ ಚರ್ಚೆ ಮುನ್ನೆಲೆಗೆ ಬಂದಿದೆ. ಸಿದ್ದರಾಮಯ್ಯ ಮತ್ತು ಡಿಕೆಶಿ ಬಣಗಳ ನಡುವೆ ಜಟಾಪಟಿ ಜೋರಾಗಿದ್ದು, ವರಿಷ್ಠರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತಿದ್ದಾರೆ. ಚಳಿಗಾಲದ ಅಧಿವೇಶನದ ಪ್ರಾರಂಭಕ್ಕೂ ಮೊದಲು ಗೊಂದಲ ಬಗೆಹರಿಸುವಂತೆ ಮನವಿ ಮಾಡಿದ್ದಾರೆ. ಸ್ವತಃ ರಾಹುಲ್ ಗಾಂಧಿ ಅವರೇ ಡಿಕೆಶಿ ಅವರಿಗೆ ಕರೆ ಮಾಡಿ ತಾಳ್ಮೆಯಿಂದ ಇರುವಂತೆ ಹೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದೆಲ್ಲದರ ಮಧ್ಯೆ ಡಿಸೆಂಬರ್ ಮೊದ್ಲ ವಾರದಲ್ಲಿ ದೊಡ್ಡ ರಾಜಕೀಯ ಹೈ ಡ್ರಾಮಾ ನಡೆಯೋ ಸಾಧ್ಯತೆ ಇದೆ ಎಂದು ರಾಜಕೀಯ ಪಂಡಿತರು ವಿಶ್ಲೇಷಣೆ ಮಾಡ್ತಿದ್ದಾರೆ.
