PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೂರು ದಿನಗಳಿಂದ ಕಾಲುವೆಯಲ್ಲಿ ಸಿಲುಕಿರುವ ಕಾಡಾನೆ ; ಅರಣ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮಂಡ್ಯ > ಮೂರು ದಿನಗಳಿಂದ ಕಾಲುವೆಯಲ್ಲಿ ಸಿಲುಕಿರುವ ಕಾಡಾನೆ ; ಅರಣ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ!
ಮಂಡ್ಯಮುಖಪುಟ

ಮೂರು ದಿನಗಳಿಂದ ಕಾಲುವೆಯಲ್ಲಿ ಸಿಲುಕಿರುವ ಕಾಡಾನೆ ; ಅರಣ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ!

Prathinidhi News
Last updated: November 18, 2025 11:49 am
Prathinidhi News
Published November 18, 2025
Share
SHARE

ಮಂಡ್ಯ, ನವೆಂಬರ್‌ 18, 2025 : ಖಾಸಗಿ ವಿದ್ಯುತ್ ಉತ್ಪಾದನಾ ಕೇಂದ್ರದ ಆಳವಾದ ಕಾಲುವೆಗೆ ಬಿದ್ದ ಕಾಡಾನೆಯೊಂದು ಮೂರು ದಿನಗಳಿಂದ ಮೇಲೇರಲಾಗದೆ ಪರಿತಪಿಸುತ್ತಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಬ್ಲಫ್ ಬಳಿ ನಡೆದಿದೆ. ಈ ವಿಚಾರ ತಿಳಿದಿದ್ದರೂ, ಆನೆಯನ್ನು ರಕ್ಷಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 ಮಳವಳ್ಳಿ ತಾಲ್ಲೂಕಿನ ಬ್ಲಫ್ ಬಳಿ ಇರುವ ಖಾಸಗಿ ವಿದ್ಯುತ್ ಉತ್ಪಾದನಾ ಕೇಂದ್ರದ ಕಾಲುವೆಯಲ್ಲಿ ಕಳೆದ ಶನಿವಾರ ರಾತ್ರಿ ಕಾಡಾನೆ ಕಾಲುವೆಗೆ ಬಿದ್ದಿದೆ ಎನ್ನಲಾಗಿದೆ. ಸುಮಾರು 20 ಅಡಿ ಆಳದ ಈ ಕಾಲುವೆಯಿಂದ ಮೇಲೆ ಬರಲಾಗದೆ ಆನೆ ಪರದಾಡುತ್ತಿದೆ. ಆಹಾರವಿಲ್ಲದೆ ಜೀವ ಭಯದಲ್ಲಿ ಓಡಾಡುತ್ತಿದೆ.

ಕಾಡಾನೆ ಕಾಲುವೆಗೆ ಬಿದ್ದಿರುವ ವಿಚಾರವನ್ನು ವಿದ್ಯುತ್ ಉತ್ಪಾದನಾ ಕೇಂದ್ರದ ಸಿಬ್ಬಂದಿಗಳು ಅರಣ್ಯ ಇಲಾಖೆಗೆ ಕೂಡಲೇ ತಿಳಿಸಿದ್ದರು. ಆದರೆ, ಮಾಹಿತಿ ತಿಳಿದಿದ್ದರೂ ಅರಣ್ಯ ಇಲಾಖೆ ಸಿಬ್ಬಂದಿಗಳು ಆನೆಯನ್ನು ಮೇಲೆತ್ತುವ ಕಾರ್ಯವನ್ನು ಮಾಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮೂರು ದಿನಗಳ ಕಾಲ ಆನೆ ಸಂಕಷ್ಟದಲ್ಲಿ ಇರುವ ಬಗ್ಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ನಂತರ, ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.

ಪ್ರಸ್ತುತ, ಸುಮಾರು 20 ಅಡಿ ಆಳದ ಕಾಲುವೆಯಲ್ಲಿ ಸಿಲುಕಿರುವ ಕಾಡಾನೆಯನ್ನು ಸುರಕ್ಷಿತವಾಗಿ ಮೇಲೆತ್ತಲು ಅರಣ್ಯ ಇಲಾಖೆ ಸಿಬ್ಬಂದಿಗಳ ತಂಡ ಕಾರ್ಯಾಚರಣೆಯನ್ನು ಮುಂದುವರಿಸಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟ

ಶಿಕ್ಷಣ ಇಲಾಖೆ ಮಹತ್ವದ ತೀರ್ಮಾನ : SSLC ಟಾಪರ್‌ಗಳಿಗೆ ಲ್ಯಾಪ್ ಟಾಪ್ ಬದಲಿಗೆ ನಗದು ಬಹುಮಾನ ನೀಡಲು ಆದೇಶ

January 24, 2026
ಮುಖಪುಟಮೈಸೂರು ಗ್ರಾಮಾಂತರ

ತಿರುಮಕೂಡಲು ನರಸೀಪುರದಲ್ಲಿ ವೈಕುಂಠ ಏಕಾದಶಿ ಸಡಗರ: ಗುಂಜಾನರಸಿಂಹ ಸ್ವಾಮಿ ದರ್ಶನಕ್ಕೆ ಹರಿದುಬಂದ ಭಕ್ತಸಾಗರ

December 30, 2025
ಮುಖಪುಟಮೈಸೂರು ನಗರರಾಜಕೀಯ

ಮೈಸೂರಿನಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನ: ಫೆ. 18ರಿಂದ ನಿಖಿಲ್ ಕುಮಾರಸ್ವಾಮಿ ಅಬ್ಬರದ ಪ್ರವಾಸ

February 16, 2026
ಬೆಂಗಳೂರುಮುಖಪುಟ

ಮಹಿಳಾ ಉದ್ಯೋಗಿಗಳಿಗೆ ವೇತನಸಹಿತ ಮಾಸಿಕ ಋತುಚಕ್ರದ ಒಂದು ರಜೆ ; ಕಾರ್ಮಿಕ ಇಲಾಖೆ ಕಂಡೀಷನ್ ಏನು..?

November 13, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?