PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಹೊಸ ಬಡಾವಣೆಗಳ ನಿರ್ಮಾಣಕ್ಕೆ ಮುಂದಾದ ಎಂಡಿಎ ; ಎರಡು ದಶಕಗಳಿಂದ ಚರ್ಚೆಯಲ್ಲಿದ್ದ ಬೊಮ್ಮೇನಹಳ್ಳಿ ಹೊಸ ಬಡಾವಣೆ ನಿರ್ಮಾಣಕ್ಕೆ ಮಹತ್ವದ ತೀರ್ಮಾನ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಹೊಸ ಬಡಾವಣೆಗಳ ನಿರ್ಮಾಣಕ್ಕೆ ಮುಂದಾದ ಎಂಡಿಎ ; ಎರಡು ದಶಕಗಳಿಂದ ಚರ್ಚೆಯಲ್ಲಿದ್ದ ಬೊಮ್ಮೇನಹಳ್ಳಿ ಹೊಸ ಬಡಾವಣೆ ನಿರ್ಮಾಣಕ್ಕೆ ಮಹತ್ವದ ತೀರ್ಮಾನ
ಮುಖಪುಟಮೈಸೂರು ನಗರ

ಹೊಸ ಬಡಾವಣೆಗಳ ನಿರ್ಮಾಣಕ್ಕೆ ಮುಂದಾದ ಎಂಡಿಎ ; ಎರಡು ದಶಕಗಳಿಂದ ಚರ್ಚೆಯಲ್ಲಿದ್ದ ಬೊಮ್ಮೇನಹಳ್ಳಿ ಹೊಸ ಬಡಾವಣೆ ನಿರ್ಮಾಣಕ್ಕೆ ಮಹತ್ವದ ತೀರ್ಮಾನ

Prathinidhi News
Last updated: December 23, 2025 1:15 pm
Prathinidhi News
Published December 23, 2025
Share
SHARE

ಮೈಸೂರು, ಡಿಸೆಂಬರ್‌ 23, 2025 : ಮೈಸೂರು ಅಭಿವೃದ್ಧಿ ಪ್ರಾಧಿಕಾರವು ಎರಡು ದಶಕಗಳಿಂದ ಚರ್ಚೆಯಲ್ಲಿದ್ದ ಬೊಮ್ಮೇನಹಳ್ಳಿ ಹೊಸ ಬಡಾವಣೆ ನಿರ್ಮಾಣಕ್ಕೆ ಮಹತ್ವದ ತೀರ್ಮಾನ ಕೈಗೊಂಡಿದ್ದು,  ಇಲವಾಲ ಹೋಬಳಿಯ 2113.24 ಎಕರೆ ಜಾಗ ಗುರುತಿಸಲಾಗಿದೆ. ಭೂಮಾಲೀಕರ ಒಪ್ಪಿಗೆ ಬಳಿಕ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಹಾಗೂ ಎಂಡಿಎ ಆಯುಕ್ತ ಕೆ.ಆರ್.ರಕ್ಷಿತ್‌ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹೊಸ ಬಡಾವಣೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಎಂಡಿಎ) ನಗರದಲ್ಲಿ ಹೊಸ ಬಡಾವಣೆಗಳ ನಿರ್ಮಾಣಕ್ಕೆ ಮುಂದಾಗಿದ್ದು, ಸೋಮವಾರ ನಡೆದ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ನಿರ್ಧಾರಕ್ಕೆ ಒಪ್ಪಿಗೆ ದೊರೆತಿದೆ. ಬಡಾವಣೆ ನಿರ್ಮಾಣಕ್ಕೆ ಪ್ರತ್ಯೇಕ ಕಚೇರಿ, ಕ್ಷಿಪ್ರ ಕಾರ್ಯಪಡೆ ರಚನೆಗೂ ಒಪ್ಪಿಗೆ ನೀಡಲಾಗಿದೆ.ಮೈಸೂರು ತಾಲೂಕಿನ ಇಲವಾಲ ಹೋಬಳಿಯ ಬೊಮ್ಮೇನಹಳ್ಳಿ, ನಾಗವಾಲ, ಕಮ್ಮರಹಳ್ಳಿ, ದೊಡ್ಡಮಾರಗೌಡನಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ವಿವಿಧ ಸರ್ವೆ ನಂಬರ್‌ಗಳನ್ನು ಗುರುತಿಸಿ ಹೊಸ ಬಡಾವಣೆ ಮಾಡಲಾಗುತ್ತದೆ. ಈಗಾಗಲೇ ನಾಗವಾಲ 429.13, ಬೊಮ್ಮೇನಹಳ್ಳಿ- 766.33, ದೊಡ್ಡಮಾರಗೌಡನಹಳ್ಳಿ-326.38, ಕಮ್ಮರಹಳ್ಳಿ-336.20 ಎಕರೆ ಸೇರಿದಂತೆ 2113.24 ಎಕರೆಯನ್ನು ಗುರುತಿಸಲಾಗಿದೆ.

ಯೋಜನೆಗೆ ಜಮೀನು ನೀಡುವ ಬಗ್ಗೆ ಆಸಕ್ತ ಭೂಮಾಲೀಕರಿಂದ ಒಪ್ಪಿಗೆ ಪತ್ರವನ್ನು ಪಡೆದು ತದನಂತರ, ಯೋಜನೆಗೆ ಅನುಮೋದನೆ ಪಡೆಯಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಯಿತು.ಬೊಮ್ಮೇನಹಳ್ಳಿ ಬಡಾವಣೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಯೋಜನಾ ಕಚೇರಿಯನ್ನು ತೆರೆಯಲಾಗುತ್ತದೆ. ವಿಜಯನಗರದಲ್ಲಿರುವ ಎಂಡಿಎ ಆಸ್ತಿಯಲ್ಲಿ ಪ್ರತ್ಯೇಕವಾಗಿ ಕಚೇರಿಯನ್ನು ತೆರೆದು ಯೋಜನೆಗೆ ಬೇಕಾಗುವ ಎಲ್ಲ ಪ್ರಕ್ರಿಯೆಗಳನ್ನು ನಡೆಸಲು ಸುಲಭವಾಗುವಂತೆ ವ್ಯವಸ್ಥೆ ಮಾಡಲಾಗುತ್ತದೆ.ಶಿಕ್ಷಣ, ಸಾಮಾಜಿಕ, ಆರೋಗ್ಯ ಸೇರಿದಂತೆ ಮತ್ತಿತರ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಖಾಸಗಿ ಸಂಸ್ಥೆಗಳಿಗೆ 300 ನಾಗರಿಕ ನಿವೇಶನಗಳನ್ನು ಹಂಚಿಕೆ ಮಾಡಲು ತೀರ್ಮಾನ ಮಾಡಲಾಯಿತು.

ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸುವ ಜತೆಗೆ, ಸಿಎ ನಿವೇಶನ ಮಂಜೂರು ಮಾಡಲು ವಿಧಿಸಲಾಗುವ ಷರತ್ತುಗಳನ್ನು ಪ್ರಕಟಿಸಲಾಗುತ್ತದೆ. ಈಗಾಗಲೇ ಹಲವು ವರ್ಷಗಳಿಂದ ಸಿಎ ನಿವೇಶನಕ್ಕೆ ಅರ್ಜಿ ಸಲ್ಲಿಸಿರುವ ಸಂಘ ಸಂಸ್ಥೆಗಳಿಗೆ ಹಿರಿತನದ ಆಧಾರದ ಮೇಲೆ ಮಂಜೂರು ಮಾಡಲಾಗುತ್ತದೆ.

- ಜಾಹೀರಾತು -

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಸ್ನೇಹಿತನ ಪುತ್ರನ ವಿವಾಹದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ ; ವಧು-ವರರಿಗೆ ಆಶೀರ್ವಾದ

November 3, 2025
ಮುಖಪುಟ

ಸಾಲುಮರದ ತಿಮ್ಮಕ್ಕ ನಿಧನ ; ಸಂತಾಪ ಸಲ್ಲಿಸಿದ ಪರಿಸರ ಪ್ರೇಮಿಗಳು

November 14, 2025
ಮುಖಪುಟಮೈಸೂರು ನಗರ

ಕ್ರಿಸ್‌ಮಸ್‌ ಹಾಗೂ ಹೊಸ ವರ್ಷದ ಸಂಭ್ರಮ -ತಲಕಾಡಿನತ್ತ ಹರಿದುಬಂದ ಪ್ರವಾಸಿಗರು

December 29, 2025
ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಮೈಸೂರು: ಅಪಘಾತಕ್ಕೀಡಾದ ವ್ಯಕ್ತಿಯ ಮೊಬೈಲ್‌ನಿಂದ ₹80,000 ಹಣ ಲೂಟಿ; ಇಬ್ಬರು ಕಿರಾತಕರ ಬಂಧನ

December 23, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?