ಮೈಸೂರು: ಇಂದು ಮೈಸೂರು ನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಯಾವುದೇ ಮೆರವಣಿಗೆ, ರ್ಯಾಲಿಗಳಿಗೆ ಅವಕಾಶ ಇಲ್ಲ. ಚಾಮುಂಡಿ ಬೆಟ್ಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಟೌನ್ ಹಾಲ್ ಬಳಿ ವೇದಿಕೆ ಕಾರ್ಯಕ್ರಮಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಆಯೋಜಕರಿಗೆ ಎಲ್ಲಾ ನಿರ್ಬಂಧಗಳ ಬಗ್ಗೆ ಮಾಹಿತಿ ನೀಡಿದ್ದೇವೆ. ಸುಮಾರು 7 ಸಾವಿರ ಜನಸೇರುತ್ತಾರೆ ಎಂದು ಆಯೋಜಕರು ಹೇಳಿದ್ದಾರೆ. ಅದಕ್ಕೆ ಬೇಕಾದ ಪೊಲೀಸರನ್ನು ನಿಯೋಜನೆ ಮಾಡಿದ್ದೇವೆ. ಬೇರೆ ಬೇರೆ ಜಿಲ್ಲೆಗಳಿಂದಲೂ ಜನರು ಬರುತ್ತಿದ್ದಾರೆ. ಬೈಕ್ ರ್ಯಾಲಿ ಮಾಡಲು ಅವಕಾಶ ಇಲ್ಲ. ಆ ರೀತಿ ಬೈಕ್ ರ್ಯಾಲಿ ಮಾಡಿದರೆ ಕ್ರಮ ಕೈಗೊಳ್ಳಲಾಗವುದು ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹೇಳಿದ್ದಾರೆ.
