PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಖರ್ಚಿಗೆ ಹಣ ನೀಡದ್ದಕ್ಕೆ ಮಂಗಳಮುಖಿಯರ ಮೇಲೆ ತಲ್ವಾರ್‌ನಿಂದ ಭೀಕರ ಹಲ್ಲೆ; ಓರ್ವನಿಗೆ ಗಂಭೀರ ಗಾಯ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಖರ್ಚಿಗೆ ಹಣ ನೀಡದ್ದಕ್ಕೆ ಮಂಗಳಮುಖಿಯರ ಮೇಲೆ ತಲ್ವಾರ್‌ನಿಂದ ಭೀಕರ ಹಲ್ಲೆ; ಓರ್ವನಿಗೆ ಗಂಭೀರ ಗಾಯ
ಮುಖಪುಟಮೈಸೂರು ನಗರ

ಖರ್ಚಿಗೆ ಹಣ ನೀಡದ್ದಕ್ಕೆ ಮಂಗಳಮುಖಿಯರ ಮೇಲೆ ತಲ್ವಾರ್‌ನಿಂದ ಭೀಕರ ಹಲ್ಲೆ; ಓರ್ವನಿಗೆ ಗಂಭೀರ ಗಾಯ

Prathinidhi News
Last updated: March 31, 2026 4:44 pm
Prathinidhi News
Published March 31, 2026
Share
SHARE

ಮೈಸೂರು, ಮಾರ್ಚ್‌ 31, 2026 : ಖರ್ಚಿಗೆ ಹಣ ನೀಡಲು ನಿರಾಕರಿಸಿದ ಕಾರಣಕ್ಕೆ ಮಂಗಳಮುಖಿಯರ ಮೇಲೆ ಯುವಕರ ಗುಂಪೊಂದು ತಲ್ವಾರ್ ಹಾಗೂ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಸಾತಗಳ್ಳಿ ಸಮೀಪದ ಅಮೃತ ಬಡಾವಣೆಯಲ್ಲಿ ಕಳೆದ ಭಾನುವಾರ ರಾತ್ರಿ ಈ ಅಮಾನವೀಯ ಕೃತ್ಯ ಸಂಭವಿಸಿದೆ. ಈ ಬಡಾವಣೆಯ ನಿವಾಸಿಯಾದ ಆನಮ್ ಎಂಬ ಮಂಗಳಮುಖಿಯ ಬಳಿ ಬಂದ ಕೆಲವು ಯುವಕರು ತಮ್ಮ ವೈಯಕ್ತಿಕ ಖರ್ಚಿಗೆ ಹಣ ನೀಡುವಂತೆ ಪೀಡಿಸಿದ್ದಾರೆ. ಇದಕ್ಕೆ ಆನಮ್ ನಿರಾಕರಿಸಿದಾಗ ಆಕ್ರೋಶಗೊಂಡ ಯುವಕರು ಗಲಾಟೆ ಆರಂಭಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಆನಮ್ ಅವರು ನೆರವಿಗಾಗಿ ತಮ್ಮ ಸ್ನೇಹಿತೆ, ಗೌಸಿಯಾನಗರದ ನಿವಾಸಿ ಪಾರಿ ಎಂಬುವವರನ್ನು ಸ್ಥಳಕ್ಕೆ ಕರೆಸಿಕೊಂಡಿದ್ದಾರೆ.

ಪಾರಿ ಅವರು ಸ್ಥಳಕ್ಕೆ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪು ಅವರ ಮೇಲೆ ತಲ್ವಾರ್ ಹಾಗೂ ಚಾಕುವಿನಿಂದ ಏಕಾಏಕಿ ದಾಳಿ ನಡೆಸಿದೆ. ಈ ಭೀಕರ ಹಲ್ಲೆಯ ವೇಳೆ ಪಾರಿ ಅವರ ಮುಖಕ್ಕೆ ಚಾಕುವಿನಿಂದ ಇರಿದಿದ್ದು, ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೃಷ್ಟವಶಾತ್ ಪಾರಿ ಮತ್ತು ಆನಮ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

- ಜಾಹೀರಾತು -

ಘಟನೆಗೆ ಸಂಬಂಧಿಸಿದಂತೆ ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿ ತಲೆಮರೆಸಿಕೊಂಡಿರುವ ಯುವಕರಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಮೈಸೂರಿನಂತಹ ಸಾಂಸ್ಕೃತಿಕ ನಗರಿಯ ಜನವಸತಿ ಪ್ರದೇಶದಲ್ಲಿ ಇಂತಹ ಘಟನೆ ನಡೆದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಕ್ರೈಂ ಸುದ್ದಿಗಳುಮುಖಪುಟ

ವಿಜಯಪುರದಲ್ಲಿ ಅಮಾನವೀಯ ಘಟನೆ : ಗಂಡು ಮಗುವಿಗಾಗಿ ಪತ್ನಿಯ ನೆತ್ತಿ ಕೂದಲು ಕತ್ತರಿಸಿದ ಪತಿ !

December 8, 2025
ಕ್ರೈಂ ಸುದ್ದಿಗಳುಮುಖಪುಟ

ವ್ಯಾಪಾರಿಯ ಬಳಿ ಚಿನ್ನ ದರೋಡೆ – ಇಬ್ಬರು ಪಿಎಸ್‍ಐ ಸೇರಿ ನಾಲ್ವರು ಅರೆಸ್ಟ್ !

November 25, 2025
ಮುಖಪುಟಮೈಸೂರು ಗ್ರಾಮಾಂತರ

ಮುಡುಕುತೊರೆ ಜಾತ್ರಾ ಮಹೋತ್ಸವ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

December 30, 2025
ಮುಖಪುಟಮೈಸೂರು ನಗರರಾಜಕೀಯ

ಮೈಸೂರು : “ಬೇಕೇ ಬೇಕು ತನ್ವೀರ್ ಸೇಠ್ ಗೆ ಮಂತ್ರಿ ಸ್ಥಾನ ಬೇಕು” ಸಚಿವ ಸ್ಥಾನಕ್ಕಾಗಿ ಪೋಸ್ಟ್ ಕಾರ್ಡ್ ಚಳುವಳಿ !

November 8, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?