PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮಹಾರಾಜ ಕಾಲೇಜು ಮೈದಾನದಲ್ಲಿ ಸಹಸ್ರಾರು ಭಕ್ತರಿಂದ ಸಾಮೂಹಿಕ ಹನುಮಾನ್ ಚಾಲೀಸಾ ಪಾರಾಯಣ ಸಂಪನ್ನ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮಹಾರಾಜ ಕಾಲೇಜು ಮೈದಾನದಲ್ಲಿ ಸಹಸ್ರಾರು ಭಕ್ತರಿಂದ ಸಾಮೂಹಿಕ ಹನುಮಾನ್ ಚಾಲೀಸಾ ಪಾರಾಯಣ ಸಂಪನ್ನ
ಮುಖಪುಟಮೈಸೂರು ನಗರ

ಮಹಾರಾಜ ಕಾಲೇಜು ಮೈದಾನದಲ್ಲಿ ಸಹಸ್ರಾರು ಭಕ್ತರಿಂದ ಸಾಮೂಹಿಕ ಹನುಮಾನ್ ಚಾಲೀಸಾ ಪಾರಾಯಣ ಸಂಪನ್ನ

Prathinidhi News
Last updated: February 14, 2026 11:07 am
Prathinidhi News
Published February 14, 2026
Share
SHARE

ಮೈಸೂರು, ಫೆಬ್ರವರಿ 14, 2026 : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಅತ್ಯಂತ ಭಕ್ತಿಭಾವದಿಂದ ಸಾಮೂಹಿಕ ಶ್ರೀ ಹನುಮಾನ್ ಚಾಲೀಸಾ ಪಾರಾಯಣ ಮಹಾಯಜ್ಞವು ಯಶಸ್ವಿಯಾಗಿ ಸಂಪನ್ನಗೊಂಡಿತು. ನಗರದ ಐತಿಹಾಸಿಕ ಮಹಾರಾಜ ಕಾಲೇಜು ಮೈದಾನದಲ್ಲಿ ಅವಧೂತ ದತ್ತ ಪೀಠದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ವತಿಯಿಂದ ಆಯೋಜಿಸಲಾಗಿದ್ದ ಈ ಬೃಹತ್ ಕಾರ್ಯಕ್ರಮವು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ನೆರವೇರಿತು.

ಈ ಪವಿತ್ರ ಪಾರಾಯಣಕ್ಕಾಗಿ ಮೈದಾನದಲ್ಲಿ ಅತ್ಯಂತ ಭವ್ಯವಾದ ವೇದಿಕೆಯನ್ನು ನಿರ್ಮಿಸಲಾಗಿತ್ತು. ಲೋಕ ಕಲ್ಯಾಣದ ಸಂಕಲ್ಪದೊಂದಿಗೆ ವೇದಿಕೆಯ ಎಡಭಾಗದಲ್ಲಿ ವಿಶೇಷ ಮಹಾಯಜ್ಞವನ್ನು ಆಯೋಜಿಸಲಾಗಿದ್ದು, ಸಾವಿರಾರು ಭಕ್ತರು ಏಕಕಾಲದಲ್ಲಿ ಹನುಮಾನ್ ಚಾಲೀಸಾವನ್ನು ಪಠಿಸುವ ಮೂಲಕ ಮೈದಾನದಲ್ಲಿ ಆಧ್ಯಾತ್ಮಿಕ ಅಲೆ ಎಬ್ಬಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಭಕ್ತಾದಿಗಳಿಗಾಗಿ ಸುಮಾರು 75 ಸಾವಿರ ಆಸನಗಳ ವ್ಯವಸ್ಥೆ, ಕುಡಿಯುವ ನೀರು ಹಾಗೂ ತಾತ್ಕಾಲಿಕ ಶೌಚಾಲಯ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಅಚ್ಚುಕಟ್ಟಾಗಿ ಕಲ್ಪಿಸಲಾಗಿತ್ತು.

ವೇದಿಕೆಯ ಮೇಲೆ ಆಸೀನರಾಗಿದ್ದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ಕಿಕ್ಕಿರಿದು ನೆರೆದಿದ್ದ ಭಕ್ತ ಸಮೂಹಕ್ಕೆ ಆಶೀರ್ವಚನ ಹಾಗೂ ಪ್ರವಚನ ನೀಡಿದರು. ಕಾರ್ಯಕ್ರಮದಲ್ಲಿ ಗಣ್ಯರ ದಂಡೇ ನೆರೆದಿತ್ತು. ಶಾಸಕರಾದ ಜಿ.ಟಿ. ದೇವೇಗೌಡ, ಹರೀಶ್ ಗೌಡ, ಶ್ರೀವತ್ಸ, ಬಿಜೆಪಿ ನಗರಾಧ್ಯಕ್ಷ ಎಲ್. ನಾಗೇಂದ್ರ, ಮಾಜಿ ಶಾಸಕ ಎಸ್.ಎ. ರಾಮದಾಸ್ ಹಾಗೂ ಸ್ಯಾಂಡಲ್‌ವುಡ್ ತಾರಾ ಜೋಡಿ ನಟ ವಸಿಷ್ಠ ಸಿಂಹ ಮತ್ತು ನಟಿ ಹರಿಪ್ರಿಯಾ ಸೇರಿದಂತೆ ಹಲವಾರು ಪ್ರಮುಖರು ಈ ಧಾರ್ಮಿಕ ಸಮಾರಂಭಕ್ಕೆ ಸಾಕ್ಷಿಯಾದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಮೈಸೂರು: ಹುಬ್ಬಳ್ಳಿಯಲ್ಲಿ ಮಹಿಳೆಯ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ

January 12, 2026
ಮುಖಪುಟಮೈಸೂರು ನಗರರಾಜಕೀಯ

ಏಕತೆಗಾಗಿ ನಡಿಗೆ : ಸರ್ದಾರ್ ಪಟೇಲ್ 150ನೇ ಜಯಂತಿ ಅಂಗವಾಗಿ ಮೈಸೂರಿನಲ್ಲಿ ವಾಕಥಾನ್

November 15, 2025
ನಂಜನಗೂಡುಮುಖಪುಟ

ನಂಜನಗೂಡು: ಜಾಗದ ವಿಚಾರವಾಗಿ ಅಮಿತಾಬ್ ಕುಟುಂಬಕ್ಕೆ ಕಾಂಗ್ರೆಸ್ ಮುಖಂಡನಿಂದ ಜೀವ ಬೆದರಿಕೆ ಆರೋಪ

January 21, 2026
ನವದೆಹಲಿಬೆಂಗಳೂರುಮುಖಪುಟ

ಆಧಾರ್ ಹಾಗೂ ಪ್ಯಾನ್ ಲಿಂಕ್ ಗೆ ಡಿಸೆಂಬರ್ 31 ಡೆಡ್ ಲೈನ್ : ಲಿಂಕ್ ಆಗದ ಪ್ಯಾನ್ ಗಳು ಜನವರಿ 1 ರಿಂದ ಅನೂರ್ಜಿತ

November 6, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?