ಬೆಂಗಳೂರು, ನವೆಂಬರ್ 12, 2025 : ಕರ್ನಾಟಕದಲ್ಲಿ ನವೆಂಬರ್ ಆರಂಭದಿಂದಲೂ ವಾತಾವರಣ ಬದಲಾವಣೆ ಆಗುತ್ತಲೇ ಇದೆ. ಮುಂದಿನ 2 ದಿನ ಚಳಿ ಜತೆ ಮಳೆಯೂ ಸುರಿಯಲಿದೆ.ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನವೆಂಬರ್ 15ರವರೆಗೂ ಮಳೆ ರಗಳೆ ಇರಲಿದೆ.
ಎಲ್ಲೆಲ್ಲಿ ಮಳೆ..?
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು,ಚಾಮರಾಜನಗರ,ಚಿಕ್ಕಬಳ್ಳಾಪುರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.
ಇನ್ನು, ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಸಂಪೂರ್ಣವಾಗಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನವೆಂಬರ್ ಮೊದಲ ವಾರದಲ್ಲಿಯೇ ಕರ್ನಾಟಕದಲ್ಲಿ ಚಳಿಗಾಲ ಆರಂಭವಾಗಿದೆ. ಈ ಬಾರಿ ಮಳೆ ಸುದೀರ್ಘ ಕಾಲ ಮುಂದುವರಿದಿದ್ದು, ವಾಡಿಕೆಗಿಂತ ಚಳಿಗಾಲ ಸ್ಪಲ್ಪ ತಡವಾಗಿ ಶುರುವಾಗಿದೆ. ಬೆಂಗಳೂರು ನಗರ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಜಾನೆ ಮಂಜು ಬೀಳುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಮಂಜು, ಚಳಿಯ ಪ್ರಮಾಣ ಇನ್ನೂ ಹೆಚ್ಚಾಗಿದೆ. 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಂಜು ಹಾಗೂ ಚಳಿ ಜನರನ್ನು ನಡುಗಿಸುತ್ತಿದ್ದು, ಡಿಸೆಂಬರ್ ಮಧ್ಯ ಭಾಗದಲ್ಲಿ ಚಳಿ ಹೆಚ್ಚಾಗುವ ಸಾಧ್ಯತೆ ಇದೆ.
