ರಾಜಕೀಯ ಎಂದರೆ ಇತ್ತೀಚಿನ ದಿನಗಳಲ್ಲಿ ಟೀಕೆ ಟಿಪ್ಪಣಿ, ಆರೋಪ ಪ್ರತ್ಯಾರೋಪಗಳೇ ಹೆಚ್ಚಾಗಿರುವುದು ಬೇಸರ ತಂದಿದೆ. ಕ್ಲೀನ್ ಇಮೇಜ್ ಪಾಲಿಟಿಕ್ಸ್‌ಗೆ ಯದುವೀರ್ ಪ್ರಯತ್ನ ಮಾಡಿದ್ದು, ಯಾರ ಬಗ್ಗೆಯೂ ಮಾತನಾಡದೇ ಅದನ್ನು ಸಾಬೀತುಪಡಿಸಿದ್ದಾರೆ. ಅವರಿಗೆ ಜಯ ಸಿಗಲಿ ಎಂದು ಹಾರೈಸುತ್ತೇನೆ.
-ಪ್ರಮೋದಾದೇವಿ ಒಡೆಯರ್, ರಾಜವಂಶಸ್ಥೆ.
==============
ಅಭ್ಯರ್ಥಿಯಾಗಿ ಮತದಾನ ಮಾಡಿರುವುದರಲ್ಲಿ ಏನು ವಿಶೇಷತೆ ಇಲ್ಲ. ಮತದಾನ ಪ್ರಕ್ರಿಯೆಯಲ್ಲಿ ಮೊದಲ ಬಾರಿ ಮತದಾನ ಮಾಡುವವರ ಪ್ರಾಮುಖ್ಯತೆ ಹೆಚ್ಚಿದ್ದು, ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಪ್ರತಿಯೊಬ್ಬರೂ ತಮ್ಮ ಹಕ್ಕು ಚಲಾಯಿಸಬೇಕು. ಕ್ಷೇತ್ರದಲ್ಲಿ ಉತ್ತಮ ವಾತಾವರಣ ಇದ್ದು, ಗೆಲ್ಲುವ ವಿಶ್ವಾಸವಿದೆ. ಅಂತರ ಎಷ್ಟು ಎಂಬುದನ್ನು ಮತದಾರರೇ ನಿರ್ಧರಿಸುತ್ತಾರೆ.
-ಯದುವೀರ್, ಬಿಜೆಪಿ ಅಭ್ಯರ್ಥಿ
=============
ದೇಶದ ಸದೃಢತೆಗಾಗಿ ಚುನಾವಣೆ ನಡೆದಿದ್ದು, ಮೋದಿಯವರು ದೇಶವನ್ನು ಭಾರತ ಕಟ್ಟುವ ಕೆಲಸ ಮಾಡಿದ್ದಾರೆ. ಈ ಬಾರಿ ರಾಜ್ಯದಲ್ಲಿ ೨೮ ಕ್ಕೆ ೨೮ ಸ್ಥಾನಗಳನ್ನು ಗೆಲ್ಲುತ್ತೇವೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಸಾಕಷ್ಟು ಕೆಲಸ ಮಾಡಿದ್ದಾರೆ. ನೂರು ವರ್ಷವಾದರೂ ಅವರ ಕೆಲಸಗಳನ್ನು ಈಗಲೂ ನೆನೆಯುತ್ತಾರೆ. ಈ ಬಾರಿ ಅವರ ವಂಶಸ್ಥರೇ ಚುನಾವಣೆಗೆ ನಿಂತಿರುವುದರಿಂದ ಗೆಲ್ಲುತ್ತೇವೆ.
-ಪ್ರತಾಪಸಿಂಹ, ಸಂಸದ
==============
ಜಿಲ್ಲೆಯಲ್ಲಿ ಯಾವುದೇ ಲೋಪದೋಷವಿಲ್ಲದೆ ಶಾಂತಿಯುತವಾಗಿ ಮತದಾನ ಆಗಿದೆ. ಸ್ವೀಪ್ ಸಮಿತಿ ಕಡ್ಡಾಯ ಮತದಾನದ ಬಗ್ಗೆ ಜಾಗೃತಿ ಮೂಡಿಸಿದ್ದರ ಪರಿಣಾಮ ಹೆಚ್ಚಿನ ಮತದಾನವಾಗಿದೆ. ಸ್ಟ್ರಾಂಗ್ ರೂಮ್‌ನಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.
-ಡಾ.ಕೆ.ವಿ.ರಾಜೇಂದ್ರ, ಜಿಲ್ಲಾಧಿಕಾರಿ
=================
ದೇಶದ ಜನರಿಗೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶವಿದ್ದು, ಇದರಿಂದ ಕಾಂಗ್ರೆಸ್‌ಗೆ ಅನುಕೂಲ ಆಗಲಿದೆ. ಈ ಬಾರಿ ಮತದಾನದ ಪ್ರಮಾಣ ಹೆಚ್ಚಾಗಿರುವುದು ಸಹ ಕಾಂಗ್ರೆಸ್‌ಗೆ ಅನುಕೂಲವಾಗಲಿದೆ. ಗ್ಯಾರಂಟಿ ಯೋಜನೆಗಳು ನೆರವಿಗೆ ಬರಲಿದ್ದು, ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತೇನೆ.
-ಎಂ.ಲಕ್ಷ್ಮಣ್, ಕಾಂಗ್ರೆಸ್ ಅಭ್ಯರ್ಥಿ
=================
