ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ರಾಜ್ಯದಲ್ಲಿ ಬಿಸಿಲಿನಿಂದ ಕಂಗೆಟ್ಟ ಜನರಿಗೆ ಐಎಂಡಿ ಗುಡ್ ನ್ಯೂಸ್ ನೀಡಿದೆ. ನಾಳೆಯೂ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ತಿಳಿಸಿದೆ. ಅಲ್ಲದೇ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸದ್ಯ ಬೆಂಗಳೂರಲ್ಲಿ 36.7 ಡಿಗ್ರಿಯಷ್ಟು ತಾಪಮಾನ ಮುಂದುವರೆದಿದೆ. ಕಳೆದ ಒಂದು ವಾರದ ಅವಧಿಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.ಇದರ ನಡುವೆಯೂ ಬೆಂಗಳೂರಲ್ಲಿ ಇಂದು ಮಳೆಯಾಗುವ ಮುನ್ಸೂಚನೆ ನೀಡಿದೆ ಹವಾಮಾನ ಇಲಾಖೆ. ನಿನ್ನೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಧಾರವಾಡದಲ್ಲಿ ಭಾರೀ ಮಳೆಯಾಗಿದೆ. ಅದು ಆಲಿಕಲ್ ಸಮೇತ ಮಳೆ ಸುರಿದಿದೆ. ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದೆ. ಭಾರೀ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಇನ್ನು ವಿಜಯನಗರದ ಹೊಸಪೇಟೆಯ ಮರಿಯಮ್ಮನಹಳ್ಳಿ, ದೇವಲಾಪುರ ಸೇರಿದಂತೆ ನಾನಾ ಕಡೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಗಂಟೆಗೆ 30 ರಿಂದ 40 ಕಿಲೋ ಮೀಟರ್ ಗಾಳಿ ವೇಗವಾಗಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಜನ ಎಚ್ಚರದಿಂದ ಇರುವಂತೆ ತಿಳಿಸಿದೆ. ಇಂದು ಸಹ ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಹಾವೇರಿ, ಗದಗ, ಮಂಡ್ಯ, ರಾಯಚೂರು, ವಿಜಯನಗರ, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.